Breaking News
Hiring Reporter’s For more Information Contact Above Number 876 225 4007 . Program producer
Home / ಜಿಲ್ಲೆ / ಬಿಜೆಪಿ ಮುಖಂಡ ಕರ್ತೇನಹಳ್ಳಿ ಸುರೇಶ್ ಮೇಲೆ ಮಾರಣಾಂತಿಕ ಹಲ್ಲೆ

ಬಿಜೆಪಿ ಮುಖಂಡ ಕರ್ತೇನಹಳ್ಳಿ ಸುರೇಶ್ ಮೇಲೆ ಮಾರಣಾಂತಿಕ ಹಲ್ಲೆ

 

ಮಂಡ್ಯ- ಬೇಲದಕೆರೆ ಗ್ರಾಮದಲ್ಲಿ ಮತಪ್ರಚಾರ ನಡೆಸುತ್ತಿದ್ದ ಕಾರ್ಯಕರ್ತರ ಬಿಜೆಪಿ ಮುಖಂಡ ಕರ್ತೇನಹಳ್ಳಿ ಸುರೇಶ್ ಮೇಲೆ ಜೆಡಿಎಸ್ ಮುಖಂಡರಾದ ನಂಜಪ್ಪ ಮತ್ತು ಸಣ್ಣ ಪಾಪೇಗೌಡ ಅವರ ತಂಡದಿಂದ ಹಲ್ಲೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ.

ಮಂಡ್ಯ ಕೃಷ್ಣರಾಜಪೇಟೆ ಪಟ್ಟಣದ ಶೀಳನೆರೆ ಹೋಬಳಿಯ ಬೇಲದಕೆರೆ ಗ್ರಾಮದಲ್ಲಿ ಜೆಡಿಎಸ್ ಮುಖಂಡ ನಂಜಪ್ಪ ಹಾಗೂ
ಆತನ ಸಹಚರರಿಂದ ಪ್ರಚಾರಕ್ಕೆ ತೆರಳಿದ್ದ ಬಿಜೆಪಿ ಮುಖಂಡ ಹರಳಹಳ್ಳಿ ಗ್ರಾಮ ಪಂಚಾಯತಿ
ಮಾಜಿಅಧ್ಯಕ್ಷ ಕರ್ತೇನಹಳ್ಳಿ ಸುರೇಶ್ ಅವರ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ ಘಟನೆ ರಾತ್ರಿ ಸುಮಾರು 9ಗಂಟೆ ಸಮಯದಲ್ಲಿ ನಡೆದಿರುವ .

ಗ್ರಾಮದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣ.
ಬೂದಿ ಮುಚ್ಚಿದ ಕೆಂಡದಂತಾಗಿರುವ ಬೇಲದಕೆರೆ ಗ್ರಾಮ. ಇಂದು ರಾತ್ರಿ ಶೀಳನೆರೆ ಹೋಬಳಿಯ ಬೇಲದಕೆರೆ ಗ್ರಾಮದಲ್ಲಿ ಬಿಜೆಪಿ ಕಾರ್ಯಕರ್ತರು ಮುಖಂಡ ಕರ್ತೇನಹಳ್ಳಿ ಸುರೇಶ್ ನೇತೃತ್ವದಲ್ಲಿ ಕರಪತ್ರಗಳನ್ನು ವಿತರಿಸಿ ಮನೆ ಮನೆಗೆ ತೆರಳಿ ಪ್ರಚಾರ ನಡೆಸಿ ಬಿಜೆಪಿ ಅಭ್ಯರ್ಥಿ ನಾರಾಯಣಗೌಡರ ಪರವಾಗಿ ಮತಯಾಚನೆ ಮಾಡುತ್ತಿದ್ದಾಗ. ನಮ್ಮೂರಲ್ಲಿ ನಿಮ್ಮನ್ನು ಪ್ರಚಾರ ಮಾಡಿ ಅಂತ ಅಂದೋರು ಯಾರು.
ನಮ್ಮೂರಲ್ಲಿ ಜೆಡಿಎಸ್ ಹೊರತುಪಡಿಸಿ ಬೇರೆ ಯಾರೂ ಪ್ರಚಾರ ಮಾಡಂಗಿಲ್ಲ ಎಂದು ಬೆದರಿಕೆ ಹಾಕಿದ ನಂಜಪ್ಪ, ಸಣ್ಣಪಾಪೇಗೌಡ ಮತ್ತು
ಅವರ ಮಕ್ಕಳು ಸುರೇಶ್ ಅವರ ಮೇಲೆ ಕಲ್ಲುಗಳು ಮತ್ತು ದೊಣ್ಣೆಯಿಂದ ಹಲ್ಲೆ ನಡೆಸಿದ್ದಾರೆ.
ತೀವ್ರವಾಗಿ ಏಟು ತಿಂದು ಜರ್ಝರಿತರಾಗಿರುವ ಸುರೇಶ್ ಅವರನ್ನು ಆಂಬ್ಯುಲೆನ್ಸ್ ನಲ್ಲಿ ಕೆ.ಆರ್.ಪೇಟೆ ಸಾರ್ವಜನಿಕ ಆಸ್ಪತ್ರೆಗೆ ಕರೆತಂದು ರಾತ್ರಿ ಪಾಳಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ
ವೈದ್ಯಾಧಿಕಾರಿ ಪ್ರಥಮ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆ ಹಾಗೂ ವೈದ್ಯಕೀಯ ಸಲಹೆಗಾಗಿ ಮೈಸೂರಿನ ಕೆ.ಆರ್.ಆಸ್ಪತ್ರೆಗೆ ಸಾಗಿಸಲಾಗಿದೆ.

ಘಟನೆಯ ಬಗ್ಗೆ ಪಟ್ಟಣ ಪೋಲಿಸ್ ಠಾಣೆಯಲ್ಲಿ ಮೊಕದ್ದಮೆ ದಾಖಲಾಗಿದೆ.
ಗ್ರಾಮದಲ್ಲಿ ಬಿಗಿ ಪೋಲಿಸ್ ಬಂದೋಬಸ್ತ್ ಕಲ್ಪಿಸಲಾಗಿದೆ.
ತಲೆಮರೆಸಿಕೊಂಡಿರುವ ಆರೋಪಿಗಳ ಪತ್ತೆಗೆ ಪಟ್ಟಣ ಪೋಲಿಸ್ ಠಾಣೆ ಸಬ್ ಇನ್ಸ್ ಪೆಕ್ಟರ್ ಬ್ಯಾಟರಾಯಿಗೌಡ ಕ್ರಮಕೈಗೊಂಡಿದ್ದು.
ಸರ್ಕಲ್ ಇನ್ಸ್ ಪೆಕ್ಟರ್ ಕೆ.ಎನ್.ಸುಧಾಕರ್ ಅವರ ನೇತೃತ್ವದಲ್ಲಿ ತನಿಖೆ ಕೈಗೊಂಡಿದ್ದಾರೆ.

Share

About Shaikh BIG TV NEWS, Hubballi

Check Also

Featured Video Play Icon

ಮಕ್ಕಳ ಶಿಕ್ಷಣಕ್ಕೆ ಕೊಳ್ಳಿ ಇಟ್ಟ ಸೊಸೈಟಿ?? | Children crying to protect their school | BIG TV NEWS

Shaikh BIG TV NEWS, Hubballi See author's posts Share

Leave a Reply

Your email address will not be published. Required fields are marked *

error: Content is protected !!