Breaking News
Hiring Reporter’s For more Information Contact Above Number 876 225 4007 . Program producer
Home / ಜಿಲ್ಲೆ / ಕರ್ನಾಟಕ / ಶಿಕ್ಷಣ ಇಲಾಖೆಯ ನಿರ್ದೇಶಕರು, ಆಯುಕ್ತರ ವಜಾಕ್ಕೆ ಆಗ್ರಹಿಸಿ ಪ್ರತಿಭಟನೆ

ಶಿಕ್ಷಣ ಇಲಾಖೆಯ ನಿರ್ದೇಶಕರು, ಆಯುಕ್ತರ ವಜಾಕ್ಕೆ ಆಗ್ರಹಿಸಿ ಪ್ರತಿಭಟನೆ

ಹುಬ್ಬಳ್ಳಿ,ನ.16-ಕರ್ನಾಟಕ ಶಿಕ್ಷಣ ಇಲಾಖೆಯು ಹೊರಡಿಸಿರುವ ಸುತ್ತೋಲೆ ಕೈಪಿಡಿಯಲ್ಲಿ ಡಾ.ಅಂಬೇಡ್ಕರ್ ಅವರು ಸಂವಿಧಾನ ರಚಿಸಿಲ್ಲ ಎಂಬ ವಿವಾದವನ್ನು ಹುಟ್ಟು ಹಾಕಿದ್ದು, ಕೂಡಲೇ ಶಿಕ್ಷಣ ಇಲಾಖೆಯ ನಿರ್ದೇಶಕರನ್ನು ಮತ್ತು ಆಯುಕ್ತರನ್ನು ವಜಾಗೊಳಿಸುವಂತೆ ಆಗ್ರಹಿಸಿ ಜೈ ಭೀಮ ‌ಅಖಿಲ ಭಾರತ ದಲಿತ ಹೋರಾಟ ಸಮಿತಿಯ ಸಹಯೋಗದಲ್ಲಿಂದು ನಗರದ ಮಿನಿವಿಧಾನಸೌಧದ ಎದುರು ಪ್ರತಿಭಟನೆ ನಡೆಸಿತು.
ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರು ಸಂವಿಧಾನ ರಚನೆ ಮಾಡಿಲ್ಲ ಎಂದು ಹೇಳುವುದು ದೇಶದ ಪ್ರಜಾಪ್ರಭುತ್ವಕ್ಕೆ ಹಾಗೂ ದೇಶದ ಪವಿತ್ರ ಸಂವಿಧಾನಕ್ಕೆ ಮಾಡುವ ಅವಮಾನವಾಗಿದೆ. ಅಲ್ಲದೇ ಶಿಕ್ಷಣ ಇಲಾಖೆಯ ಸುತ್ತೋಲೆಯ ಕೈಪಿಡಿಯಲ್ಲಿ ಅಂಬೇಡ್ಕರ್ ಅವರು ಸಂವಿಧಾನ ರಚನೆ ಮಾಡಿಲ್ಲ ಎಂದು ಹೇಳುವುದು ಸರಿಯಲ್ಲ. ಇಂತಹ ವಿವಾದಾತ್ಮಕ ನಿರ್ಧಾರವನ್ನು ಕೈ ಬಿಟ್ಟು ಕೂಡಲೇ ಅಧಿಕಾರಿಗಳನ್ನು ವಜಾಗೊಳಿಸಬೇಕೆಂದು ಪ್ರತಿಭಟನಾಕಾರರು ಆಗ್ರಹಿಸಿದರು. ಇನ್ನೂ ಕೂಡಲೇ ಸೂಕ್ತ ಕ್ರಮ ಕೈ ಗೊಳ್ಳಬೇಕು ಇಲ್ಲವಾದಲ್ಲಿ ಮುಂಬರುವ ದಿನಗಳಲ್ಲಿ ಉಗ್ರ ಹೋರಾಟದ ಎಚ್ಚರಿಕೆ ನೀಡಿದರು. ಇದೇ ಸಂದರ್ಭದಲ್ಲಿ ತಹಶಿಲ್ದಾರರ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.
ಪ್ರತಿಭಟನೆಯಲ್ಲಿ ಇಸ್ಮಾಯಿಲ್ ಸುಂಕದ ಸೇರಿದಂತೆ ಜೈ ಭೀಮ ಹೋರಾಟ ಸಮಿತಿಯ ಪದಾಧಿಕಾರಿಗಳು ಪಾಲ್ಗೊಂಡಿದ್ದರು.

Share

About Shaikh BIG TV NEWS, Hubballi

Check Also

ವಿನಯ ಕುಲಕರ್ಣಿ ಬಂಧನ-ರಾಜಕೀಯ ಪ್ರೇರಿತ: ಬಿ.ಕೆ.ಹರಿಪ್ರಸಾದ

ಧಾರವಾಡ: ಮಾಜಿ ಸಚಿವ ವಿನಯ ಕುಲಕರ್ಣಿಯವರನ್ನ ಸಿಬಿಐ ಬಂಧನ ಮಾಡಿದ್ದು ರಾಜಕೀಯ ದುರುದ್ದೇಶದಿಂದ ಎಂದು ವಿಧಾನಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ ಹೇಳಿದರು. …

Leave a Reply

Your email address will not be published. Required fields are marked *

error: Content is protected !!