Breaking News
Hiring Reporter’s For more Information Contact Above Number 876 225 4007 . Program producer
Home / Breaking News / ಕರ್ತವ್ಯ ಲೋಪ : ಹೊಳೆಹೊನ್ನೂರು ಪಿಎಸ್‌ಐ ಸುರೇಶ್ ಅಮಾನತು

ಕರ್ತವ್ಯ ಲೋಪ : ಹೊಳೆಹೊನ್ನೂರು ಪಿಎಸ್‌ಐ ಸುರೇಶ್ ಅಮಾನತು

Spread the love

ಶಿವಮೊಗ್ಗ: ಕರ್ತವ್ಯ ಲೋಪ ಆರೋಪದ ಮೇಲೆ ಹೊಳೆಹೊನ್ನೂರು ಪೊಲೀಸ್ ಠಾಣೆಯ ಪಿಎಸ್‌ಐ ಸುರೇಶ್ ಹಾಗೂ ಸಿಬ್ಬಂದಿ ಪ್ರಕಾಶ್ ನಾಯ್ಕ ಅವರನ್ನು ಸೇವೆಯಿಂದ ಅಮಾನತುಗೊಳಿಸಿ ಎಸ್ಪಿ ಕೆ.ಎಂ.ಶಾಂತರಾಜ್ ಆದೇಶ ಹೊರಡಿಸಿದ್ದಾರೆ.

ಈ ಮೂಲಕ ಕಾನೂನು, ಸುವ್ಯವಸ್ಥೆ ಕಾಪಾಡುವಲ್ಲಿ ವಿಫಲರಾಗುವ ಸಿಬ್ಬಂದಿ ವಿರುದ್ಧವೂ ಶಿಸ್ತು ಕ್ರಮ ತೆಗೆದುಕೊಳ್ಳಲು ಹಿಂದೇಟು ಹಾಕುವುದಿಲ್ಲ ಎಂಬ ಸಂದೇಶ ರವಾನಿಸಿದ್ದಾರೆ. ಹೊಳೆಹೊನ್ನೂರು ಪೊಲೀಸ್ ರಾಣಾ ವ್ಯಾಪ್ತಿಯಲ್ಲಿ ಮಟ್ಕಾ, ಜೂಜಾಟ, ಅಕ್ರಮ ಮರಳುಗಾರಿಕೆ ಸೇರಿದಂತೆ ಕಾನೂನು ಬಾಹಿರ ಚಟುವಟಿಕೆ ಸಾಕಷ್ಟು ನಡೆಯುತ್ತಿದೆ. ಈ ಬಗ್ಗೆ ಕ್ರಮ ಕೈಗೊಳ್ಳುವಲ್ಲಿ ಸ್ಥಳೀಯ ಪೊಲೀಸ್ ಠಾಣೆಯ ಅಧಿಕಾರಿ ಹಾಗೂ ಸಿಬ್ಬಂದಿ ವಿಫಲರಾಗಿದ್ದಾರೆ ಎಂದು ಸಾಕಷ್ಟು ದೂರುಗಳು ಎಸ್​ಪಿ ಕಚೇರಿಗೆ ಬಂದಿತ್ತು.

ಕಾನ್ ಸ್ಟೇಬಲ್ ಪ್ರಕಾಶ್ ನಾಯ್ಕ ತಮ್ಮ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಕಾನೂನು ಬಾಹಿರ ಚಟುವಟಿಕೆ ಬಗ್ಗೆ ಇಲಾಖೆ ಮುಖ್ಯಸ್ಥರ ಗಮನಕ್ಕೆ ತರದೆ ರಾಜಕೀಯ ಪ್ರಭಾವ ಬಳಸಿಕೊಂಡು ಕರ್ತವ್ಯ ನಿರ್ವಹಿಸುತ್ತಿದ್ದಾರೆ ಎಂಬ ಆಪಾದನೆ ಕೇಳಿಬಂದಿತ್ತು.

ಈ ಹಿನ್ನೆಲೆಯಲ್ಲಿ ನಿಖರ ಮಾಹಿತಿ ಮೇರೆಗೆ ಎಸ್​ಪಿ ಕಚೇರಿಯ ಡಿಸಿಐಬಿನ ಇನ್ಸ್‌ಪೆಕ್ಟರ್ ಕುಮಾರಸ್ವಾಮಿ ನೇತೃತ್ವದ ತಂಡ ಜುಲೈ 23 ರಂದು ಹೊಳೆಹೊನ್ನೂರಿನ ಎನ್ ಟಿ ವೃತ್ತದಲ್ಲಿ ಇಸ್ಪೀಟ್ ಜೂಜಾಟದಲ್ಲಿ ತೊಡಗಿದ್ದ ತಂಡದ ಮೇಲೆ ದಾಳಿ ನಡೆಸಿ ತಿಪ್ಪೇಶಿ ಎಂಬಾತನ ಮೇಲೆ ಸ್ಥಳೀಯ ಪೊಲೀಸ್ ಠಾಣೆಯಲ್ಲೇ ಪ್ರಕರಣ ದಾಖಲಿಸಿತ್ತಲ್ಲದೆ 36,070 ರೂ.ಹಣವನ್ನು ವಶಪಡಿಸಿಕೊಳ್ಳಲಾಗಿತ್ತು.

ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಎಸ್​ಪಿ ಶಾಂತ ಕುಮಾರ್ ಠಾಣಾ ವ್ಯಾಪ್ತಿಯಲ್ಲಿ ರಾಜಾರೋಷವಾಗಿ ನಡೆಯುತ್ತಿದ್ದ ಇಸ್ಪೀಟ್, ಜೂಜಾಟ, ಅಕ್ರಮ ಮರಳುಗಾರಿಕೆ ಸೇರಿದಂತೆ ವಿವಿಧ ಕಾನೂನು ಬಾಹಿರ ಕೃತ್ಯಗಳನ್ನು ತಡೆಯಲು ವಿಫಲವಾದ ಪಿಎಸ್‌ಐ ಗಿರೀಶ್ ಹಾಗೂ ಎಸ್ ಬಿ ಕಾನ್ ಸ್ಟೇಬಲ್ ಪ್ರಕಾಶ್ ನಾಯ್ಕ ರನ್ನು ಸೇವೆಯಿಂದ ಅಮಾನತುಗೊಳಿಸಿ ಆದೇಶಿಸಿದ್ದಾರೆ.

Check Also

ತೋಟಗಾರಿಕೆ ಪಿತಾಮಹ ಡಾ. ಎಂ.ಹೆಚ್. ಮರಿಗೌಡ ಅವರ 104 ನೇ ಜನ್ಮದಿನ

Spread the loveಬೆಂಗಳೂರು: ತೋಟಗಾರಿಕೆ ಪಿತಾಮಹ ಡಾ. ಎಂ.ಹೆಚ್. ಮರಿಗೌಡ ಅವರ 104 ನೇ ಜನ್ಮದಿನದ ಅಂಗವಾಗಿ ತೋಟಗಾರಿಕೆ ದಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Hiring Reporter’s For more Information Contact Above Number 876 225 4007 . Program producer
error: Content is protected !!