Hiring Reporter’s For more Information Contact Above Number 876 225 4007 . Program producer
Home / Breaking News / ಅತಿಥಿ ಉಪನ್ಯಾಸಕರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಅತಿಥಿ ಉಪನ್ಯಾಸಕರ ಹುದ್ದೆಗಳಿಗೆ ಅರ್ಜಿ ಆಹ್ವಾನ

Spread the love

ಬೆಂಗಳೂರು: ಕುವೆಂಪು ವಿಶ್ವವಿದ್ಯಾಲಯದ ವಿವಿಧ ಸ್ನಾತಕೋತ್ತರ ಅಧ್ಯಯನ ವಿಭಾಗಗಳಲ್ಲಿ ಅತಿಥಿ ಉಪನ್ಯಾಸಕರ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಕುವೆಂಪು ವಿಶ್ವವಿದ್ಯಾಲಯದ ವಿವಿಧ ಸ್ನಾತಕೋತ್ತರ ಅಧ್ಯಯನ ವಿಭಾಗಗಳು, ಸ್ನಾತಕೋತ್ತರ ಕೇಂದ್ರ, ಕಡೂರು/ಚಿಕ್ಕಮಗಳೂರು ಹಾಗೂ ವಿಶ್ವವಿದ್ಯಾಲಯದ ಅಧೀನಕ್ಕೊಳಪಡುವ ಘಟಕ / ನೇರ ಆಡಳಿತಕ್ಕೊಳಪಟ್ಟ ಕಾಲೇಜಿನ 2020-21ನೇ ಶೈಕ್ಷಣಿಕ ಸಾಲಿನ ಸ್ನಾತಕ ಮತ್ತು ಸ್ನಾತಕೋತ್ತರ ಪದವಿಯ ಹೆಚ್ಚುವರಿ ಬೋಧನಾ ಕಾರ್ಯಭಾರದ ನಿರ್ವಹಣೆಗಾಗಿ ಅತಿಥಿ ಉಪನ್ಯಾಸಕರ ನೇಮಕಾತಿ ಅರ್ಜಿ ಆಹ್ವಾನಿಸಲಾಗಿದೆ.

ಒಟ್ಟು 286 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆಗಸ್ಟ್ 31,2020ರ ಸಂಜೆ 4 ಗಂಟೆಯೊಳಗೆ ಅರ್ಜಿ ಸಲ್ಲಿಸಬೇಕು. ವೇತನ ಶ್ರೇಣಿ: ಅತಿಥಿ ಉಪನ್ಯಾಸಕರ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ವಿಶ್ವವಿದ್ಯಾಲಯದ ನೇಮಕಾತಿ ನಿಯಮಾನುಸಾರ ವೇತನವನ್ನು ನೀಡಲಾಗುವುದು.

ಅರ್ಜಿ ಶುಲ್ಕ: ಸಾಮಾನ್ಯ ಅಭ್ಯರ್ಥಿಗಳು 200 ರೂ ಮತ್ತು ಪ.ಜಾತಿ, ಪ.ಪಂಗಡ ಮತ್ತು ಪ್ರವರ್ಗ-1ರ ಅಭ್ಯರ್ಥಿಗಳು 100 ರೂ ಅರ್ಜಿ ಶುಲ್ಕವನ್ನು ಎಸ್‌ಬಿಐ ಶಾಖೆಯಲ್ಲಿ ಚಲನ್ ಮೂಲಕ ಪಾವತಿಸಬಹುದು. ವಿಕಲಚೇತನ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ಆಯ್ಕೆ ಪ್ರಕ್ರಿಯೆ: ಅರ್ಹ ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು. ಸಂದರ್ಶನ ದಿನಾಂಕ ಮತ್ತು ಇತರೆ ಮಾಹತಿಯನ್ನು ಅಧಿಕೃತ ವೆಬ್‌ಸೈಟ್ ನಲ್ಲಿ ನೀಡಲಾಗುವುದು.

ಅರ್ಜಿ ಸಲ್ಲಿಕೆ:
ಆಸಕ್ತ ಅಭ್ಯರ್ಥಿಗಳು ಕುವೆಂಪು ವಿಶ್ವವಿದ್ಯಾಲಯದ ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ. ಅಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕುಲಸಚಿವರು, ಕುವೆಂಪು ವಿಶ್ವವಿದ್ಯಾಲಯ, ಶಂಕರಘಟ್ಟ -577 451 ಇವರ ವಿಳಾಸಕ್ಕೆ ಆಗಸ್ಟ್ 31,2020ರ ಸಂಜೆ 4 ಗಂಟೆಯೊಳಗೆ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ.

ನಿಗದಿತ ದಿನಾಂಕದ ನಂತರ ಬರುವ ಅರ್ಜಿಗಳನ್ನು ಹಾಗೂ ಅಂಚೆಯಲ್ಲಿನ ವಿಳಂಬವನ್ನು ಪರಿಗಣಿಸಲಾಗುವುದಿಲ್ಲ. ಅರ್ಜಿಯನ್ನು ಸಲ್ಲಿಸುವಾಗ ಲಕೋಟೆಯ ಮೇಲೆ ವಿಷಯದ ಅತಿಥಿ ಉಪನ್ಯಾಸಕರ ಸೇವೆಗೆ ಅರ್ಜಿ ಸಲ್ಲಿಸಲಾಗಿದೆ ಎಂಬುದನ್ನು ನಮೂದಿಸತಕ್ಕದ್ದು.

Check Also

ಆಗಸ್ಟ್ 8 ರ ವರೆಗೆ ರಾಜ್ಯದ ಹಲವೆಡೆ ಭಾರೀ ಮಳೆ ಸಾಧ್ಯತೆ

Spread the loveಆಗಸ್ಟ್ 8 ರವರೆಗೆ ರಾಜ್ಯದ ಕರಾವಳಿ, ದಕ್ಷಿಣ ಒಳನಾಡು, ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Hiring Reporter’s For more Information Contact Above Number 876 225 4007 . Program producer
error: Content is protected !!