Breaking News
Hiring Reporter’s For more Information Contact Above Number 876 225 4007 . Program producer
Home / ಸುದ್ದಿ / ಕರ್ನಾಟಕ / ಅಂಗನವಾಡಿ ಕಾರ್ಯಕರ್ತೆಯರಿಗೆ ಸರ್ಕಾರದಿಂದ ಬಂಪರ್ ಕೊಡುಗೆ.

ಅಂಗನವಾಡಿ ಕಾರ್ಯಕರ್ತೆಯರಿಗೆ ಸರ್ಕಾರದಿಂದ ಬಂಪರ್ ಕೊಡುಗೆ.

ಬೆಂಗಳೂರು: ಅಂಗನವಾಡಿ ಕಾರ್ಯಕರ್ತೆಯರು, ಮಿನಿ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಬಹುದಿನಗಳ ಬೇಡಿಕೆಯಾದ ಗೌರವಧನ ಹೆಚ್ಚಳ ಮಾಡುವ ಮೂಲಕ ರಾಜ್ಯ ಸರ್ಕಾರ ದೀಪಾವಳಿ ಹಬ್ಬದ ಬಂಪರ್ ಕೊಡುಗೆ ನೀಡಿದೆ. 2018 ಅಕ್ಟೋಬರ್ 1ರಿಂದ ಪೂರ್ವಾನ್ವಯವಾಗುವಂತೆ ಅಂಗನವಾಡಿ ಕಾರ್ಯಕರ್ತೆಯರು 2 ಸಾವಿರ, ಮಿನಿ ಅಂಗನವಾಡಿ ಕಾರ್ಯಕರ್ತೆಯರಿಗೆ 1250 ಹಾಗೂ ಸಹಾಯಕಿಯರಿಗೆ 1 ಸಾವಿರ ಗೌರವಧನವನ್ನು ಹೆಚ್ಚಳ ಮಾಡಲಾಗಿದ್ದು, ನವೆಂಬರ್‍ನಿಂದಲೇ ಇದು ಅನುಷ್ಠಾನವಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,ಗೌರವ ಧನ ಹೆಚ್ಚಳದಲ್ಲಿ ಕೇಂದ್ರ ಸರ್ಕಾರ 1500 ರೂ. ನೀಡಿದರೆ ರಾಜ್ಯ ಸರ್ಕಾರ 500 ರೂ. ನೀಡಲಿದೆ. ಅಕ್ಟೋಬರ್ ತಿಂಗಳಿನಿಂದ ಬಾಕಿ ಉಳಿದಿರುವ ಹಣವನ್ನು ಒಂದೇ ಕಂತಿನಲ್ಲಿ ಬಿಡುಗಡೆ ಮಾಡುವಂತೆ ಹಣಕಾಸು ಇಲಾಖೆಗೆ ಪ್ರಸ್ತಾವನೆ ಸಲ್ಲಿಸಿದೆ. ಅಂಗನವಾಡಿ ಕಾರ್ಯಕರ್ತೆಯರ ಬಹುದಿನಗಳ ಬೇಡಿಕೆಯನ್ನು ಈಡೇರಿಸಿದ್ದೇವೆ ಎಂದರು.

2018ರ ಅಕ್ಟೋಬರ್ ತಿಂಗಳಿನಲ್ಲೇ ಪ್ರಧಾನಿ ಮೋದಿ ಅಂಗನವಾಡಿ ಕಾರ್ಯಕರ್ತೆಯರ ಗೌರವಧನವನ್ನು ಹೆಚ್ಚಳ ಮಾಡಿದ್ದರು. ಆದರೆ ಕೆಲವು ತಾಂತ್ರಿಕ ಕಾರಣಗಳಿಂದ ಇದು ಅನುಷ್ಠಾನವಾಗಿರಲಿಲ್ಲ. ಈ ಸಂಬಂಧ ಮುಖ್ಯಮಂತ್ರಿ ಯಡಿಯೂರಪ್ಪ ಹಣಕಾಸು ಇಲಾಖೆ ಅಧಿಕಾರಿಗಳ ಜೊತೆ ಚರ್ಚಿಸಿ ವೇತನ ಹೆಚ್ಚಳಕ್ಕೆ ಅನುಮೋದನೆ ಪಡೆದುದ್ದಾಗಿ ವಿವರಿಸಿದರು. ರಾಜ್ಯದಲ್ಲಿ 62,580 ಅಂಗನವಾಡಿ ಕಾರ್ಯಕರ್ತೆಯರು ಕಾರ್ಯ ನಿರ್ವಹಿಸುತ್ತಿದ್ದಾರೆ.
3,310 ಮಿನಿ ಅಂಗನವಾಡಿ ಕಾರ್ಯಕರ್ತೆಯರು, 62,600 ಸಹಾಯಕಿಯರು ಒಟ್ಟು 1,28,000 ಸಿಬ್ಬಂದಿಗೆ ಅನ್ವಯವಾಗಲಿದೆ. ಇವರೆಲ್ಲರಿಗೂ ಗೌರವಧನ ಜಾರಿಗೆಯಾಗಲಿದೆ. ಇದು ದೀಪಾವಳಿ ಕೊಡುಗೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

Share

About Vijayalakshmi

Check Also

Featured Video Play Icon

ಎಲ್ಲಡೆ ಶಿವನ ಆರಾಧನೆ ಭಕ್ತಿಯಲ್ಲಿ ಮಿಂದೆದ್ದ ಹುಬ್ಬಳ್ಳಿಯ ಜನರು | MAHA SHIVARATRI | BIG TV NEWS

Shaikh BIG TV NEWS, Hubballi See author's posts Share

Leave a Reply

Your email address will not be published. Required fields are marked *

error: Content is protected !!