Breaking News
Hiring Reporter’s For more Information Contact Above Number 876 225 4007 . Program producer
Home / Breaking News / ಹೈಸ್ಕೂಲ್ ವಿದ್ಯಾರ್ಥಿಗಳಿಗಾಗಿ ಮಹತ್ವದ ಮಾಹಿತಿ.

ಹೈಸ್ಕೂಲ್ ವಿದ್ಯಾರ್ಥಿಗಳಿಗಾಗಿ ಮಹತ್ವದ ಮಾಹಿತಿ.

ಬೆಂಗಳೂರು: ಹೈಸ್ಕೂಲ್ ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. ಎಸ್.ಎಸ್.ಎಲ್.ಸಿ. ಪ್ರಶ್ನೆಪತ್ರಿಕೆ ಮಾದರಿಯ ಆಧಾರದಲ್ಲಿ ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ 8 ಮತ್ತು 9ನೇ ತರಗತಿಯ ಪ್ರಶ್ನೆ ಪತ್ರಿಕೆಯ ಸ್ವರೂಪ ಬದಲಿಸಲು ತೀರ್ಮಾನಿಸಲಾಗಿದೆ.
10ನೇ ತರಗತಿಯ ಪಬ್ಲಿಕ್ ಪರೀಕ್ಷೆಗೆ ಆರಂಭದಿಂದಲೇ ವಿದ್ಯಾರ್ಥಿಗಳನ್ನು ಸಜ್ಜುಗೊಳಿಸುವ ಕಾರಣಕ್ಕಾಗಿ ಈ ತೀರ್ಮಾನ ಕೈಗೊಳ್ಳಲಾಗಿದ್ದು, ಪ್ರಸಕ್ತ ಶೈಕ್ಷಣಿಕ ಸಾಲಿನ 8 ಮತ್ತು 9ನೇ ತರಗತಿ ಪರೀಕ್ಷೆ ಮಾರ್ಚ್ ತಿಂಗಳಿನಲ್ಲಿ ನಡೆಯುವ ಸಂದರ್ಭದಲ್ಲಿ ಹೊಸ ಸ್ವರೂಪದ ಪ್ರಶ್ನೆಪತ್ರಿಕೆ ವಿತರಿಸುವಂತೆ ಎಲ್ಲ ಶಾಲೆಗಳಿಗೆ ಸೂಚನೆ ನೀಡಲಾಗಿದೆ.
ಹೊಸ ಪ್ರಶ್ನೆ ಪತ್ರಿಕೆ ಅನ್ವಯ ಪ್ರಶ್ನೆಗಳ ಸಂಖ್ಯೆಯನ್ನು 40ರಿಂದ 38ಕ್ಕೆ ಇಳಿಕೆ ಮಾಡಲಾಗುತ್ತದೆ. ಆದರೆ ಬಹು ಆಯ್ಕೆ ಹಾಗೂ ಒಂದು ಅಂಕದ ಪ್ರಶ್ನೆಗಳು ಈ ಹಿಂದಿನಂತೆ ಮುಂದುವರಿಯಲಿವೆ.

Share

About ramu BIG TV NEWS, Kolar

Check Also

ಡಿಕೆಶಿ ವಿರುದ್ಧ ಯಡಿಯೂರಪ್ಪ ಹೊಸ ಬಾಂಬ್

ದಾವಣಗೆರೆ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿರುದ್ಧ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಸ್ಪೋಟಕ ಆರೋಪ ಮಾಡಿದ್ದಾರೆ.ಕೆಪಿಸಿಸಿ ಅಧ್ಯಕ್ಷ ಡಿ.ಕೆ. …

Leave a Reply

Your email address will not be published. Required fields are marked *

error: Content is protected !!