Breaking News
Hiring Reporter’s For more Information Contact Above Number 876 225 4007 . Program producer
Home / Breaking News / ಹೆಚ್.ಡಿ. ಕುಮಾರಸ್ವಾಮಿಗೆ ನೋಬೆಲ್ ಪ್ರಶಸ್ತಿ ನೀಡಬೇಕು: ಈಶ್ವರಪ್ಪ ವ್ಯಂಗ್ಯ.

ಹೆಚ್.ಡಿ. ಕುಮಾರಸ್ವಾಮಿಗೆ ನೋಬೆಲ್ ಪ್ರಶಸ್ತಿ ನೀಡಬೇಕು: ಈಶ್ವರಪ್ಪ ವ್ಯಂಗ್ಯ.

ಅಥಣಿ: ಮಾಜಿ ಸಿಎಂ ಎಚ್‌. ಡಿ. ಕುಮಾರಸ್ಚಾಮಿಗೆ ನೋಬೆಲ್ ಪ್ರಶಸ್ತಿ ಕೊಡಬೇಕು ಎಂದು ಸಚಿವ ಕೆ. ಎಸ್. ಈಶ್ವರಪ್ಪ ವ್ಯಂಗ್ಯವಾಡಿದರು.
ಅಥಣಿಯಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಅವರಪ್ಪ ಮತ್ತು ಮಗನನ್ನು ಗೆಲ್ಲಿಸಿಕೊಳ್ಳಲು ಎಚ್ ಡಿ‌ ಕೆ ಗೆ ಆಗಲಿಲ್ಲ. ಅಂತವರು ಬೈ ಎಲೆಕ್ಷನ್ ಬಳಿಕ ಬಿಜೆಪಿ ಸರಕಾರ ಪತನವಾಗಲಿದೆ ಎಂದು ಎಚ್. ಡಿ. ಕುಮಾರಸ್ವಾಮಿ ಹೇಳಿದ್ದಾರೆ.ಹೀಗಾಗಿ ಎಚ್. ಡಿ. ಕೆ. ಗೆ ನೋಬೆಲ್ ಪ್ರಶಸ್ತಿ ನೀಡಬೇಕು ಎಂದರು.
ಡಿ. 5 ರ ಬಳಿಕವೂ ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಮುಂದುವರೆಯಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಸರಕಾರ ಪತನ ಕುರಿತು ಮಾಜಿ ಸಿಎಂ ಎಸ್. ಸಿದ್ಧರಾಮಯ್ಯ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಈಶ್ವರಪ್ಪ , ಸಿದ್ದರಾಮಯ್ಯ ಹೇಳುವುದೆಲ್ಲ ಸುಳ್ಳು.
ಸಿದ್ಧರಾಮಯ್ಯ ಹೆಸರು ಹೇಳಲೂ ನನಗೆ ಇಷ್ಟವಿಲ್ಲ.
ಬೈ ಎಲೆಕ್ಷನ್ ಬಳಿಕ ಸಿದ್ಧರಾಮಯ್ಯ ಪ್ರತಿಪಕ್ಷದ ಸ್ಥಾನದಲ್ಲೂ ಇರಲ್ಲ. ರಾಮ ಲಕ್ಷ್ನಣರಂತೆ ಯಡಿಯೂರಪ್ಪರಂತೆ ಚುನಾವಣೆಯಲ್ಲಿ ಜಯಭೇರಿ ಬಾರಿಸಲಿದ್ದಾರೆ ಎಂದರು‌. ಚುನಾವಣೆ ಬಳಿಕ ಮಹೇಶ‌ ಕುಮಠಳ್ಳಿ ಸಚಿವರಾಗಲಿದ್ದಾರೆ. ಅಥಣಿಗೆ ಡಿಸಿಎಂ, ಸಚಿವ ಎರಡು ಸ್ಥಾನ ಸಿಗಲಿದೆ ಎಂದು ತಿಳಿಸಿದರು.

Share

About Prakash s kamble BIG TV NEWS, Athani

Check Also

ಡಿಕೆಶಿ ವಿರುದ್ಧ ಯಡಿಯೂರಪ್ಪ ಹೊಸ ಬಾಂಬ್

ದಾವಣಗೆರೆ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿರುದ್ಧ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಸ್ಪೋಟಕ ಆರೋಪ ಮಾಡಿದ್ದಾರೆ.ಕೆಪಿಸಿಸಿ ಅಧ್ಯಕ್ಷ ಡಿ.ಕೆ. …

Leave a Reply

Your email address will not be published. Required fields are marked *

error: Content is protected !!