Hiring Reporter’s For more Information Contact Above Number 876 225 4007 . Program producer
Home / Breaking News / ʼಅನ್ನದಾತʼರಿಗೆ ಕೇಂದ್ರ ಸರ್ಕಾರದಿಂದ‌ ಗುಡ್‌ ನ್ಯೂಸ್

ʼಅನ್ನದಾತʼರಿಗೆ ಕೇಂದ್ರ ಸರ್ಕಾರದಿಂದ‌ ಗುಡ್‌ ನ್ಯೂಸ್

Spread the love

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಆರನೇ ಕಂತು ಶೀಘ್ರವೇ ರೈತರ ಖಾತೆ ಸೇರಲಿದೆ. ಈ ಬಾರಿ ಸುಮಾರು 10 ಕೋಟಿ ರೈತರು 2 – 2 ಸಾವಿರ ರೂಪಾಯಿಗಳನ್ನು ಪಡೆಯಲಿದ್ದಾರೆ. ಕೊರೊನಾ ಕಾಲದಲ್ಲೂ ಮೋದಿ ಸರ್ಕಾರ ಸುಮಾರು 20,000 ಕೋಟಿ ರೂಪಾಯಿಗಳ ಸಹಾಯವನ್ನು ರೈತರಿಗೆ ಮಾಡ್ತಿದೆ.

ಈ ಹಣವು ಖಾರೀಫ್ ಋತುವಿನಲ್ಲಿ ಬಹಳ ಸಹಾಯವಾಗಲಿದೆ. ಯೋಜನೆಯ ಸಿಇಒ ವಿವೇಕ್ ಅಗರ್ವಾಲ್, ಹಣವನ್ನು ಕಳುಹಿಸುವ ಪ್ರಕ್ರಿಯೆ ಪ್ರಾರಂಭವಾಗಿದೆ. ಆಗಸ್ಟ್ 1 ರಿಂದ ನವೆಂಬರ್ 30 ರವರೆಗೆ ಈ ಹಣವನ್ನು ನೋಂದಾಯಿತ ರೈತರ ಬ್ಯಾಂಕ್ ಖಾತೆಗೆ ಕಳುಹಿಸಲಾಗುತ್ತದೆ ಎಂದಿದ್ದಾರೆ.

ಪಿಎಂ ಕಿಸಾನ್ ಯೋಜನೆ ಜಾರಿಗೆ ಬಂದು ಇಂದಿಗೆ 19 ತಿಂಗಳುಗಳು ಪೂರ್ಣಗೊಂಡಿವೆ. ಯೋಜನೆಯಡಿ ಈವರೆಗೆ 10 ಕೋಟಿ 22 ಲಕ್ಷ ರೈತರು ಹೆಸರು ನೋಂದಾಯಿಸಿದ್ದಾರೆ. ಪಶ್ಚಿಮ ಬಂಗಾಳ ಮಾತ್ರ ಇದನ್ನು ಇನ್ನೂ ಜಾರಿಗೆ ತಂದಿಲ್ಲ.

ಇತಿಹಾಸದಲ್ಲಿ ಮೊದಲ ಬಾರಿಗೆ ರೈತರ ಬ್ಯಾಂಕ್ ಖಾತೆಗೆ ನೇರವಾಗಿ ಹಣವನ್ನು ಕಳುಹಿಸುವ ಯೋಜನೆ ಇದಾಗಿದೆ.

Check Also

ಹವಾಮಾನ ಇಲಾಖೆಯಿಂದ ರಾಜ್ಯದ ಜನತೆಗೆ ಮಹತ್ವದ ಸೂಚನೆ

Spread the loveಬೆಂಗಳೂರು: ಮುಂದಿನ 24 ಗಂಟೆಗಳಲ್ಲಿ ಕರ್ನಾಟಕದ ಕರಾವಳಿ ಭಾಗ ಮತ್ತು ದಕ್ಷಿಣ ಒಳನಾಡಿನಲ್ಲಿ ಅತಿ ಹೆಚ್ಚು ಮಳೆಯಾಗುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Hiring Reporter’s For more Information Contact Above Number 876 225 4007 . Program producer
error: Content is protected !!