Breaking News
Hiring Reporter’s For more Information Contact Above Number 876 225 4007 . Program producer
Home / Breaking News / ಚಿಕ್ಕೋಡಿ ಕಾಂಗ್ರೆಸ್ ಪಾಳೆಯದಲ್ಲಿ ಅಸಮಾಧಾನ : ಕಾಂಗ್ರೆಸ್ ಪ್ರತಿಭಟನೆಯಲ್ಲಿ ಗೈರಾದ ನಾಯಕರು

ಚಿಕ್ಕೋಡಿ ಕಾಂಗ್ರೆಸ್ ಪಾಳೆಯದಲ್ಲಿ ಅಸಮಾಧಾನ : ಕಾಂಗ್ರೆಸ್ ಪ್ರತಿಭಟನೆಯಲ್ಲಿ ಗೈರಾದ ನಾಯಕರು

ಚಿಕ್ಕೋಡಿ:- ಕಾಗವಾಡ ಶಾಸಕ ರಾಜು ಕಾಗೆ ಕಾಂಗ್ರೆಸ್ ಸೇರ್ಪಡೆ ಅಂತಿಮವಾಗುತ್ತಿದ್ದಂತೆಯೇ ಚಿಕ್ಕೋಡಿಯಲ್ಲಿ ಕೈ ಪಾಳಯದಲ್ಲಿ ಅಸಮಧಾನ ಸ್ಫೋಟ್ ಗೊಂಡಿದೆ.

ಹೌದು, ರಾಜ್ಯದಲ್ಲಿ ಉಪಚುನಾವಣೆ ರಂಗೇರುತ್ತಿದ್ದಂತೆ ಕಾಂಗ್ರೆಸ್ ಬಿಜೆಪಿ ಪಕ್ಷಗಳಲ್ಲಿ ಅಭ್ಯರ್ಥಿ ಆಯ್ಕೆ ಪ್ರಕ್ರಿಯೆ ಜೋರಾಗಿದೆ. ಈ ಹಿನ್ನಲೆಯಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬರಲು ಕಾರಣರಾದ ಅನರ್ಹರಿಗೆ ಬಿಜೆಪಿ ಹೆಚ್ಚಿನ ಗಮನ ನೀಡುವ ಸಾಧ್ಯತೆಗಳು ದಟ್ಟವಾಗುತ್ತಿದ್ದಂತೆ, ಚಿಕ್ಕೋಡಿಯಲ್ಲಿ ಬಿಜೆಪಿ ಟಿಕೆಟ್ ಆಕಾಂಕ್ಷಿ ಆಗಿದ್ದ ರಾಜು ಕಾಗೆ ಟಿಕೆಟ್ ಕೈತಪ್ಪಿದ ಬೆನ್ನಲ್ಲೇ ಬಂಡಾಯದ ಹಾದಿ ತುಳಿದು ಕಾಂಗ್ರೆಸ್ ಸೇರಲು ಮುಂದಾಗಿದ್ದಾರೆ. ಆದರೆ ಈ ವೇಳೆಯಲ್ಲಿಯೇ ಕಾಂಗ್ರೆಸ್ ನಿಂದ ಟಿಕೆಟ್ ಆಕಾಂಕ್ಷಿಗಳಾಗಿದ್ದ ಶಾಸಕ ಗಣೇಶ ಹುಕ್ಕೇರಿ  ಮಾಜಿ ಸಂಸದ ಪ್ರಕಾಶ ಹುಕ್ಕೇರಿ ಕಾಂಗ್ರೆಸ್ ನಾಯಕರ ಮೇಲೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎಂದು ಹೇಳಲಾಗುತ್ತಿದೆ.

ಇನ್ನೂ ಇದಕ್ಕೆ ಪುಷ್ಟಿ ಎಂಬಂತೆ ಇಂದು ಕೇಂದ್ರ ಸರಕಾರದ ಆರ್ಥಿಕ ಹಾಗೂ ಜನ ವಿರೋಧಿ ನೀತಿ ಖಂಡಿಸಿ ಇಂದು ನಡೆಸಿದ ಪ್ರತಿಭಟನೆಯಲ್ಲಿ ಈ ಇಬ್ಬರು ನಾಯಕರು ಗೈರಾಗಿದ್ದರು. ಇದರಿಂದಾಗಿ ಚಿಕ್ಕೋಡಿ ಕಾಂಗ್ರೆಸ್ ಪಾಳಯದಲ್ಲಿ ಭಿನ್ನಮತದ ವಾಸನೆ ಸುಳಿಯುತ್ತಿದ್ದು, ಇದು ಎಲ್ಲಿಗೆ ಹೋಗಿ ನಿಲ್ಲಲಿದೆ ಎಂಬುದನ್ನು ಕಾದು ನೋಡಬೇಕು.

Share

About Shaikh BIG TV NEWS, Hubballi

Check Also

ಹಿರಿಯ ಅಧಿಕಾರಿ ಕಿರುಕುಳಕ್ಕೆ ಬೇಸತ್ತು ಡೆತ್ ನೋಟ್ ಬರೆದಿಟ್ಟು ವೈದ್ಯಕೀಯ ಸಿಬ್ಬಂದಿ ಆತ್ಮಹತ್ಯೆಗೆ ಯತ್ನ…!

ಹುಬ್ಬಳ್ಳಿ: ವೈದ್ಯಕೀಯ ಸಿಬ್ಬಂದಿಯೊಬ್ಬರು ಡೇತ್‌ ನೋಟ್ ಬರೆದಿಟ್ಟು, ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಹುಬ್ಬಳ್ಳಿ ತಾಲೂಕಿನ ನೂಲ್ವಿಯ ಪ್ರಾಥಮಿಕ …

Leave a Reply

Your email address will not be published. Required fields are marked *

error: Content is protected !!