Breaking News
Hiring Reporter’s For more Information Contact Above Number 876 225 4007 . Program producer
Home / Breaking News / ಸದ್ಯ ಇನ್ನೂ 8 ವಾರಗಳ ಕಾಲ ಲಾಕ್​ಡೌನ್…!?​

ಸದ್ಯ ಇನ್ನೂ 8 ವಾರಗಳ ಕಾಲ ಲಾಕ್​ಡೌನ್…!?​

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ನಿಯಂತ್ರಣಕ್ಕೆ ಮೇ 24ರವರೆಗೆ ಲಾಕ್​ಡೌನ್​ ಜಾರಿಯಲ್ಲಿದ್ದು, ಬಳಿಕ ಮುಂದಿನ ಕ್ರಮವೇನು ಎನ್ನುವುದು ಇಂದಿನ ಟಾಸ್ಕ್ ಫೋರ್ಸ್ ಸಭೆಯಲ್ಲಿ ನಿರ್ಧಾರವಾಗಲಿದೆ.

ಟಾಸ್ಕ್ ಫೋರ್ಸ್ ಅಧ್ಯಕ್ಷ ಡಿಸಿಎಂ ಅಶ್ವಥ್ ನಾರಾಯಣ ನೇತೃತ್ವದಲ್ಲಿ ಬೆಳಗ್ಗೆ ಮಹತ್ವದ ಸಭೆ ನಡೆಯಲಿದ್ದು, ಸಭೆಯಲ್ಲಿ ಆರೋಗ್ಯ ಸಚಿವ ಡಾ ಸುಧಾಕರ್, ಸಿ.ಸಿ ಪಾಟೀಲ್, ಸಚಿವ ಸುರೇಶ್ ಕುಮಾರ್ ಸೇರಿದಂತೆ ಟಾಸ್ಕ್ ಫೋರ್ಸ್​ ಅಧಿಕಾರಿಗಳು ಭಾಗಿಯಾಗಲಿದ್ದಾರೆ.

ಸದ್ಯ ಇನ್ನೂ 8 ವಾರಗಳ ಕಾಲ ಲಾಕ್​ಡೌನ್​ ಮಾಡುವಂತೆ ತಜ್ಞರ ಸಮಿತಿ ಸಲಹೆ ನೀಡಿದ್ದು, ಗ್ರಾಮೀಣ ಪ್ರದೇಶದಲ್ಲಿ ಸೋಂಕು ಹೆಚ್ಚುತ್ತಿರುವ ಕಾರಣ ಲಾಕ್​ಡೌನ್​ ಅವಶ್ಯವಿದೆ ಎಂದು ತಜ್ಞರು ಸಲಹೆ ನೀಡಿದ್ದಾರೆ. ಹೀಗಾಗಿ ಈ ಕುರಿತು ಇಂದಿನ ಸಭೆಯಲ್ಲಿ ಚರ್ಚೆಯಾಗಲಿದ್ದು, ಕನಿಷ್ಠ ಮೇ ಅಂತ್ಯದ ವರೆಗೆ ಲಾಕ್​ಡೌನ್​ ಮುಂದುವರಿಸುವ ಸಾಧ್ಯತೆಯಿದೆ

Share

About Shaikh BIG TV NEWS, Hubballi

Check Also

ಡಿಕೆಶಿ ವಿರುದ್ಧ ಯಡಿಯೂರಪ್ಪ ಹೊಸ ಬಾಂಬ್

ದಾವಣಗೆರೆ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿರುದ್ಧ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಸ್ಪೋಟಕ ಆರೋಪ ಮಾಡಿದ್ದಾರೆ.ಕೆಪಿಸಿಸಿ ಅಧ್ಯಕ್ಷ ಡಿ.ಕೆ. …

Leave a Reply

Your email address will not be published. Required fields are marked *

error: Content is protected !!