Hiring Reporter’s For more Information Contact Above Number 876 225 4007 . Program producer
Home / Breaking News / ಡ್ರಗ್ಸ್ ಪ್ರಕರಣ: ವಿಚಾರಣೆಗೆ ಹಾಜರಾದ ರಾಗಿಣಿ ಪರ ವಕೀಲ.

ಡ್ರಗ್ಸ್ ಪ್ರಕರಣ: ವಿಚಾರಣೆಗೆ ಹಾಜರಾದ ರಾಗಿಣಿ ಪರ ವಕೀಲ.

Spread the love

 

ಬೆಂಗಳೂರು: ಡ್ರಗ್ಸ್​ ಆರೋಪ ಪ್ರಕರಣಕ್ಕೆ ಸಂಬಂದಿಸಿದಂತೆ ನಟಿ ರಾಗಿಣಿಗೆ ಸಿಸಿಬಿ‌ ಪೊಲೀಸರು ನೋಟಿಸ್ ನೀಡಿದ್ದರು. ಈ ನೋಟಿಸ್​ಗೆ ನಟಿ ರಾಗಿಣಿ ತಮ್ಮ ವಕೀಲರ ಮೂಲಕ ಸಿಸಿಬಿಗೆ ಮಾಹಿತಿ ನೀಡಿದ್ದಾರೆ.

“ಇವತ್ತು ಬರಲ್ಲ.. ನಾಳೆ‌ ವಿಚಾರಣೆಗೆ ಹಾಜರಾಗ್ತೀನಿ..” ಅಂತ ವಕೀಲರ ಮೂಲಕ ಪ್ರತಿಕ್ರಿಯಿಸಿದ್ದಾರೆ. ಈ ಬಗ್ಗೆ ರಾಗಿಣಿ ವಕೀಲರು ಸಿಸಿಬಿಗೆ ಖುದ್ದಾಗಿ ಹಾಜರಾಗಿ ಎಂದು ತಿಳಿಸಿದ್ದಾರೆ. ನಟಿ ರಾಗಿಣಿ ಆಪ್ತ ರವಿಶಂಕರ್ ಅವರನ್ನು ಬುಧವಾರ ಸಿಸಿಬಿ ಪೊಲೀಸರು ವಶಕ್ಕೆ ಪಡೆದು ಹಲವಾರು ಮಾಹಿತಿ ಕಲೆ ಹಾಕಿದ್ದರು‌. ನಂತರ ರಾಗಿಣಿ ದ್ವಿವೇದಿಗೆ ವಾಟ್ಸ್​ಆ್ಯಪ್ ಹಾಗೂ ಮನೆಗೆ ನೋಟಿಸ್ ನೀಡಿ ಇಂದು ಬೆಳಗ್ಗೆ 10 ಗಂಟೆಗೆ ಹಾಜರಾಗುವಂತೆ ಸಿಸಿಬಿ ಅಧಿಕಾರಿಗಳು ನೋಟಿಸ್ ನೀಡಿದ್ದರು. ಆದರೆ ಇದುವರೆಗೂ ರಾಗಿಣಿ ವಿಚಾರಣೆಗೆ ಹಾಜರಾಗಿಲ್ಲ.

ಈ ಬಗ್ಗೆ ರಾಗಿಣಿಯನ್ನ ಫೋನ್ ಮೂಲಕ ಸಂಪರ್ಕಿಸಿದಾಗ ಯಾವುದಕ್ಕೂ ರಾಗಿಣಿ ದ್ವಿವೇದಿ ಪ್ರತಿಕ್ರಿಯಿಸಿಲ್ಲ. ಮತ್ತೊಂದೆಡೆ ರಾಗಿಣಿ ದ್ವಿವೇದಿ ತಮ್ಮ ವಕೀಲರ ಮೂಲಕ ಮನವಿ ಮಾಡಿದ್ದಾರೆ. ನೀವು ಕೇಳಿದಷ್ಟು ಸಮಯ ಕೊಡಲು ಆಗುವುದಿಲ್ಲ. ನಾಳೆ ಖುದ್ದಾಗಿ ಹಾಜರಾಗವೇಕು ಎಂದು ಸಿಸಿಬಿ ಅಧಿಕಾರಿಗಳು ಸೂಚಿಸಿದ್ದಾರೆ.

Check Also

ತಮಿಳು ಚಿತ್ರರಂಗದ ಖ್ಯಾತ ನಟ ಆತ್ಮಹತ್ಯೆಗೆ ಶರಣು

Spread the loveಚೆನ್ನೈ: ಕೌಟುಂಬಿಕ ಕಲಹಕ್ಕೆ ಬೇಸತ್ತು ತಮಿಳು ಚಿತ್ರರಂಗದ ಉದಯೋನ್ಮುಖ ನಟ ತೆನ್ನರಸು ಆತ್ಮಹತ್ಯೆಗೆ ಶರಣಾಗಿದ್ದಾರೆ. 2012ರಲ್ಲಿ ಬಿಡುಗಡೆಯಾಗಿದ್ದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Hiring Reporter’s For more Information Contact Above Number 876 225 4007 . Program producer
error: Content is protected !!