Hiring Reporter’s For more Information Contact Above Number 876 225 4007 . Program producer
Home / Breaking News / ಪತ್ರಕರ್ತರಿಗೆ ಆರೋಗ್ಯ ಕಾರ್ಡ್

ಪತ್ರಕರ್ತರಿಗೆ ಆರೋಗ್ಯ ಕಾರ್ಡ್

Spread the love

ಬೆಂಗಳೂರು: ಪತ್ರಕರ್ತರಿಗೆ ರಿಯಾಯಿತಿ ದರದಲ್ಲಿ ಚಿಕಿತ್ಸೆ ಒದಗಿಸುವ ಸಂಬಂಧ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದಲ್ಲಿ ಮಣಿಪಾಲ್ ಆಸ್ಪತ್ರೆಯು ‘ಮಾಧ್ಯಮ ಆರೋಗ್ಯ ಕಾರ್ಡ್’ ‍ಪ್ರಾರಂಭಿಸಿದೆ.

ಆಸ್ಪತ್ರೆಗಳ ಅಧ್ಯಕ್ಷ ಡಾ. ಸುದರ್ಶನ್ ಬಲ್ಲಾಳ್ ಅವರು ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಅವರಿಗೆ ಮಾಧ್ಯಮ ಆರೋಗ್ಯ ಕಾರ್ಡ್‌ ಹಸ್ತಾಂತರಿಸುವ ಮೂಲಕ ಈ ಯೋಜನೆಗೆ ಚಾಲನೆ ನೀಡಿದರು. ಈ ಕಾರ್ಡ್ ಹೊಂದಿರುವವರಿಗೆ ಹೊರರೋಗಿ ವಿಭಾಗದ ಸಲಹೆ, ಪ್ರಯೋಗಾಲಯಗಳಲ್ಲಿ ಪರೀಕ್ಷೆ, ಆರೋಗ್ಯ ತಪಾಸಣೆ ಹಾಗೂ ಚಿಕಿತ್ಸಾ ವೆಚ್ಚದಲ್ಲಿ ಶೇ 20 ರಷ್ಟು ರಿಯಾಯಿತಿ ದೊರೆಯಲಿದೆ. ಹಳೆ ವಿಮಾನ ನಿಲ್ದಾಣ ರಸ್ತೆ, ವೈಟ್‌ ಫೀಲ್ಡ್‌ ಹಾಗೂ ಜಯನಗರದ ಘಟಕದಲ್ಲಿ ಕಾರ್ಡ್‌ನ ಸೌಲಭ್ಯ ಪಡೆದುಕೊಳ್ಳಬಹುದಾಗಿದೆ.

‘ವೇಗವಾಗಿ ಹರಡುತ್ತಿರುವ ಕೊರೊನಾ ಸೋಂಕು, ವ್ಯಕ್ತಿಯ ಆರೋಗ್ಯದ ಮೇಲೆ ದೀರ್ಘಕಾಲಿನ ಪರಿಣಾಮಗಳನ್ನು ಬೀರುವ ಸಾಧ್ಯತೆಯಿದೆ.

ಹೃದಯ, ಮೂತ್ರಪಿಂಡ, ಶ್ವಾಸಕೋಶ ಸೇರಿದಂತೆ ವಿವಿಧ ಅಂಗಾಂಗಗಳಿಗೆ ಕೂಡ ಹಾನಿ ಮಾಡುವ ಸಾಧ್ಯತೆ ಇದೆ. ಕಾರ್ಡ್‌ ಹೊಂದಿರುವವರಿಗೆ ಕೋವಿಡ್‌ ನಂತರದ ಸಮಸ್ಯೆಗಳಿಗೆ ಚಿಕಿತ್ಸೆ ಹಾಗೂ ಪರೀಕ್ಷೆಗಳ ಸೇವೆಯನ್ನೂ ರಿಯಾಯಿತಿ ದರದಲ್ಲಿ ನೀಡಲಾಗುತ್ತದೆ’ ಎಂದು ಡಾ. ಸುದರ್ಶನ್ ಬಲ್ಲಾಳ್ ತಿಳಿಸಿದರು.

Check Also

ವಾಹನ ಸವಾರರಿಗೆ ಮತ್ತೊಂದು ಗುಡ್ ನ್ಯೂಸ್

Spread the loveಮೋಟಾರು ವಾಹನ ನಿಯಮಗಳಲ್ಲಿ ಕೇಂದ್ರ ಸರ್ಕಾರ ಬದಲಾವಣೆ ತಂದಿದ್ದು ಅಕ್ಟೋಬರ್ 1 ರಿಂದ ವಾಹನ ನಿಯಮಗಳಲ್ಲಿ ಬದಲಾವಣೆಯಾಗಲಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Hiring Reporter’s For more Information Contact Above Number 876 225 4007 . Program producer
error: Content is protected !!