Hiring Reporter’s For more Information Contact Above Number 876 225 4007 . Program producer
Home / Breaking News / `ಮಳೆ’ ಕುರಿತಂತೆ ಹವಾಮಾನ ಇಲಾಖೆಯಿಂದ ಮಹತ್ವದ ಮಾಹಿತಿ

`ಮಳೆ’ ಕುರಿತಂತೆ ಹವಾಮಾನ ಇಲಾಖೆಯಿಂದ ಮಹತ್ವದ ಮಾಹಿತಿ

Spread the love

ಬೆಂಗಳೂರು : ರಾಜ್ಯದಲ್ಲಿ ಮಳೆ ಕುರಿತಂತೆ ಹವಾಮಾನ ಇಲಾಖೆಯು ಮಹತ್ವದ ಮಾಹಿತಿ ನೀಡಿದ್ದು, ರಾಜ್ಯದ ಉತ್ತರ ಒಳನಾಡು ಹಾಗೂ ಕರಾವಳಿ ಭಾಗದಲ್ಲಿ ಕಳೆದ ಒಂದು ವಾರದಿಂದ ಸುರಿಯುತ್ತಿರುವ ಭಾರೀ ಮಳೆ ಇಂದಿನಿಂದ ತುಸು ಬಿಡುವು ನೀಡುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಮಳೆಯಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ಮುಂದುವರೆಸಲಾಗಿದೆ. ಮಹಾರಾಷ್ಟ್ರ ಹಾಗೂ ರಾಜ್ಯದಲ್ಲಿ ಸತತ ಮಳೆಯಿಂದಾಗಿ ಬೆಳಗಾವಿ ಜಿಲ್ಲೆಯ ಕೃಷ್ಣಾ, ದೂಧಗಂಗಾ ಮತ್ತು ವೇದಗಂಗಾ ನದಿಗಳ ನೀರಿನ ಮಟ್ಟ ಹೆಚ್ಚಳವಾಗಿದೆ.

ಇನ್ನು ಮಲೆನಾಡಿನಲ್ಲಿ ಮಳೆ ಮುಂದುವರೆದಿದ್ದು, ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ರಂಜದಕಟ್ಟೆ ಬಳಿಯ ಬಿಂತಲಹಳ್ಳದ ಸೇತುವೆ ಮತ್ತೆ ಕುಸಿದು ಆಗುಂಬೆ ಸಂಚಾರ ಸ್ಥಗಿತಗೊಂಡಿದೆ.

Check Also

ವಾಣಿಜ್ಯ ನಗರದಲ್ಲಿ ಹೆಚ್ಚಾಗುತ್ತಿರುವುದು ಬೈಕ್ ಕಳ್ಳತನ… ಸಾರ್ವಜನಿಕರೇ ಎಚ್ಚರ ಎಚ್ಚರ

Spread the loveಹುಬ್ಬಳ್ಳಿ: ನಗರದಲ್ಲಿ ಮನೆಗಳ ಮುಂದೆ ಹಾಗೂ ಪಾರ್ಕಿಂಗ್ ಜಾಗದಲ್ಲಿ ಪಾರ್ಕ್ ಮಾಡಿದ ದ್ವಿಚಕ್ರಗಳ ವಾಹನಗಳನ್ನು ಕಳ್ಳತನ ಮಾಡುತ್ತಿದ್ದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Hiring Reporter’s For more Information Contact Above Number 876 225 4007 . Program producer
error: Content is protected !!