Breaking News
Hiring Reporter’s For more Information Contact Above Number 876 225 4007 . Program producer
Home / ಜಿಲ್ಲೆ / ಮಂಡ್ಯ / ಡಾ. ಅರವಿಂದ ಅವರ ನರ್ಸಿಂಗ್ ಹೋಂ ಮತ್ತು ಡಯಾಗ್ನೋಸ್ಟಿಕ್ ಸೆಂಟರ್ ಲೋಕಾರ್ಪಣೆ.

ಡಾ. ಅರವಿಂದ ಅವರ ನರ್ಸಿಂಗ್ ಹೋಂ ಮತ್ತು ಡಯಾಗ್ನೋಸ್ಟಿಕ್ ಸೆಂಟರ್ ಲೋಕಾರ್ಪಣೆ.

 

ಮಂಡ್ಯ : ಕೃಷ್ಣರಾಜಪೇಟೆ ಜನಸಾಮಾನ್ಯರಿಗೆ ಅತ್ಯಾಧುನಿಕ ತಂತ್ರಜ್ಞಾನ ಹಾಗೂ ಉಪಕರಣಗಳನ್ನು ಬಳಸಿಕೊಂಡು ಚಿಕಿತ್ಸೆ ನೀಡಲು ಕೃಷ್ಣರಾಜಪೇಟೆ ಪಟ್ಟಣದಲ್ಲಿ ಆರಂಭವಾಗಿರುವ ಅರವಿಂದ್ ಕ್ಲಿನಿಕ್ ಮತ್ತು ಡಯಾಗ್ನೊಸ್ಟಿಕ್ ಸೆಂಟರ್ ಅನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಚಲನಚಿತ್ರ ನಾಯಕನಟ ಚಂದನ್ ಮನವಿ ಮಾಡಿದರು‌.
ಅವರು ವೈದ್ಯ ಡಾ.ಅರವಿಂದ್ ಅವರ ನರ್ಸಿಂಗ್ ಹೋಂ ಮತ್ತು ಡಯಾಗ್ನಸ್ಟಿಕ್ ಸೆಂಟರ್ ಲೋಕಾರ್ಪಣೆ
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಮಾತನಾಡಿದ ಅವರು, ಹೈಟೆಕ್ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯನ್ನು ಸದ್ಬಳಕೆ ಮಾಡಿಕೊಂಡು ನೂರ್ಕಾಲ ಆರೋಗ್ಯವಂತರಾಗಿ ನೆಮ್ಮದಿಯ ಜೀವನ ನಡೆಸಬೇಕು ಎಂದು ಮನವಿ ಮಾಡಿದರು.
ಅರವಿಂದ್ ನರ್ಸಿಂಗ್ ಹೋಂ ಮತ್ತು ಡಯಾಗ್ನೊಸ್ಟಿಕ್ ಸೆಂಟರ್ ಉದ್ಘಾಟನಾ ಸಮಾರಂಭದಲ್ಲಿ ಪುರಸಭೆಯ ಸದಸ್ಯರಾದ ಡಿ.ಪ್ರೇಮಕುಮಾರ್, ಹೆಚ್.ಡಿ.ಅಶೋಕ್, ಉದ್ಯಮಿ ರವಿ, ಪುರಸಭೆಯ ಮಾಜಿಅಧ್ಯಕ್ಷ ಕೆ.ಗೌಸ್ ಖಾನ್, ನೋಟರಿ ಎನ್.ಆರ್.ರವಿಶಂಕರ್, ತಾಲೂಕು ರೈತ ಸಂಘದ ಅಧ್ಯಕ್ಷ ಮರುವನಹಳ್ಳಿ ಶಂಕರ್ ಸೇರಿದಂತೆ ನೂರಾರು ಜನರು ಭಾಗವಹಿಸಿದ್ದರು.

Share

About Bora nayak BIG TV NEWS, Mandya

Check Also

ರಾಜ್ಯ ಸರ್ಕಾರದಿಂದ ರೈತ ಸಮುದಾಯಕ್ಕೆ `ಶುಭಸುದ್ದಿ

ಮಂಡ್ಯ : ರಾಜ್ಯ ಸರ್ಕಾರವು ರೈತರಿಗೆ ಸಿಹಿಸುದ್ದಿ ನೀಡಲು ಮುಂದಾಗಿದ್ದು, ರಾಜ್ಯದಲ್ಲಿ ಯಶಸ್ವಿನಿ ಯೋಜನೆಯನ್ನು ಮತ್ತೆ ಜಾರಿಗೆ ತರಲು ಚಿಂತನೆ …

Leave a Reply

Your email address will not be published. Required fields are marked *

error: Content is protected !!