Breaking News
Hiring Reporter’s For more Information Contact Above Number 876 225 4007 . Program producer
Home / Breaking News / ಅನರ್ಹರ ಬಗ್ಗೆ ಹಗುರವಾಗಿ ಮಾತನಾಡಬಾರದೆಂದು ಹೇಳಿದ್ದು ನಿಜ: ಡಿಸಿಎಂ ಲಕ್ಷ್ಮಣ ಸವದಿ.

ಅನರ್ಹರ ಬಗ್ಗೆ ಹಗುರವಾಗಿ ಮಾತನಾಡಬಾರದೆಂದು ಹೇಳಿದ್ದು ನಿಜ: ಡಿಸಿಎಂ ಲಕ್ಷ್ಮಣ ಸವದಿ.

 

ಹುಬ್ಬಳ್ಳಿ: ಅನರ್ಹರ ಬಗ್ಗೆ ಹಗುರವಾಗಿ ಮಾತನಾಡಬಾರದೆಂದು ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದ್ದು ನಿಜಾ. ಆದರೆ ಅವರ ಆಡಿಯೋವನ್ನು ತಿರುಚಿ ಬಿಡುಗಡೆ ಮಾಡಲಾಗಿದೆ ಎಂದು ಹೇಳುವ ಮೂಲಕ ಡಿಸಿಎಂ ಲಕ್ಷ್ಮಣ ಸವದಿ ಆಡಿಯೋದಲ್ಲಿನ ಧ್ವನಿ ಬಿ.ಎಸ್.ವೈ ಅವರದ್ದೆ ಎಂದು‌ ಒಪ್ಪಿಕೊಂಡಿದ್ದಾರೆ.
ನಗರದಲ್ಲಿಂದು ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಈ ಹಿಂದೆ ಮಾಜಿ ಸಿಎಂ ಸಿದ್ದರಾಮಯ್ಯ ಎರಡು ಬಾರಿ ಸಿಡಿ ಮಾಡಿಸಿದ್ದರು. ಅದರಲ್ಲಿ ಒಂದು ಬಾರಿ ಬಿಎಸ್ ಯಡಿಯೂರಪ್ಪ ಜೊತೆ ಲಿಂಗಾಯತರಿಲ್ಲ ಅನ್ನೋ ಆಡಿಯೋ, ಇನ್ನೊಂದು ಧರ್ಮಸ್ಥಳದಲ್ಲಿ ಲೋಕಸಭಾ ಚುನಾವಣೆ ನಂತರ ಮೈತ್ರಿ ಸರ್ಕಾರ ಬೀಳಲಿದೆ ಎಂಬ ಸಿಡಿ ಮಾಡಿಸಿದ್ದರು. ಸಿದ್ದರಾಮಯ್ಯ ಸಿಡಿ ಮಾಡಿಸುವುದರಲ್ಲಿ ಎಕ್ಸಪರ್ಟ್. ಸಿದ್ದರಾಮಯ್ಯ ಸುಳ್ಳು ಹೇಳುವುದನ್ನು ಬಿಡಲಿ ಎಂದು ತಿರುಗೇಟು ನೀಡಿದರು.
ಇನ್ನೂ ಹುಬ್ಬಳ್ಳಿಯಲ್ಲಿ ನಡೆದ ಬಿಜೆಪಿ ಸಭೆಯಲ್ಲಿ ಎಲ್ಲರಿಗೂ ಮೊಬೈಲ್ ಗಳಿಗೆ ಅವಕಾಶ ಇತ್ತು. ಈ ಬಗ್ಗೆ ರಾಜ್ಯದ ಬಿಜೆಪಿ ರಾಜ್ಯಾಧ್ಯಕ್ಷ ನಳೀನಕುಮಾರ ಕಟೀಲ್ ತನಿಖೆ ನಡೆಸಲಿದ್ದಾರೆ. ತನಿಖೆ ನಂತರವಷ್ಟೇ ಯಾರು ಆಡಿಯೋ ಮಾಡಿದ್ದು, ಯಾಕೆ‌ ಆಡಿಯೋ ಮಾಡಿದ್ದರು ಎಂಬುಬುದು ಬಹಿರಂಗಗೊಳಲಿದೆ. ಆದರೆ ಆಡಿಯೋ ಗೂ ಹೈಕಮಾಂಡ್ ಗೂ ಯಾವುದೇ ರೀತಿಯ ಸಂಬಂಧವಿಲ್ಲ ಎಂದರು.
ಹೈಕಮಾಂಡ್ ಸೂಚಿಸಿದ ಹಾಗೇ ಕೇಳುವ ವ್ಯಕ್ತಿ ನಾನು. ಅವರು ವಿಧಾನಸಭೆಗೆ ಸೂಚಿಸಿದರೆ ವಿಧಾನಸಭೆ, ವಿಧಾನಪರಿಷತ್ ಸೂಚಿಸಿದರೆ ವಿಧಾನಪರಿಷತ್ ಚುನಾವಣೆಗೆ ಸ್ಪರ್ಧೆ ಮಾಡುವೆ ಎಂದು ಚುನಾವಣೆ ಸ್ಪರ್ಧೆ ಬಗ್ಗೆ ಸ್ಪಷ್ಟಪಡಿಸಿದರು.

Share

About Shaikh BIG TV NEWS, Hubballi

Check Also

ಡಿಕೆಶಿ ವಿರುದ್ಧ ಯಡಿಯೂರಪ್ಪ ಹೊಸ ಬಾಂಬ್

ದಾವಣಗೆರೆ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿರುದ್ಧ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಸ್ಪೋಟಕ ಆರೋಪ ಮಾಡಿದ್ದಾರೆ.ಕೆಪಿಸಿಸಿ ಅಧ್ಯಕ್ಷ ಡಿ.ಕೆ. …

Leave a Reply

Your email address will not be published. Required fields are marked *

error: Content is protected !!