Hiring Reporter’s For more Information Contact Above Number 876 225 4007 . Program producer
Home / Breaking News / ನೂತನ ಕಮಿಷನರ್ ಆಗಿ ಕಮಲ್ ಪಂತ್ ಅಧಿಕಾರ ಸ್ವೀಕಾರ: ಭಾವುಕರಾದ ಭಾಸ್ಕರ್ ರಾವ್

ನೂತನ ಕಮಿಷನರ್ ಆಗಿ ಕಮಲ್ ಪಂತ್ ಅಧಿಕಾರ ಸ್ವೀಕಾರ: ಭಾವುಕರಾದ ಭಾಸ್ಕರ್ ರಾವ್

Spread the love

ಬೆಂಗಳೂರು: ನಗರದ ನೂತನ ಕಮಿಷನರ್ ಆಗಿ ಕಮಲ್ ಪಂತ್ ಅಧಿಕಾರ ಸ್ವೀಕರಿಸಿದ್ದಾರೆ. ನಗರದ ಇನ್ಫೆಂಟ್ರಿ ರಸ್ತೆಯಲ್ಲಿರುವ ಕಚೇರಿಯಲ್ಲಿ ನಿರ್ಗಮಿತ ಕಮಿಷನರ್ ಭಾಸ್ಕರ್ ರಾವ್ ಅವರು ಕಮಲ್ ಪಂತ್ ಅವರಿಗೆ ಬ್ಯಾಟನ್ ನೀಡಿ ಅಧಿಕಾರ ಹಸ್ತಾಂತರ ಮಾಡಿದರು.

ಕಮಲ್ ಪಂತ್ 1990ರ ಬ್ಯಾಚ್‌ನ ಅಧಿಕಾರಿಯಾಗಿದ್ದಾರೆ. ಅಧಿಕಾರ ಸ್ವೀಕರಿಸಿದ ನೂತನ ಕಮಿಷನರ್ ಕಮಲ್ ಪಂತ್ ಸುದ್ದಿಗೋಷ್ಠಿ ನಡೆಸಿದರು.

ಈ ವೇಳೆ ಮಾತನಾಡಿದ ಅವರು, ‘ಇವತ್ತು ನಾನು ಬೆಂಗಳೂರು ಕಮಿಷನರ್ ಆಗಿ ಅಧಿಕಾರ ವಹಿಸಿಕೊಂಡಿದ್ದೇನೆ. ಸರ್ಕಾರ ನನಗೆ ಹೆಮ್ಮೆಯ ಕೆಲಸ‌ ನೀಡಿದೆ. ಸರ್ಕಾರ ನೀಡಿರುವ ಈ ಕೆಲಸವನ್ನು ಅಚ್ಚುಕಟ್ಟಾಗಿ ನಿರ್ವಹಿಸುತ್ತೇನೆ. ಬೆಂಗಳೂರು ಪೊಲೀಸರು ಕೋವಿಡ್ ಸಮಯದಲ್ಲಿ ಅದ್ಭುತ ಕಾರ್ಯ ಮಾಡಿದ್ದಾರೆ. ಈ ಸಂದರ್ಭದಲ್ಲಿ ಕೆಲವರು ತಮ್ಮ ಜೀವ ನೀಡಿದ್ದಾರೆ. ಅವರಿಗೆ ಗೌರವ ಸಲ್ಲಿಸುತ್ತೇನೆ’ ಎಂದರು.

Check Also

ಹವಾಮಾನ ಇಲಾಖೆಯಿಂದ ರಾಜ್ಯದ ಜನತೆಗೆ ಮಹತ್ವದ ಸೂಚನೆ

Spread the loveಬೆಂಗಳೂರು: ಮುಂದಿನ 24 ಗಂಟೆಗಳಲ್ಲಿ ಕರ್ನಾಟಕದ ಕರಾವಳಿ ಭಾಗ ಮತ್ತು ದಕ್ಷಿಣ ಒಳನಾಡಿನಲ್ಲಿ ಅತಿ ಹೆಚ್ಚು ಮಳೆಯಾಗುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Hiring Reporter’s For more Information Contact Above Number 876 225 4007 . Program producer
error: Content is protected !!