Hiring Reporter’s For more Information Contact Above Number 876 225 4007 . Program producer
Home / Breaking News / ಬೆಳೆ ಹಾನಿಗೆ ಪರಿಹಾರ ನೀಡುವಲ್ಲಿ ವಿಫಲ : ಕೋನರಡ್ಡಿ ಪ್ರತಿಭಟನೆ

ಬೆಳೆ ಹಾನಿಗೆ ಪರಿಹಾರ ನೀಡುವಲ್ಲಿ ವಿಫಲ : ಕೋನರಡ್ಡಿ ಪ್ರತಿಭಟನೆ

Spread the love

ಹುಬ್ಬಳ್ಳಿ:ಅತಿಯಾಗಿ ಸುರಿದ ಬಾರಿ ಮಳೆಯಿಂದ ಅತಿವೃಷ್ಟಿಯಿಂದ ತಾಲೂಕಿನ ನವಲಗುಂದ ವ್ಯಾಪ್ತಿಯಲ್ಲಿ ಬರುವ ಗ್ರಾಮದಲ್ಲಿ ನೂರಾರು ಮನೆಗಳು ಬಿದ್ದಿದ್ದು’ ಅದರ ಜೊತೆಗೆ ಮುಂಗಾರು ಬೆಳೆಗಳು ಹಾನಿಯಾಗಿವೆ ಜಿಲ್ಲಾಡಳಿತ ಪರಿಹಾರ ನೀಡುವಲ್ಲಿ ವಿಫಲವಾಗಿದೆ ಎಂದು ಮಾಜಿ ಶಾಸಕ ಎನ್ ಹೆಚ್ ಕೋನರೆಡ್ಡಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು.

ನಗರದ ತಹಶಿಲ್ದಾರರ ಕಚೇರಿ ಎದುರುಗಡೆ ಪ್ರತಿಭಟನೆ ಮಾಡದ ಅವರು, ಕಳೆದ ವರ್ಷವೂ ಸಹ ಅತಿಯಾದ ಮಳೆಯಿಂದಾಗಿ ನೂರಾರು ಮನೆಗಳು ಬಿದ್ದಿವೆ,ಮತ್ತು ಮುಂಗಾರು ಬೆಳೆಗಳಾದ ಶೇಂಗಾ, ಹತ್ತಿ,ಹೆಸರು,ಹಲಸಂದಿ, ಸೇರಿದಂತೆ ಎಲ್ಲಾ ಬೆಳೆಗಳು ನಾಶವಾಗಿವೆ,ಇದರಿಂದಾಗಿ ರೈತರು ಹಾಗೂ ನವಲಗುಂದ ತಾಲೂಕಿನ ವ್ಯಾಪ್ತಿಯಲ್ಲಿ ಬರುವ ಗ್ರಾಮಸ್ಥರು ಜೀವನ ನಡೆಸುವುದು ಕಷ್ಟವಾಗಿದೆ,ಆದ್ದರಿಂದ ಕೂಡಲೇ ರಾಜ್ಯ ಸರಕಾರ ಬೆಳೆವಿಮೆ ಹಾಗೂ ಮನೆ ಕಳೆದುಕೊಂಡವರಿಗೆ ನೆರೆ ಪರಿಹಾರ ನೀಡುವಂತೆ ಸರಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಆದಷ್ಟು ಬೇಗ ಪರಿಹಾರ ನೀಡದೇ ಹೋದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದರು.

Check Also

ವಾಣಿಜ್ಯ ನಗರದಲ್ಲಿ ಹೆಚ್ಚಾಗುತ್ತಿರುವುದು ಬೈಕ್ ಕಳ್ಳತನ… ಸಾರ್ವಜನಿಕರೇ ಎಚ್ಚರ ಎಚ್ಚರ

Spread the loveಹುಬ್ಬಳ್ಳಿ: ನಗರದಲ್ಲಿ ಮನೆಗಳ ಮುಂದೆ ಹಾಗೂ ಪಾರ್ಕಿಂಗ್ ಜಾಗದಲ್ಲಿ ಪಾರ್ಕ್ ಮಾಡಿದ ದ್ವಿಚಕ್ರಗಳ ವಾಹನಗಳನ್ನು ಕಳ್ಳತನ ಮಾಡುತ್ತಿದ್ದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Hiring Reporter’s For more Information Contact Above Number 876 225 4007 . Program producer
error: Content is protected !!