Hiring Reporter’s For more Information Contact Above Number 876 225 4007 . Program producer
Home / Breaking News / ʼಕಟ್ಟಡ ಕಾರ್ಮಿಕʼರಿಗೆ ಭರ್ಜರಿ ಗುಡ್‌ ನ್ಯೂಸ್

ʼಕಟ್ಟಡ ಕಾರ್ಮಿಕʼರಿಗೆ ಭರ್ಜರಿ ಗುಡ್‌ ನ್ಯೂಸ್

Spread the love

ಮೈಸೂರು: ಕೆಎಸ್‌ಆರ್‌ಟಿಸಿ ಅಧ್ಯಕ್ಷರಾದ ಹೊಳಲ್ಕೆರೆ ಶಾಸಕ ಎಂ.ಚಂದ್ರಪ್ಪ ಕಟ್ಟಡ ಕಾರ್ಮಿಕರಿಗೆ ಗುಡ್‌ ನ್ಯೂಸ್‌ ನೀಡಿದ್ದು, ಉಚಿತ ಪಾಸ್‌ ನೀಡುವುದು ಸೇರಿದಂತೆ ಅನೇಕ ಸುಧಾರಣ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಹೇಳಿದ್ದಾರೆ.

ಕಟ್ಟಡ ಕಾರ್ಮಿಕರಿಗೆ ಉಚಿತ ಬಸ್‌ ಸೌಲಭ್ಯ ಕಲ್ಪಿಸುವ ಕುರಿತು ಕಾರ್ಮಿಕ ಇಲಾಖೆಯೊಡನೆ ಸಮಾಲೋಚನೆ ನಡೆಸಲಾಗುವುದು. ಪ್ರಸ್ತುತ ಮೈಸೂರು ಜಿಲ್ಲೆಯಲ್ಲಿ ಪ್ರಾಯೋಗಿಕವಾಗಿ ಜಾರಿಗೊಳಿಸಿ, ನಂತರ ರಾಜ್ಯದ ಎಲ್ಲೆಡೆ ವಿಸ್ತರಿಸಲಾಗುವುದು ಎಂದಿದ್ದಾರೆ.

ಇನ್ನು ಈ ಬಸ್‌ ಪಾಸ್‌ ಸೌಲಭ್ಯ ಜಿಲ್ಲೆ ವ್ಯಾಪ್ತಿಯಲ್ಲಿ ಮಾತ್ರವಲ್ಲದೆ ಒಂದು ಜಿಲ್ಲೆಯಿಂದ ಮತ್ತೊಂದು ಜಿಲ್ಲೆಗೆ ತೆರಳಲೂ ಕೂಡ ಅನುಕೂಲ ಕಲ್ಪಿಸಲಾಗುವುದು. ಅಂದ್ಹಾಗೆ, ಜಿಲ್ಲೆಯಲ್ಲಿ ಒಟ್ಟು 60,611 ಕಟ್ಟಡ ಕಾರ್ಮಿಕರಿಗೆ ಈ ಯೋಜನೆ ಲಭ್ಯವಾಗಲಿದೆ.

ಇದು ಕೊರೊನಾ ಕಾರಣದಿಂದ ಕಂಗಲಾಗಿದ್ದ ಕಾರ್ಮಿಕರಿಗೆ ಕೊಂಚ ನೆರವಾಗಲಿದೆ ಎಂದು ಶಾಸಕ ಎಂ.ಚಂದ್ರಪ್ಪ ಹೇಳಿದರು.

Check Also

ಬ್ಯಾಂಕ್‌ಗಳ ಸಾಲಗಳ ಮೇಲಿನ ಚಕ್ರಬಡ್ಡಿ ಮನ್ನಾ

Spread the loveನವದೆಹಲಿ: ನವರಾತ್ರಿ ಸಂದರ್ಭದಲ್ಲಿ ಸಾಲಗಾರರಿಗೆ ಕೇಂದ್ರ ಸರ್ಕಾರ ಶುಭ ಸುದ್ದಿ ನೀಡಿದೆ. ಮಾರ್ಚ್ 1ರಿಂದ ಆಗಸ್ಟ್ 31ರವರೆಗಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Hiring Reporter’s For more Information Contact Above Number 876 225 4007 . Program producer
error: Content is protected !!