Hiring Reporter’s For more Information Contact Above Number 876 225 4007 . Program producer
Home / Breaking News / ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟ ಮೇಘನಾ ರಾಜ್!

ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟ ಮೇಘನಾ ರಾಜ್!

Spread the love

ಬೆಂಗಳೂರು : ಇತ್ತೀಚೆಗಷ್ಟೇ ನಿಧನರಾಗಿರುವ ನಟ ಚಿರಂಜೀವಿ ಸರ್ಜಾ ಅವರ ಪತ್ನಿ ಮೇಘನಾ ರಾಜ್ ಅವರು ಅಭಿಮಾನಿಗಳು ಗುಡ್ ನ್ಯೂಸ್ ಕೊಟ್ಟಿದ್ದಾರೆ.

ಕಳೆದ ಕೆಲವು ದಿನಗಳ ಹಿಂದೆಯಷ್ಟೇ ಮೇಘನಾ ಅವರ ಸೀಮಂತ ಕಾರ್ಯ ನಡೆದಿದೆ. ಇದರ ಬೆನ್ನಲ್ಲಿಯೇ ಅಭಿಮಾನಿಗಳೊಂದಿಗೆ ಮೇಘನಾ ಸಂತಸದಿಂದ ಮಾತನಾಡಿದ್ದಾರೆ. ಚಿರಂಜೀವಿ ಸರ್ಜಾ ಅವರು ಕೊನೆಯ ಬಾರಿ ನಟಿಸಿದ್ದ ಚಿತ್ರ ಶಿವಾರ್ಜುನ. ಈ ಸಿನಿಮಾ ಅ. 16ರಂದು ತೆರೆಯ ಮೇಲೆ ಬರಲಿದೆ. ಈ ಸಿಹಿ ಸುದ್ದಿಯನ್ನು ಮೇಘನಾ ತಮ್ಮ ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

ಚಿರು ಮತ್ತೆ ಉದಯಿಸುತ್ತಿದ್ದಾರೆ, ಅದಕ್ಕೆ ಕಾರಣ ಅಕ್ಟೋಬರ್ 16ರಂದು ಶಿವಾರ್ಜುನ ಸಿನಿಮಾ ಮತ್ತೆ ಬಿಡುಗಡೆಯಾಗುತ್ತಿದೆ ಎಂದು ಕ್ಯಾಪ್ಶನ್ ಹಾಕಿಕೊಂಡಿದ್ದಾರೆ. ಜೊತೆಗೆ ಸಿನಿಮಾ ಪೋಸ್ಟರನ್ನು ಪೋಸ್ಟ್ ಕೂಡ ಮಾಡಿದ್ದಾರೆ.

Check Also

ಬ್ಯಾಂಕ್‌ಗಳ ಸಾಲಗಳ ಮೇಲಿನ ಚಕ್ರಬಡ್ಡಿ ಮನ್ನಾ

Spread the loveನವದೆಹಲಿ: ನವರಾತ್ರಿ ಸಂದರ್ಭದಲ್ಲಿ ಸಾಲಗಾರರಿಗೆ ಕೇಂದ್ರ ಸರ್ಕಾರ ಶುಭ ಸುದ್ದಿ ನೀಡಿದೆ. ಮಾರ್ಚ್ 1ರಿಂದ ಆಗಸ್ಟ್ 31ರವರೆಗಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Hiring Reporter’s For more Information Contact Above Number 876 225 4007 . Program producer
error: Content is protected !!