Hiring Reporter’s For more Information Contact Above Number 876 225 4007 . Program producer
Home / Breaking News / ಡಾ.ನಾಗೇಂದ್ರ ಆತ್ಮಹತ್ಯೆ ಬೆನ್ನಲ್ಲೇ ಮೈಸೂರು ಡಿಸಿ ವರ್ಗಾವಣೆ

ಡಾ.ನಾಗೇಂದ್ರ ಆತ್ಮಹತ್ಯೆ ಬೆನ್ನಲ್ಲೇ ಮೈಸೂರು ಡಿಸಿ ವರ್ಗಾವಣೆ

Spread the love

ಮೈಸೂರು: ಜಿಲ್ಲೆಯ ನಂಜನಗೂಡು ತಾಲೂಕಿನ ಆರೋಗ್ಯಾಧಿಕಾರಿ ಡಾ. ನಾಗೇಂದ್ರ ಆತ್ಮಹತ್ಯೆ ಪ್ರಕರಣ ಬೆನ್ನಲ್ಲೇ ಇಂದು ಮೈಸೂರು ಡಿಸಿ ಅಭಿರಾಂ ಜಿ ಶಂಕರ್ ಅವರನ್ನು ವರ್ಗಾವಣೆ ಮಾಡಲಾಗಿದೆ. ಮೈಸೂರು ಆಡಳಿತ ತರಬೇತಿ ಸಂಸ್ಥೆ ನಿರ್ದೇಶಕ ಹುದ್ದೆಗೆ ಅಭಿರಾಂ ಅವರನ್ನು ವರ್ಗಾವಣೆ ಮಾಡಲಾಗಿದ್ದು ನೂತನ ಜಿಲ್ಲಾಧಿಕಾರಿಯಾಗಿ ಕಲಬುರ್ಗಿ ಡಿಸಿ ಶರತ್ ಅವರನ್ನ ನೇಮಕ ಮಾಡಲಾಗಿದೆ. ಶರತ್ ಅವರು ಈ ಹಿಂದೆ ಮಂಡ್ಯ ಜಿಪಂ ಸಿಇಓ ಆಗಿದ್ದರು.

ನಂಜನಗೂಡು ತಾಲೂಕಾಧಿಕಾರಿ ಡಾ.ನಾಗೇಂದ್ರ ಅವರ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಕೊರೊನಾ ಕೆಲಸದ ಒತ್ತಡದಿಂದಾಗಿ ನಾಗೇಂದ್ರ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿತ್ತು.

ನಾಗೇಂದ್ರ ಆತ್ಮಹತ್ಯೆ ಪ್ರಕರಣದ ಹಿನ್ನಲೆಯಲ್ಲಿ ಅಭಿರಾಂ ಜಿ ಶಂಕರ್ ವಿರುದ್ಧ ವೈದ್ಯರು ಪ್ರತಿಭಟನೆ ನಡೆಸಿದ್ದರು. ಅಭಿರಾಂ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ರಾಜ್ಯ ಸರ್ಕಾರಕ್ಕೆ ವೈದ್ಯರು ಒತ್ತಾಯಿಸಿದ್ದರು.

ಇತ್ತೀಚೆಗಷ್ಟೇ ಇದೇ ಪ್ರಕರಣದ ಹಿನ್ನಲೆಯಲ್ಲಿ ಜಿಲ್ಲಾ ಪಂಚಾಯತ್ ಸಿಇಓ ಪ್ರಶಾಂತ್ ಕುಮಾರ್ ಮಿಶ್ರಾ ಅವರನ್ನ ಎತ್ತಂಗಡಿ ಮಾಡಿದ್ದ ಸರ್ಕಾರ ಇದೀಗ ವೈದ್ಯರ ಒತ್ತಾಯಕ್ಕೆ ಮಣಿದು ಅಭಿರಾಂ ಅವರನ್ನೂ ವರ್ಗಾವಣೆ ಮಾಡಿದೆ ಎನ್ನಲಾಗುತ್ತಿದೆ. ಈ ಕುರಿತು ನ್ಯೂಸ್ ಫಸ್ಟ್​ಗೆ ರಾಜ್ಯ ಸರ್ಕಾರದ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.

Check Also

ತಮಿಳು ಚಿತ್ರರಂಗದ ಖ್ಯಾತ ನಟ ಆತ್ಮಹತ್ಯೆಗೆ ಶರಣು

Spread the loveಚೆನ್ನೈ: ಕೌಟುಂಬಿಕ ಕಲಹಕ್ಕೆ ಬೇಸತ್ತು ತಮಿಳು ಚಿತ್ರರಂಗದ ಉದಯೋನ್ಮುಖ ನಟ ತೆನ್ನರಸು ಆತ್ಮಹತ್ಯೆಗೆ ಶರಣಾಗಿದ್ದಾರೆ. 2012ರಲ್ಲಿ ಬಿಡುಗಡೆಯಾಗಿದ್ದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Hiring Reporter’s For more Information Contact Above Number 876 225 4007 . Program producer
error: Content is protected !!