Hiring Reporter’s For more Information Contact Above Number 876 225 4007 . Program producer
Home / Breaking News / ಕಾಂಗ್ರೆಸ್ ಪಕ್ಷ ಅವಸಾನದ ಅಂಚಿನಲ್ಲಿದ್ದು, ಎಲ್ಲರೂ ಬಿಜೆಪಿಯನ್ನು ಸೇರ್ಪಡಿಯಾಗಿ : ಕೆಎಸ್ ಈಶ್ವರಪ್ಪ

ಕಾಂಗ್ರೆಸ್ ಪಕ್ಷ ಅವಸಾನದ ಅಂಚಿನಲ್ಲಿದ್ದು, ಎಲ್ಲರೂ ಬಿಜೆಪಿಯನ್ನು ಸೇರ್ಪಡಿಯಾಗಿ : ಕೆಎಸ್ ಈಶ್ವರಪ್ಪ

Spread the love

ಶಿವಮೊಗ್ಗ : ಕಾಂಗ್ರೆಸ್ ಪಕ್ಷ ಒಡೆದ ಕನ್ನಡಿಯಾಗಿದೆ. ಕಾಂಗ್ರೆಸ್ ಪಕ್ಷವನ್ನು ಒಟ್ಟಾಗಿಸಲು ಯಾರಿಂದಲೂ ಸಾದ್ಯವಿಲ್ಲ. ಕಾಂಗ್ರೆಸ್ ಪಕ್ಷ ಅವಸಾನದ ಅಂಚಿನಲ್ಲಿದ್ದು, ಎಲ್ಲರೂ ಬಿಜೆಪಿಯನ್ನು ಸೇರ್ಪಡಿ ಮಾಡಿ ಎಂಬುದಾಗಿ ಸಚಿವ ಕೆಎಸ್ ಈಶ್ವರಪ್ಪ ಹೇಳಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆಎಸ್ ಈಶ್ವರಪ್ಪ, ಅಣ್ಣಾಮಲೈ ಅಂತಹ ಪ್ರಾಮಾಣಿಕ ವ್ಯಕ್ತಿ ಬಿಜೆಪಿಗೆ ಸೇರಿದ್ದು ಸಂತಸ ತಂದಿದೆ. ಅವರಿಗೆ ನಮ್ಮ ಪಕ್ಷಕ್ಕೆ ಸ್ವಾಗತ ಎಂಬುದಾಗಿ ಹೇಳಿದ್ರು.

ನರೇಂದ್ರ ಮೋದಿಯಂತಹ ನಾಯಕತ್ವ ಬೇಕು ಎನ್ನುತ್ತಿರುವ ಕಾಲದಲ್ಲಿ ಕಾಂಗ್ರೆಸ್ ಒಡೆದ ಕನ್ನಡಿಯಾಗಿದೆ. ಚೂರು ಚೂರು ಆಗಿ ಹೋಗಿದೆ. ಅದನ್ನು ಯಾರೂ ಸರಿ ಮಾಡಲು ಸಾಧ್ಯವಿಲ್ಲ.

ಇಡೀ ದೇಶದ ಭಕ್ತರಿಗೆ ಕರೆ ನೀಡುತ್ತಿದ್ದೇನೆ. ಪ್ರತಿಯೊಬ್ಬರೂ ಬಂದು ಬಿಜೆಪಿಗೆ ಸೇರ್ಪಡೆಗೊಳ್ಳಿ. ಅಣ್ಣಾಮಲೈಯಂತಹ ಪ್ರಾಮಾಣಿಕ ವ್ಯಕ್ತಿಯೇ ಬಿಜೆಪಿ ಸೇರ್ಪಡೆಗೊಂಡಂತೆ ಎಲ್ಲರೂ ಸೇರಿಕೊಳ್ಳಿ. ಇಂದಲ್ಲಾ ನಾಳೆ ಕಾಂಗ್ರೆಸ್ ಮುಳುಗುವ ಹಡಗಾಗಿದೆ ಎಂಬುದಾಗಿ ಹೇಳಿದ್ರು.

Check Also

Featured Video Play Icon

ಕೇಂದ್ರ ರಾಜ್ಯ ಸರ್ಕಾರದ ವಿರುದ್ಧ ಜೆಡಿಎಸ್ ಕಾರ್ಯಕರ್ತರ ಅಸಮಾಧಾನ

Spread the love

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Hiring Reporter’s For more Information Contact Above Number 876 225 4007 . Program producer
error: Content is protected !!