Hiring Reporter’s For more Information Contact Above Number 876 225 4007 . Program producer
Home / Breaking News / ಮಾಸ್ಕ್ ಧರಿಸದವರಿಗೆ ಕೊರೊನಾ ತಪಾಸಣೆ, ದಂಡ : ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಕಾರ್ಯಾಚರಣೆ

ಮಾಸ್ಕ್ ಧರಿಸದವರಿಗೆ ಕೊರೊನಾ ತಪಾಸಣೆ, ದಂಡ : ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಕಾರ್ಯಾಚರಣೆ

Spread the love

ಧಾರವಾಡ: ಜಿಲ್ಲೆಯಲ್ಲಿ ಕೊರೊನಾ ನಿಯಂತ್ರಿಸಲು ಪ್ರತಿಯೊಬ್ಬ ಸಾರ್ವಜನಿಕರು ಮಾಸ್ಕ್ ಧರಿಸುವುದು, ಶಾರೀರಿಕ ಅಂತರ ಕಾಪಾಡಿಕೊಳ್ಳುವುದು, ಸಾಬೂನಿನಿಂದ ಕೈತೊಳೆಯುವುದು ಸೇರಿದಂತೆ ಮುಂತಾದ ಕೊರೊನಾ ತಡೆಗಟ್ಟುವ ಜಾಗೃತಿ ಮೂಡಿಸಲು ಜಿಲ್ಲಾಡಳಿತ, ಮಹಾನಗರ ಪಾಲಿಕೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಪೊಲೀಸ್ ಇಲಾಖೆಗಳು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರ ನೇತೃತ್ವದಲ್ಲಿ ಇಂದು ಬೆಳಿಗ್ಗೆ ನಗರದ ವಿವಿಧೆಡೆ ಮಾಸ್ಕ್ ಧರಿಸದವರಿಗೆ ದಂಡ, ಕೋವಿಡ್ ತಪಾಸಣೆಗೆ ಒಳಪಡಿಸುವ ಕಾರ್ಯಾಚರಣೆ ಪ್ರಾರಂಭವಾಯಿತು.

ಸಿಬಿಟಿ, ಅಕ್ಕಿಪೇಟೆ, ಸುಭಾಷ್ ರಸ್ತೆ, ಗಾಂಧಿಚೌಕ, ವಿವೇಕಾನಂದ ವೃತ್ತ, ಮಾರುಕಟ್ಟೆ ಮತ್ತಿತರ ಸ್ಥಳಗಳಲ್ಲಿ ಇಂದು ಬೆಳಿಗ್ಗೆ ಮಾಸ್ಕ್ ಧರಿಸದೇ ಸಂಚರಿಸುತ್ತಿದ್ದ ಸಾರ್ವಜನಿಕರನ್ನು ಗುರುತಿಸಿ ಕೋವಿಡ್ ತಪಾಸಣೆಗೆ ಒಳಪಡಿಸುವ ಕಾರ್ಯಾಚರಣೆಯಲ್ಲಿ ಸ್ವತ: ಜಿಲ್ಲಾಧಿಕಾರಿ ನಿತೇಶ್ ಕೆ. ಪಾಟೀಲ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ:ಬಿ.ಸಿ. ಸತೀಶ್, ಉಪವಿಭಾಗಾಧಿಕಾರಿ ಡಾ: ಗೋಪಾಲಕೃಷ್ಣ ಬಿ., ಮಹಾನಗರ ಪಾಲಿಕೆ ಆಯುಕ್ತ ಡಾ: ಸುರೇಶ್ ಇಟ್ನಾಳ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ: ಯಶವಂತ ಮದೀನಕರ ಮೊದಲಾದ ಹಿರಿಯ ಅಧಿಕಾರಿಗಳು ಭಾಗವಹಿಸಿ ಸಾರ್ವಜನಿಕರಿಗೆ ಮಾಸ್ಕ್ ಧರಿಸುವುದರ ಮಹತ್ವ ಮನವರಿಕೆ ಮಾಡಿಕೊಟ್ಟರು. ಹಾಗೂ ಮಾಸ್ಕ್ ಇಲ್ಲದೇ ಸಂಚರಿಸುತ್ತಿದ್ದ ವಾಹನ ಸವಾರರು, ಆಟೋ, ಮ್ಯಾಕ್ಸಿಕ್ಯಾಬ್ ಚಾಲಕರು, ಪ್ರಯಾಣಿಕರನ್ನು ಸಂಚಾರಿ ಸ್ವ್ಯಾಬ್ ಸಂಗ್ರಹಣಾ ಕೇಂದ್ರಕ್ಕೆ ಕರೆತಂದು ಕೋವಿಡ್ ತಪಾಸಣೆಗೆ ಒಳಪಡಿಸಲಾಯಿತು.

ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಮಾತನಾಡಿ, ಕೋವಿಡ್ ನಿಯಂತ್ರಣ ಜಾಗೃತಿಗಾಗಿ ಈ ಕ್ರಮ ಕೈಗೊಳ್ಳಲಾಗಿದೆ. ಪ್ರತಿದಿನ ಸುಮಾರು 500 ರಿಂದ 600 ಮಾಸ್ಕ್ ಧರಿಸದ ಜನರಿಗೆ ದಂಡ ವಿಧಿಸಲಾಗುತ್ತಿದೆ. ಇದುವರೆಗೆ ಸುಮಾರು 35 ಲಕ್ಷ ರೂ.ಗಳಿಗೂ ಅಧಿಕ ದಂಡ ಸಂಗ್ರಹವಾಗಿದೆ. ಕೊರೊನಾಗೆ ಲಸಿಕೆ ಕಂಡು ಹಿಡಿಯುವವರೆಗೂ ಮಾಸ್ಕ್ ಬಳಕೆಯೇ ಲಸಿಕೆ ಎಂದು ತಿಳಿದುಕೊಳ್ಳಬೇಕು. ಸರ್ಕಾರ ಮತ್ತು ಆರೋಗ್ಯ ಇಲಾಖೆಯ ಸೂಚನೆಗಳನ್ನು ಪಾಲಿಸಿ ಸಹಕರಿಸಬೇಕು. ಗ್ರಾಮೀಣ ಪ್ರದೇಶದಲ್ಲಿ ಜಾನುವಾರುಗಳಲ್ಲಿ ಕಂಡು ಬರುತ್ತಿರುವ ಕಾಲುಬಾಯಿ ರೋಗದ ಸೋಂಕು ನಿಯಂತ್ರಿಸಲು ಲಸಿಕೆ ಹಾಕಲಾಗುತ್ತಿದೆ ಎಂದರು.

ಸಹಾಯಕ ಪೊಲೀಸ್ ಆಯುಕ್ತೆ ಅನುಷಾ, ತಹಶೀಲ್ದಾರ ಡಾ: ಸಂತೋಷ ಬಿರಾದಾರ, ತಾಲೂಕು ಆರೋಗ್ಯಾಧಿಕಾರಿ ಡಾ: ಅಯ್ಯನಗೌಡ ಪಾಟೀಲ, ಪಾಲಿಕೆಯ ವಲಯ ಸಹಾಯಕ ಆಯುಕ್ತ ಶ್ರೀನಿವಾಸ ಶಾಸ್ತ್ರಿ, ಆರ್.ಎಚ್. ಕುಲಕರ್ಣಿ, ಸರೋಜಾ ಪೂಜಾರ, ಮಹಾಂತೇಶ ಮ್ಯಾಗೇರಿ ಮತ್ತಿತರರು ಇದ್ದರು.

Check Also

ಬ್ಯಾಂಕ್‌ಗಳ ಸಾಲಗಳ ಮೇಲಿನ ಚಕ್ರಬಡ್ಡಿ ಮನ್ನಾ

Spread the loveನವದೆಹಲಿ: ನವರಾತ್ರಿ ಸಂದರ್ಭದಲ್ಲಿ ಸಾಲಗಾರರಿಗೆ ಕೇಂದ್ರ ಸರ್ಕಾರ ಶುಭ ಸುದ್ದಿ ನೀಡಿದೆ. ಮಾರ್ಚ್ 1ರಿಂದ ಆಗಸ್ಟ್ 31ರವರೆಗಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Hiring Reporter’s For more Information Contact Above Number 876 225 4007 . Program producer
error: Content is protected !!