Breaking News
Home / Breaking News / ಸಿಲಿಂಡರ್ ಸ್ಪೋಟ: 7 ಜನರಿಗೆ ಗಾಯ.

ಸಿಲಿಂಡರ್ ಸ್ಪೋಟ: 7 ಜನರಿಗೆ ಗಾಯ.

Spread the love

ಥಾಣೆ (ಮಹಾರಾಷ್ಟ್ರ): ಬೆಂಕಿ ನಂದಿಸುವ ಕಾರ್ಯಾಚರಣೆ ವೇಳೆ ಗ್ಯಾಸ್​ ಸಿಲಿಂಡರ್​ ಸ್ಫೋಟಗೊಂಡು ಇಬ್ಬರು ಅಗ್ನಿಶಾಮಕ ಸಿಬ್ಬಂದಿ ಸೇರಿದಂತೆ ಏಳು ಮಂದಿ ಗಾಯಗೊಂಡಿರುವ ಘಟನೆ ಮಹಾರಾಷ್ಟ್ರದ ಥಾಣೆಯ ಆಟೋ ಮೊಬೈಲ್​ ಅಂಗಡಿಯೊಂದರಲ್ಲಿ ನಡೆದಿದೆ.

ನಿನ್ನೆ ರಾತ್ರಿ 11 ಗಂಟೆ ಸುಮಾರಿಗೆ ವಾಗ್ಲೆ ಎಸ್ಟೇಟ್ ಪ್ರದೇಶದಲ್ಲಿನ ಅಂಗಡಿಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಸಮೀಪವಿದ್ದ ಎರಡು ಮನೆಗಳಿಗೂ ಬೆಂಕಿ ಆವರಿಸಿದೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ ಹಾಗೂ ಪ್ರಾದೇಶಿಕ ವಿಪತ್ತು ನಿರ್ವಹಣಾ ಘಟಕ (ಆರ್​ಡಿಎಂಸಿ)ದ ಸಿಬ್ಬಂದಿ ದೌಡಾಯಿಸಿದ್ದಾರೆ.

ಆದರೆ ಕಾರ್ಯಾಚರಣೆ ವೇಳೆ ಗ್ಯಾಸ್​ ಸಿಲಿಂಡರ್ ಬ್ಲಾಸ್ಟ್​ ಆಗಿದ್ದು, ಇಬ್ಬರು ಅಗ್ನಿಶಾಮಕ ಸಿಬ್ಬಂದಿ, ತುರ್ತು ಸ್ಪಂದನಾ ವಾಹನದ ಚಾಲಕ ಹಾಗೂ ನಾಲ್ವರು ಸ್ಥಳೀಯರು ಗಾಯಗೊಂಡಿದ್ದಾರೆ ಎಂದು ಆರ್​ಡಿಎಂಸಿ ಮುಖ್ಯಸ್ಥ ಸಂತೋಷ್​ ಕದಮ್​ ಹೇಳಿದ್ದಾರೆ.

ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ತಡರಾತ್ರಿ 2.30ರ ವೇಳೆಗೆ ಬೆಂಕಿ ನಂದಿಸಲಾಗಿದೆ. ಆಟೋ ಮೊಬೈಲ್​ ಅಂಗಡಿ ಸಂಪೂರ್ಣ ಸುಟ್ಟು ಕರಕಲಾಗಿದ್ದು, ಮನೆಗಳಿಗೆ ತೀವ್ರ ಹಾನಿಯಾಗಿದೆ. ಅಗ್ನಿ ಅವಘಡಕ್ಕೆ ಕಾರಣ ತಿಳಿದು ಬಂದಿಲ್ಲ.

About Admin BIG TV NEWS

Check Also

Featured Video Play Icon

ಎಲ್ಲಡೆ ಶಿವನ ಆರಾಧನೆ ಭಕ್ತಿಯಲ್ಲಿ ಮಿಂದೆದ್ದ ಹುಬ್ಬಳ್ಳಿಯ ಜನರು | MAHA SHIVARATRI | BIG TV NEWS

Spread the love

Leave a Reply

Your email address will not be published. Required fields are marked *

error: Content is protected !!