Breaking News
Hiring Reporter’s For more Information Contact Above Number 876 225 4007 . Program producer
Home / Breaking News / ವಿದ್ಯುತ್ ಕಂಬ ಬಿದ್ದರೂ ಗಮನ ಹರಿಸದ ಹೆಸ್ಕಾಂ: ಸಾರ್ವಜನಿಕರ ಆಕ್ರೋಶ.

ವಿದ್ಯುತ್ ಕಂಬ ಬಿದ್ದರೂ ಗಮನ ಹರಿಸದ ಹೆಸ್ಕಾಂ: ಸಾರ್ವಜನಿಕರ ಆಕ್ರೋಶ.

 

ಹುಬ್ಬಳ್ಳಿ: ರಾಜ್ಯದ ಎರಡನೇ ದೊಡ್ಡ ಮಹಾನಗರ ಪಾಲಿಕೆಯಾಗಿರುವ ಹು-ಧಾ ಮಹಾನಗರ ಅವ್ಯವಸ್ಥೆಯ ತಾಣವಾಗಿ ಮಾರ್ಪಟ್ಟಿದ್ದು, ಸಾರ್ವಜನಿಕರು ಪ್ರತಿದಿನವೂ ಒಂದಿಲ್ಲೊಂದು ಸಮಸ್ಯೆಗಳನ್ನು ಅನುಭವಿಸುವ ಮೂಲಕ ಜೀವನ ನಡೆಸುವಂತ ಸ್ಥಿತಿ ನಿರ್ಮಾಣವಾಗಿದೆ.
ಇಲ್ಲಿನ ದೇಶಪಾಂಡೆನಗರದಲ್ಲಿನ ರೋಟರಿ ಸ್ಕೂಲ್ ಹತ್ತಿರ ವಿದ್ಯುತ್ ಕಂಬವೊಂದು ನಿವೇಶನದ ಕಡೆಗೆ ಬಿದ್ದಿದ್ದರೂ ಕೂಡ ಹೆಸ್ಕಾಂ ಸಿಬ್ಬಂದಿಗಳಾಗಲಿ ಹಾಗೂ ಮಹಾನಗರ ಪಾಲಿಕೆ ಅಧಿಕಾರಿಗಳಾಗಲಿ ಯಾವುದೇ ಕ್ರಮ ಕೈಗೊಳ್ಳದಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.
ಈ ರಸ್ತೆಯಲ್ಲಿ ನೂರಾರು ವಾಹನಗಳು ಸಂಚರಿಸುತ್ತಿದ್ದು, ಶಾಲಾ ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಈ ಮಾರ್ಗದ ಮೂಲಕ ಹಾದು ಹೋಗುತ್ತಾರೆ ಆದರೂ ಕೂಡ ಹುಬ್ಬಳ್ಳಿ ವಿದ್ಯುತ್ ಸರಬರಾಜು ನಿಗಮ ಮಂಡಳಿ ಯಾವುದೇ ಕ್ರಮ ಜರುಗಿಸದೇ ಇರುವುದು ಹೆಸ್ಕಾಂ ನಿರ್ಲಕ್ಷ್ಯ ಹಾಗೂ ಬೇಜವಾಬ್ದಾರಿ‌ ಸ್ಪಷ್ಟವಾಗಿ ಗೋಚರವಾಗುತ್ತಿದೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದರು.

Share

About Shaikh BIG TV NEWS, Hubballi

Check Also

ಡಿಕೆಶಿ ವಿರುದ್ಧ ಯಡಿಯೂರಪ್ಪ ಹೊಸ ಬಾಂಬ್

ದಾವಣಗೆರೆ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿರುದ್ಧ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಸ್ಪೋಟಕ ಆರೋಪ ಮಾಡಿದ್ದಾರೆ.ಕೆಪಿಸಿಸಿ ಅಧ್ಯಕ್ಷ ಡಿ.ಕೆ. …

Leave a Reply

Your email address will not be published. Required fields are marked *

error: Content is protected !!