Breaking News
Hiring Reporter’s For more Information Contact Above Number 876 225 4007 . Program producer
Home / ಕರಾವಳಿಯಲ್ಲಿ ಭಾರಿ ಮಳೆ ಮುನ್ನೆಚ್ಚರಿಕೆ; ರೆಡ್ ಅಲರ್ಟ್ ಘೋಷಣೆ

ಕರಾವಳಿಯಲ್ಲಿ ಭಾರಿ ಮಳೆ ಮುನ್ನೆಚ್ಚರಿಕೆ; ರೆಡ್ ಅಲರ್ಟ್ ಘೋಷಣೆ

ದಕ್ಷಿಣ ಕನ್ನಡ:- ಅರಬ್ಬಿ ಸಮುದ್ರ ಮತ್ತು ಲಕ್ಷದ್ವೀಪದಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಅದರ ಪರಿಣಾಮವಾಗಿ ರಾಜ್ಯದ ಕರಾವಳಿ, ಮಲೆನಾಡು ಮತ್ತು ಕೇರಳದ ಕೆಲವು ಭಾಗಗಳಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆಗಳಿವೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ನಿರ್ವಹಣೆ ಕೇಂದ್ರವು ಹೆಚ್ಚಿನ ಮಳೆ ಬೀಳುವ ಹಿನ್ನೆಲೆಯಲ್ಲಿ ರೆಡ್ ಅಲರ್ಟ್ ಸೂಚನೆ ನೀಡಿದೆ.

ಸಾರ್ವಜನಿಕರು ಈ ಸಂದರ್ಭದಲ್ಲಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ಮತ್ತು ಮೀನುಗಾರರು ಮೀನುಗಾರಿಕೆಗೆ ತೆರಳದಂತೆ ಜಿಲ್ಲಾಧಿಕಾರಿ ಎಚ್ಚರಿಕೆ ನೀಡಿದ್ದಾರೆ.

Share
error: Content is protected !!