Hiring Reporter’s For more Information Contact Above Number 876 225 4007 . Program producer
Home / Breaking News / ಸರ್ಕಾರಿ ಉದ್ಯೋಗಾಂಕ್ಷಿಗಳಿಗೆ ಗುಡ್ ನ್ಯೂಸ್

ಸರ್ಕಾರಿ ಉದ್ಯೋಗಾಂಕ್ಷಿಗಳಿಗೆ ಗುಡ್ ನ್ಯೂಸ್

Spread the love

ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಶನಿವಾರ ಮಾತನಾಡಿ, ಇದುವರೆಗೆ 23 ರಾಜ್ಯಗಳು ಮತ್ತು ಎಂಟು ಕೇಂದ್ರಾಡಳಿತ ಪ್ರದೇಶಗಳಲ್ಲಿ ಸರ್ಕಾರಿ ಉದ್ಯೋಗಗಳ ನೇಮಕಾತಿ ಸಂದರ್ಶನವನ್ನು ರದ್ದು ಪಡಿಸಲಾಗಿದೆ ಎಂದು ಕೇಂದ್ರ ಸಚಿವ ಹೇಳಿದ್ದಾರೆ. 2016ರಿಂದ ಕೇಂದ್ರ ಸರ್ಕಾರದಲ್ಲಿ ಗ್ರೂಪ್-ಬಿ (ಗೆಜೆಟೆಡ್ ಅಲ್ಲದ) ಮತ್ತು ಗ್ರೂಪ್ ಸಿ ಹುದ್ದೆಗಳಿಗೆ ಸಂದರ್ಶನ ರದ್ದಾಗಿರುವುದರಿಂದ ಈ ಕ್ರಮ ಅನುಸರಿಸಲಾಗಿದೆ ಎಂದು ಸಿಂಗ್ ತಿಳಿಸಿದ್ದಾರೆ.

2015ರಲ್ಲಿ ಸ್ವಾತಂತ್ರ್ಯ ದಿನಾಚರಣೆ ಸಂದರ್ಭದಲ್ಲಿ ನವ ದೆಹಲಿಯ ಕೆಂಪುಕೋಟೆಯಲ್ಲಿ ಭಾಷಣ ಮಾಡುತ್ತಿದ್ದ ಪ್ರಧಾನಿ ನರೇಂದ್ರ ಮೋದಿ ಸಂದರ್ಶನವನ್ನ ರದ್ದುಪಡಿಸಿ, ಲಿಖಿತ ಪರೀಕ್ಷೆ ಮೂಲಕ ಸಂದರ್ಶನದ ಆಯ್ಕೆಯನ್ನ ಸಂಪೂರ್ಣವಾಗಿ ಮಾಡಬೇಕು ಎಂದು ಸಲಹೆ ನೀಡಿದ್ದರು ಎಂದು ಸಚಿವರು ನೆನಪಿಸಿಕೊಂಡರು.

ಪ್ರಧಾನಿ ಅವರ ಸಲಹೆಯನ್ನ ತ್ವರಿತವಾಗಿ ಪಾಲಿಸುವಂತೆ ಸಿಬ್ಬಂದಿ ಮತ್ತು ತರಬೇತಿ ಇಲಾಖೆ (ಡಿಒಪಿಟಿ) ಕ್ಷಿಪ್ರ ಕಾರ್ಯಾಚರಣೆ ನಡೆಸಿ, ಮೂರು ತಿಂಗಳೊಳಗೆ ಕೇಂದ್ರ ಸರ್ಕಾರದ ನೇಮಕಾತಿಗೆ ಸಂದರ್ಶನವನ್ನು ರದ್ದುಗೊಳಿಸುವ ಸಂಪೂರ್ಣ ಪ್ರಕ್ರಿಯೆಯನ್ನ ಪೂರ್ಣಗೊಳಿಸಿ, 2016ರ ಜನವರಿ 1ರಿಂದ ಅನ್ವಯವಾಗುವಂತೆ ಕೇಂದ್ರ ಸರ್ಕಾರದ ನೇಮಕಾತಿಯನ್ನ ರದ್ದುಗೊಳಿಸುವುದಾಗಿ ಘೋಷಿಸಿದರು.

Check Also

ಬ್ಯಾಂಕ್‌ಗಳ ಸಾಲಗಳ ಮೇಲಿನ ಚಕ್ರಬಡ್ಡಿ ಮನ್ನಾ

Spread the loveನವದೆಹಲಿ: ನವರಾತ್ರಿ ಸಂದರ್ಭದಲ್ಲಿ ಸಾಲಗಾರರಿಗೆ ಕೇಂದ್ರ ಸರ್ಕಾರ ಶುಭ ಸುದ್ದಿ ನೀಡಿದೆ. ಮಾರ್ಚ್ 1ರಿಂದ ಆಗಸ್ಟ್ 31ರವರೆಗಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Hiring Reporter’s For more Information Contact Above Number 876 225 4007 . Program producer
error: Content is protected !!