Breaking News
Hiring Reporter’s For more Information Contact Above Number 876 225 4007 . Program producer
Home / Breaking News / ಕೇಂದ್ರ ಸರ್ಕಾರದಿಂದ ಜನತೆಗೆ ಗುಡ್ ನ್ಯೂಸ್.

ಕೇಂದ್ರ ಸರ್ಕಾರದಿಂದ ಜನತೆಗೆ ಗುಡ್ ನ್ಯೂಸ್.

 

ನವದೆಹಲಿ : ಕೇಂದ್ರ ಸರ್ಕಾರವು ದೇಶದ ಜನತೆಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಡಿ.15ರೊಳಗೆ 10 ಬೃಹತ್ ಮೂಲಸೌಕರ್ಯ ಯೋಜನೆಗಳನ್ನು ಘೋಷಿಸಲು ಕೇಂದ್ರ ಸರ್ಕಾರ ಸಿದ್ಧತೆ ನಡೆಸಿದೆ.
ಹೌದು, ಆರ್ಥಿಕ ಹಿಂಜರಿತದಿಂದ ದೇಶವನ್ನು ಹೊರತರಲು ಮುಂದಾಗಿರುವ ಕೇಂದ್ರ ಸರ್ಕಾರ ಮುಂದಿನ 5 ವರ್ಷಗಳಲ್ಲಿ 100 ಲಕ್ಷ ಕೊಟಿ ರೂ. ಬಂಡವಾಳವನ್ನು ಮೂಲ ಸೌಕರ್ಯ ಕ್ಷೇತ್ರದಲ್ಲಿ ಹೂಡಿಕೆ ಮಾಡಲು ಉದ್ದೇಶಿಸಲಾಗಿದ್ದು, ಶೀಘ್ರದಲ್ಲೇ ಯೋಜನೆಗಳನ್ನು ಘೋಷಿಸಲಾಗುತ್ತದೆ ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
ಇನ್ನು ದೇಶದಲ್ಲಿ ಕಾರ್ಪೋರೆಟ್ ತೆರಿಗೆ ದರಗಳನ್ನು ಕಡಿತ ಮಾಡಿರುವ ಹಿನ್ನೆಲೆಯಲ್ಲಿ ಸುಮಾರು 12 ಜಾಗತಿಕ ಕಂಪನಿಗಳು ತಮ್ಮ ನೆಲೆಯನ್ನು ಚೀನಾದಿಂದ ಭಾರತಕ್ಕೆ ಸ್ಥಳಾಂತರಿಸಲು ಆಸಕ್ತಿ ವ್ಯಕ್ತಪಡಿಸಿವೆ.
ಇದರಿಂದ ದೇಶದಲ್ಲಿ ಉದ್ಯೋಗ ಸೃಷ್ಟಿಯಾಗುತ್ತದೆ ಎಂದು ತಿಳಿಸಿದ್ದಾರೆ.

Share

About Admin BIG TV NEWS

Check Also

ಡಿಕೆಶಿ ವಿರುದ್ಧ ಯಡಿಯೂರಪ್ಪ ಹೊಸ ಬಾಂಬ್

ದಾವಣಗೆರೆ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿರುದ್ಧ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಸ್ಪೋಟಕ ಆರೋಪ ಮಾಡಿದ್ದಾರೆ.ಕೆಪಿಸಿಸಿ ಅಧ್ಯಕ್ಷ ಡಿ.ಕೆ. …

Leave a Reply

Your email address will not be published. Required fields are marked *

error: Content is protected !!