Hiring Reporter’s For more Information Contact Above Number 876 225 4007 . Program producer
Home / Breaking News / ‘ಬೀದಿ ವ್ಯಾಪಾರಿಗಳಿಗೆ’ ಮಹತ್ವದ ಮಾಹಿತಿ

‘ಬೀದಿ ವ್ಯಾಪಾರಿಗಳಿಗೆ’ ಮಹತ್ವದ ಮಾಹಿತಿ

Spread the love

ದಾವಣಗೆರೆ: ಕೇಂದ್ರ ಪುರಸ್ಕøತ ‘ಪ್ರಧಾನ ಮಂತ್ರಿ ಬೀದಿ ವ್ಯಾಪಾರಿಗಳ ಆತ್ಮ ನಿರ್ಭರ್ ನಿಧಿ’ಯ (ಪಿಎಂ ಸ್ವನಿಧಿ) ಯೋಜನೆಯಡಿ ಕಿರು ಸಾಲ ಮತ್ತು ಬಡ್ಡಿ ಸಹಾಯಧನ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ. ಕೋವಿಡ್-19 ಲಾಕ್‍ಡೌನ್ ಅವಧಿಯು ಬೀದಿ ವ್ಯಾಪಾರಸ್ಥರ ಜೀವನೋಪಾಯದ ಮೇಲೆ ಪ್ರತಿಕೂಲ ಪರಿಣಾಮವನ್ನು ಬೀರಿದ್ದು, ಬೀದಿ ವ್ಯಾಪಾರಿಗಳ ಜೀವನೋಪಾಯ ಅಭಿವೃದ್ದಿಗಾಗಿ ಹಾಗೂ ಅವರ ವ್ಯವಹಾರವನ್ನು ಪುನಾರಾರಂಭಿಸಲು ಬಂಡವಾಳ ಒದಗಿಸುವ ತುರ್ತು ಅವಶ್ಯಕತೆ ಇರುವುದರಿಂದ ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಮಂತ್ರಾಲಯ, ಭಾರತ ಸರ್ಕಾರ, ನವದೆಹಲಿರವರು ಬೀದಿ ವ್ಯಾಪಾರಸ್ಥರಿಗೆ ಪ್ರಧಾನಮಂತ್ರಿ ಬೀದಿ ವ್ಯಾಪಾರಿಗಳ ಆತ್ಮ ನಿರ್ಭರ್ ನಿಧಿಯ ಯೋಜನೆಯನ್ನು ಅನುಷ್ಟಾನಗೊಳಿಸಿರುತ್ತಾರೆ.

ಈ ಯೋಜನೆಯ ನಿಯಮದಂತೆ ಅರ್ಹ ಬೀದಿ ವ್ಯಾಪಾರಸ್ಥರು ರೂ.10,000/-ಗಳ ಸಾಲ ಮತ್ತು ಬಡ್ಡಿ ಸಹಾಯ ಧನ ಪಡೆಯಬಹುದಾಗಿದ್ದು, ಆಸಕ್ತ ಬೀದಿ ವ್ಯಾಪಾರಸ್ಥರು ಈ ಯೋಜನೆಯ ವೆಬ್ ಪೋರ್ಟಲ್ https://pmsvanidhi.mohua.gov.in/ ಮೂಲಕ ಈಗಾಗಲೇ ಖಾತೆ ಹೊಂದಿರುವ ಬ್ಯಾಂಕ್‍ಗಳನ್ನು ಆಯ್ಕೆ ಮಾಡಿಕೊಂಡು ಕೂಡಲೇ ಅರ್ಜಿ ಸಲ್ಲಿಸಬಹುದು.

ಬೀದಿಬದಿ ವ್ಯಾಪಾರಸ್ಥ ಕಾರ್ಡ್ ಹೊಂದದೇ ಇರುವವರು ಮಹಾನಗರಪಾಲಿಕೆಯಲ್ಲಿ ತೆರೆಯಲಾಗಿರುವ ಸಹಾಯ ಕೇಂದ್ರದ ಮೂಲಕ 24 ಗಂಟೆಯೊಳಗಾಗಿ ಕಾರ್ಡ್ ಪಡೆಯಲು ಅವಕಾಶ ಕಲ್ಪಿಸಲಾಗಿದೆ. ಅರ್ಜಿ ಸಲ್ಲಿಸಿದ ಕೇವಲ 10 ದಿನಗಳ ಒಳಗಾಗಿ ಸಾಲ ಮತ್ತು ಸಹಾಯಧನ ದೊರಕಲಿದೆ ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Check Also

ಬ್ಯಾಂಕ್‌ಗಳ ಸಾಲಗಳ ಮೇಲಿನ ಚಕ್ರಬಡ್ಡಿ ಮನ್ನಾ

Spread the loveನವದೆಹಲಿ: ನವರಾತ್ರಿ ಸಂದರ್ಭದಲ್ಲಿ ಸಾಲಗಾರರಿಗೆ ಕೇಂದ್ರ ಸರ್ಕಾರ ಶುಭ ಸುದ್ದಿ ನೀಡಿದೆ. ಮಾರ್ಚ್ 1ರಿಂದ ಆಗಸ್ಟ್ 31ರವರೆಗಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Hiring Reporter’s For more Information Contact Above Number 876 225 4007 . Program producer
error: Content is protected !!