Hiring Reporter’s For more Information Contact Above Number 876 225 4007 . Program producer
Home / Breaking News / ಉತ್ತರ ಪ್ರದೇಶದದಲ್ಲಿ ನಡೆದ ದಲಿತ ಯುವತಿ ಮೇಲೆ ಅತ್ಯಾಚಾರ ಖಂಡಿಸಿ ಪ್ರತಿಭಟನೆ

ಉತ್ತರ ಪ್ರದೇಶದದಲ್ಲಿ ನಡೆದ ದಲಿತ ಯುವತಿ ಮೇಲೆ ಅತ್ಯಾಚಾರ ಖಂಡಿಸಿ ಪ್ರತಿಭಟನೆ

Spread the love

ಹುಬ್ಬಳ್ಳಿ: ಜೈ ಕರ್ನಾಟಕ ಸಂಘಟನೆ ಕಾರ್ಯಕರ್ತರಿಂದ ಉತ್ತರ ಪ್ರದೇಶ ಹತ್ರಾಸ್ ಅತ್ಯಾಚಾರ ಹತ್ಯೆ ಖಂಡಿಸಿ ಪ್ರತಿಭಟನೆ ನಡೆಸಲಾಯಿತು.

ನಗರದ ಅಂಬೇಡ್ಕರ್ ಸರ್ಕಲ್ ನಿಂದ ತಹಶಿಲ್ದಾರರ ಕಛೇರಿ ವರೆಗೆ ಪ್ರತಿಭಟನೆ ಮೆರವಣಿಗೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.

ಉತ್ತರ ಪ್ರದೇಶ ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದರು,ಉತ್ತರ ಪ್ರದೇಶದಲ್ಲಿ ಯೋಗಿ ಆದಿತ್ಯನಾಥ ನೇತೃತ್ವದ ಸರ್ಕಾರ ಬಂದ ಮೇಲೆ ಅತ್ಯಾಚಾರ ಪ್ರಕರಣಗಳು ಹೆಚ್ಚಾಗುತ್ತಿದ್ದು ಇದು ಆಘಾತಕಾರಿ ವಿಷಯ ಎಂದು ಅಸಮಾಧಾನ ವ್ಯಕ್ತಪಡಿಸಿದರು.ಅಲ್ಲದೇ ಅತ್ಯಾಚಾರಿಗಳನ್ನು ಮಟ್ಟ ಹಾಕುವಲ್ಲಿ ಯೋಗಿ ಅದಿತ್ಯನಾಥ ಸರ್ಕಾರ ವಿಫಲವಾಗಿದೆ.ಯುಪಿ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಕುಸಿದು ಹೋಗಿದೆ. ಹಾಗಾಗಿ ಕೂಡಲೇ ಅತ್ಯಾಚಾರಿಗಳಿಗೆ ಗಲ್ಲುಶಿಕ್ಷೆ ನೀಡಬೇಕು ಮತ್ತು’ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ರಾಜೀನಾಮೆ ‌ನೀಡಿ.

ಸರ್ಕಾರವನ್ನು ವಜಾಗೊಳಿಸಿ ರಾಷ್ಟ್ರಪತಿ ಆಳ್ವಿಕೆ ಜಾರಿಗೊಳಿಸ ಬೇಕೆಂದು ತಹಶಿಲ್ದಾರರ ಮುಖಾಂತರ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿದರು. ‌‌

Check Also

ಬ್ಯಾಂಕ್‌ಗಳ ಸಾಲಗಳ ಮೇಲಿನ ಚಕ್ರಬಡ್ಡಿ ಮನ್ನಾ

Spread the loveನವದೆಹಲಿ: ನವರಾತ್ರಿ ಸಂದರ್ಭದಲ್ಲಿ ಸಾಲಗಾರರಿಗೆ ಕೇಂದ್ರ ಸರ್ಕಾರ ಶುಭ ಸುದ್ದಿ ನೀಡಿದೆ. ಮಾರ್ಚ್ 1ರಿಂದ ಆಗಸ್ಟ್ 31ರವರೆಗಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Hiring Reporter’s For more Information Contact Above Number 876 225 4007 . Program producer
error: Content is protected !!