Breaking News
Hiring Reporter’s For more Information Contact Above Number 876 225 4007 . Program producer
Home / Breaking News / ಮಹಾದಾಯಿ ಯೋಜನೆ ಅನುಷ್ಠಾನಕ್ಕೆ ಆಗ್ರಹಿಸಿ ರೈತರಿಂದ ದೆಹಲಿ ಚಲೋ.

ಮಹಾದಾಯಿ ಯೋಜನೆ ಅನುಷ್ಠಾನಕ್ಕೆ ಆಗ್ರಹಿಸಿ ರೈತರಿಂದ ದೆಹಲಿ ಚಲೋ.

 

ಹುಬ್ಬಳ್ಳಿ: ಮಹದಾಯಿ, ಕಳಸಾ ಬಂಡೂರಿ ಯೋಜನೆ ಅನುಷ್ಠಾನಕ್ಕೆ ಆಗ್ರಹಿಸಿ ಪಕ್ಷಾತೀಕ ರೈತ ಹೋರಾಟ ಸಮಿತಿ ಇಂದು ಸಮಿತಿ ಮುಖಂಡ ಸುಭಾಸಚಂದ್ರಗೌಡ ಪಾಟೀಲ ನೇತೃತ್ವದಲ್ಲಿ ದೆಹಲಿ ಚಲೋ ನಡೆಸಿದೆ.
ನಗರದ ಹೊರವಲಯದ ಆಕ್ಸ್‌ಫರ್ಡ್ ಕಾಲೇಜಿನಿಂದ ಪಾದಯಾತ್ರೆ ನಡೆಸಿದ ರೈತರು ಕಿತ್ತೂರ ಚೆನ್ನಮ್ಮ ವೃತ್ತದ ಮೂಲಕ ಶಹರದ ರೈಲ್ವೆ ನಿಲ್ದಾಣದ ಮೂಲಕ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ.
ಇನ್ನೂ ಗೋವಾ ಸರಕಾರ ಯೋಜನೆ ಅನುಷ್ಟಾನಗೊಳಿಸಲು ಅಡ್ಡುಗಾಲು ಹಾಕುವ ಮೂಲಕ ಪರಿಸರದ ನೆಪವೊಡ್ಡಿ ರಾಜ್ಯದ ಪಾಲಿನ ನೀರನ್ನು ನೀಡಲು ನಿರಾಕರಿಸುತ್ತಿದೆ. ಈಗಾಗಲೇ ಮಹದಾಯಿ ನ್ಯಾಯಾಧೀಕರಣವು ತೀರ್ಪು ನೀಡಿದ್ದು, ಈ ಮೂಲಕ ರಾಜ್ಯದ ಪಾಲಿನ ನೀರಿನ ಬಳಕೆಗೆ ಸಂಪೂರ್ಣ ಅನುಮತಿ ನೀಡಿದ್ದರೂ ನ್ಯಾಯಾಧಿಕರಣದ ತೀರ್ಪು ನ್ನು ಉಲ್ಲಂಘಿಸುವ ಮೂಲ ಈ ಭಾಗದ ಕುಡಿಯುವ ನೀರಿನ ಯೋಜನೆಗೆ ಅಡ್ಡಗಾಲನ್ನು ಹಾಕುತ್ತಿದ್ದು, ಕೂಡಲೇ ಯೋಜನೆ ಅನುಷ್ಠಾನಕ್ಕೆ ಆಗ್ರಹಿಸಿ ದೆಹಲಿ ಚಲೋ ನಡೆಸುತ್ತಿದ್ದು, ಈ ಮೂಲಕ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಜಲಸಂಪನ್ಮೂಲ ಸಚಿವ ಹಾಗೂ ಸಚಿವ ಪ್ರಲ್ಹಾದ್ ಜೋಶಿ ಅವರನ್ನು ಭೇಟಿ ಮಾಡಿ ಯೋಜನೆ ಅನುಷ್ಠಾನಗೊಳಿಸಲು ಒತ್ತಾಯಿಸಲಾಗುವುದು ಎಂದು ಹೋರಾಟಗಾರರು ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ಸಮಿತಿ ಅಧ್ಯಕ್ಷ ಬಸಪ್ಪ ಬೀರಣ್ಣವರ, ಸುಭಾಸಚಂದ್ರಗೌಡ, ಹೇಮನಗೌಡ ಬಸನಗೌಡ್ರ ಸೇರಿದಂತೆ ಪಕ್ಷಾತೀತ ರೈತ ಹೋರಾಟ ಸಮಿತಿಯ ನೂರಾರು ಸದಸ್ಯರು ಇದ್ದರು.

Share

About Shaikh BIG TV NEWS, Hubballi

Check Also

ಡಿಕೆಶಿ ವಿರುದ್ಧ ಯಡಿಯೂರಪ್ಪ ಹೊಸ ಬಾಂಬ್

ದಾವಣಗೆರೆ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿರುದ್ಧ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಸ್ಪೋಟಕ ಆರೋಪ ಮಾಡಿದ್ದಾರೆ.ಕೆಪಿಸಿಸಿ ಅಧ್ಯಕ್ಷ ಡಿ.ಕೆ. …

Leave a Reply

Your email address will not be published. Required fields are marked *

error: Content is protected !!