Breaking News
Hiring Reporter’s For more Information Contact Above Number 876 225 4007 . Program producer
Home / Breaking News / ರಾಜ್ಯ ಸರ್ಕಾರದಿಂದ ರೈತ ಸಮುದಾಯಕ್ಕೆ ಶುಭಸುದ್ದಿ

ರಾಜ್ಯ ಸರ್ಕಾರದಿಂದ ರೈತ ಸಮುದಾಯಕ್ಕೆ ಶುಭಸುದ್ದಿ

Spread the love

ಬೆಂಗಳೂರು : ರೈತ ಸಮುದಾಯಕ್ಕೆ ಕೃಷಿ ಸಚಿವ ಬಿ.ಸಿ. ಪಾಟೀಲ್ ಸಿಹಿಸುದ್ದಿಯೊಂದು ನೀಡಿದ್ದು, ಮುಂಗಾರು ಹಂಗಾಮಿನಲ್ಲಿ ಉತ್ತಮ ಮಳೆಯಾಗುತ್ತಿರುವುದರಿಂದ ಆಗಸ್ಟ್ ವರೆಗೂ ಬಿತ್ತನೆ ಕಾರ್ಯ ಮುಂದುವರಿಯುವುದರಿಂದ ಬಿತ್ತನೆ ಬೀಜಗಳನ್ನು ರೈತರಿಗೆ ವಿತರಿಸಲು ಸಿದ್ದತೆ ಮಾಡಿಕೊಳ್ಳಲಾಗಿದೆ ಎಂದು ಸಚಿವ ಬಿ.ಸಿ.ಪಾಟೀಲ್ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಬಿ.ಸಿ.ಪಾಟೀಲ್, ರೈತರಿಗೆ ಬಿತ್ತನೆ ಬೀಜ ಹಾಗೂ ಯೂರಿಯಾ ಗೊಬ್ಬರ ಪೂರೈಕೆಗೆ ಕೊರತೆಯಾಗದಂತೆ ಕ್ರಮ ವಹಿಸಲಾಗಿದ್ದು, ಕಳೆದ ಬಾರಿಗಿಂತ ಹೆಚ್ಚುವರಿಯಾಗಿ ಯೂರಿಯಾ ಗೊಬ್ಬರ ಹಾಗೂ ಬಿತ್ತನೆ ಬೀಜ ವಿತರಿಸಲಾಗಿದೆ ಎಂದು ಹೇಳಿದ್ದಾರೆ.

2020-21 ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ 5.97 ಲಕ್ಷ ಕ್ವಿಂಟಾಲ್ ಬಿತ್ತನೆ ಬೀಜಗಳ ಬೇಡಿಕೆ ಇದ್ದು, ರಾಜ್ಯಾದ್ಯಂತ ಕೃಷಿ ಇಲಾಖೆಯ ರೈತ ಸಂಪರ್ಕ ಕೇಂದ್ರಗಳ ಮೂಲಕ ಇದುವರೆಗೂ 3,29,862.8 ಕ್ವಿಂಟಾಲ್ ಬಿತ್ತನೆ ಬೀಜಗಳನ್ನು ರೈತರಿಗೆ ನೀಡಲಾಗಿದೆ. ರೈತ ಸಂಪರ್ಕ ಕೇಂದ್ರಗಳಲ್ಲಿ ಇನ್ನು 52,110 ಕ್ವಿಂಟಾಲ್ ಬಿತ್ತನೆ ಬೀಜ ದಾಸ್ತಾನಿದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.

Check Also

ರನ್​ವೇಯಿಂದ ಜಾರಿದ 191 ಪ್ರಯಾಣಿಕರಿದ್ದ ಏರ್​ ಇಂಡಿಯಾ ವಿಮಾನ: ಅಪ್ಪಳಿಸಿದ ರಭಸಕ್ಕೆ ಎರಡು ಭಾಗ!

Spread the loveತಿರುವನಂತಪುರಂ​: ದುಬೈನಿಂದ 191 ಪ್ರಯಾಣಿಕರನ್ನು ಹೊತ್ತು ಕೇರಳ ತಲುಪಿದ ಏರ್​ ಇಂಡಿಯಾ ವಿಮಾನ ಕೋಳಿಕ್ಕೊಡ್​ ವಿಮಾನ ನಿಲ್ದಾಣ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Hiring Reporter’s For more Information Contact Above Number 876 225 4007 . Program producer
error: Content is protected !!