Hiring Reporter’s For more Information Contact Above Number 876 225 4007 . Program producer
Home / Breaking News / ಜಲವಿದ್ಯುತ್ ಸ್ಥಾವರದಲ್ಲಿ ಬೆಂಕಿ ಅವಘಡ

ಜಲವಿದ್ಯುತ್ ಸ್ಥಾವರದಲ್ಲಿ ಬೆಂಕಿ ಅವಘಡ

Spread the love

ಆಂಧ್ರಪ್ರದೇಶ: ತೆಲಂಗಾಣ ಆಂಧ್ರಪ್ರದೇಶ ಗಡಿಯಲ್ಲಿರುವ ಶ್ರೀಶೈಲಂ ಜಲವಿದ್ಯುತ್ ಸ್ಥಾವರದಲ್ಲಿ ನಿನ್ನೆ ತಡರಾತ್ರಿ ಭಾರೀ ಬೆಂಕಿ ಅವಘಡ ಸಂಭವಿಸಿದೆ. ಘಟನೆಯಲ್ಲಿ ಸಿಲುಕಿಕೊಂಡಿದ್ದ 21 ಜನರನ್ನು ರಕ್ಷಣೆ ಮಾಡಲಾಗಿದ್ದು, ಇನ್ನೂ 9 ಮಂದಿ ಸ್ಥಾವರದೊಳಗೆ ಸಿಲುಕಿಕೊಂಡಿದ್ದಾರೆ ಎನ್ನಲಾಗಿದೆ. ಶಾರ್ಟ್ ಸರ್ಕ್ಯೂಟ್​​ನಿಂದ ಬೆಂಕಿ ಕಾಣಿಸಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಎನ್‌ಡಿಆರ್‌ಎಫ್ ತಂಡ ಹಾಗೂ ಅಗ್ನಿಶಾಮಕ ಸಿಬ್ಬಂದಿ ಸ್ಥಾವರದೊಳಗೆ ಸಿಲುಕಿರುವವರ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದೆ.

ಘಟನಾ ಸ್ಥಳಕ್ಕೆ ಇಂಧನ ಸಚಿವ ಜಿ.ಜಗದೀಶ್ವರ್ ರೆಡ್ಡಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಳಿಕ ಮಾತನಾಡಿದ ಅವರು ಘಟನೆ ಸಂಭವಿಸಿದಾಗ ಪವ ರ್‌ಹೌಸ್‌ನೊಳಗೆ ಒಟ್ಟು 30 ಜನರು ಕೆಲಸ ನಿರ್ವಹಿಸುತ್ತಿದ್ದರು. ಅದರಲ್ಲಿ 15 ಜನರನ್ನು ತುರ್ತು ನಿರ್ಗಮನ ಮಾರ್ಗದ ಮೂಲಕ ಹೊರತರಲಾಯಿತು.

6 ಮಂದಿಯನ್ನು ಸುರಂಗ ಮಾರ್ಗದ ಮೂಲಕ ರಕ್ಷಣೆ ಮಾಡಲಾಗಿದೆ. ಆದರೆ ಬೆಂಕಿ ಜ್ವಾಲೆ ಆವರಿಸಿ ಸುರಂಗದೊಳಗೆ ದಟ್ಟ ಹೊಗೆ ಆವರಿಸಿದ್ದರಿಂದ ಇತರೆ ಒಂಭತ್ತು ಮಂದಿ ಸಿಕ್ಕಿಬಿದ್ದಿದ್ದು ರಕ್ಷಣಾ ಕಾರ್ಯಾಚರಣೆಗೆ ಅಡ್ಡಿಯಾಗಿದೆ ಎಂದು ತಿಳಿಸಿದ್ದಾರೆ.

Check Also

ವಾಹನ ಸವಾರರಿಗೆ ಮತ್ತೊಂದು ಗುಡ್ ನ್ಯೂಸ್

Spread the loveಮೋಟಾರು ವಾಹನ ನಿಯಮಗಳಲ್ಲಿ ಕೇಂದ್ರ ಸರ್ಕಾರ ಬದಲಾವಣೆ ತಂದಿದ್ದು ಅಕ್ಟೋಬರ್ 1 ರಿಂದ ವಾಹನ ನಿಯಮಗಳಲ್ಲಿ ಬದಲಾವಣೆಯಾಗಲಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Hiring Reporter’s For more Information Contact Above Number 876 225 4007 . Program producer
error: Content is protected !!