Hiring Reporter’s For more Information Contact Above Number 876 225 4007 . Program producer
Home / Breaking News / ಶಿಕ್ಷಕರಿಗೆ ಸಿಹಿಸುದ್ದಿ ನೀಡಿದ ಶಿಕ್ಷಣ ಸಚಿವ ಸುರೇಶ್ ಕುಮಾರ್

ಶಿಕ್ಷಕರಿಗೆ ಸಿಹಿಸುದ್ದಿ ನೀಡಿದ ಶಿಕ್ಷಣ ಸಚಿವ ಸುರೇಶ್ ಕುಮಾರ್

Spread the love

ಆಗಸ್ಟ್ 15ರೊಳಗೆ ರಾಜ್ಯದಲ್ಲಿ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ಪ್ರಾರಂಭವಾಗಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಸಕ್ತ ಸಾಲಿನ ಶಿಕ್ಷಕರ ವರ್ಗಾವಣೆ ಕುರಿತು ಈಗಾಗಲೇ ಅಧಿಕಾರಿಗಳ ಸಭೆಯಲ್ಲಿ ಸೂಚಿಸಲಾಗಿದೆ. ಈ ಬಗ್ಗೆ ತಾಂತ್ರಿಕ ಅಂಶಗಳ ಕುರಿತು ಪರಿಶೀಲನೆ ನಡೆಯುತ್ತಿದೆ ಎಂದರು.

ಇದೇ ವೇಳೆ ಕೇಂದ್ರ ಸಚಿವ ಸಂಪುಟದಲ್ಲಿ ಅನುಮೋದನೆ ನೀಡಲಾದ ನೂತನ ರಾಷ್ಟ್ರೀಯ ಶಿಕ್ಷಣ ನೀತಿ-ಎನ್‌ಇಪಿ-2019 ಅನ್ನು ರಾಜ್ಯ ಸರಕಾರ ವ್ಯವಸ್ಥಿತವಾಗಿ ಜಾರಿಗೊಳಿಸಲಿದೆ ಎಂದು ಅವರು ಸ್ಪಷ್ಟಪಡಿಸಿದರು.

ನೂತನ ರಾಷ್ಟ್ರೀಯ ನೀತಿ ಅನುಮೋದನೆಗೊಂಡ ನಂತರ ಇಂದು ಕರಡು ರಾಷ್ಟ್ರೀಯ ಶಿಕ್ಷಣ ನೀತಿ ಸಮಿತಿ ಅಧ್ಯಕ್ಷರಾದ ಡಾ. ಕೆ. ಕಸ್ತೂರಿರಂಗನ್ ಅವರೊಂದಿಗೆ ವೆಬಿನಾರ್ ಮೂಲಕ ಸಂವಾದ ನಡೆಸಿದ ಅವರು, ವಿವಿಧ ಸ್ತರಗಳ, ನಾನಾ ಅಂತರಗಳಿರುವ ಈ ರಾಷ್ಟ್ರದ ಎಲ್ಲರಿಗೂ ಅನ್ವಯವಾಗಬಹುದಾದ ನೂತನ ಶಿಕ್ಷಣ ನೀತಿಯ ನ್ನು ಶ್ರಮವಹಿಸಿ ರೂಪಿಸಿದ್ದಕ್ಕೆ ಕಸ್ತೂರಿರಂಗನ್ ಅವರಿಗೆ ಕರ್ನಾಟಕ ಸರ್ಕಾರದ ಪರವಾಗಿ ಧನ್ಯವಾದ ಅರ್ಪಿಸಿದರು.

Check Also

ಹವಾಮಾನ ಇಲಾಖೆಯಿಂದ ರಾಜ್ಯದ ಜನತೆಗೆ ಮಹತ್ವದ ಸೂಚನೆ

Spread the loveಬೆಂಗಳೂರು: ಮುಂದಿನ 24 ಗಂಟೆಗಳಲ್ಲಿ ಕರ್ನಾಟಕದ ಕರಾವಳಿ ಭಾಗ ಮತ್ತು ದಕ್ಷಿಣ ಒಳನಾಡಿನಲ್ಲಿ ಅತಿ ಹೆಚ್ಚು ಮಳೆಯಾಗುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Hiring Reporter’s For more Information Contact Above Number 876 225 4007 . Program producer
error: Content is protected !!