Hiring Reporter’s For more Information Contact Above Number 876 225 4007 . Program producer
Home / Breaking News / ಇಡೀ ದೇಶಕ್ಕೆ ಕರ್ನಾಟಕ ಮಾದರಿ: ಸಚಿವ ಎಸ್. ಸುರೇಶ್ ಕುಮಾರ್

ಇಡೀ ದೇಶಕ್ಕೆ ಕರ್ನಾಟಕ ಮಾದರಿ: ಸಚಿವ ಎಸ್. ಸುರೇಶ್ ಕುಮಾರ್

Spread the love

ಯಲಹಂಕ: ‘ಇಡೀ ದೇಶದಲ್ಲಿ ಮಾದರಿ ಡಿಜಿಟಲ್ ಗ್ರಂಥಾಲಯ ವ್ಯವಸ್ಥೆ ಹೊಂದಿದ ಮೊದಲ ರಾಜ್ಯ ಕರ್ನಾಟಕ’ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದರು.

ಜಕ್ಕೂರಿನ ಎಂಸಿಇಎಸಿಎಚ್ ಬಡಾವಣೆಯ ಡಾ. ಶಿವರಾಮ ಕಾರಂತ ನಗರದ 2ನೇ ಹಂತದಲ್ಲಿ ಶಾಖಾ ಗ್ರಂಥಾಲಯಕ್ಕೆ ಸೋಮವಾರ ಶಿಲಾನ್ಯಾಸ ನೆರವೇರಿಸಿ ಮಾತನಾಡಿದ ಅವರು, ‘ಕಳೆದ ಆರು ತಿಂಗಳ ಅವಧಿಯಲ್ಲಿ ರಾಜ್ಯದ ವಿವಿಧೆಡೆ 272 ಡಿಜಿಟಲ್ ಗ್ರಂಥಾಲಯಗಳು ಕಾರ್ಯಾರಂಭಗೊಂಡಿವೆ’ ಎಂದರು.

‘ಕೋವಿಡ್‌ ಕಾರಣದಿಂದ ದೇಶದಲ್ಲಿಯೇ ಮೊದಲ ಬಾರಿಗೆ ರಾಜ್ಯದ ಸಾರ್ವಜನಿಕ ಗ್ರಂಥಾಲಯ ಇಲಾಖೆ ಡಿಜಿಟಲ್ ಗ್ರಂಥಾಲಯ ಮೊಬೈಲ್ ಆಯಪ್ ಲೋಕಾರ್ಪಣೆಗೊಳಿಸಿದೆ. ನಾಲ್ಕು ಲಕ್ಷಕ್ಕೂ ಹೆಚ್ಚು ಜನರು ಈ ಆಯಪ್ ಬಳಸುತ್ತಿದ್ದಾರೆ. ಒಂದು ಲಕ್ಷಕ್ಕೂ ಮೀರಿದ ಪುಸ್ತಕಗಳು ಆಯಪ್‌ನಲ್ಲಿ ಲಭ್ಯವಿವೆ. 15 ಲಕ್ಷ ಜನರು ಇದರ ಪ್ರಯೋಜನ ಪಡೆದಿದ್ದಾರೆ’ ಎಂದರು.

Check Also

ವಾಹನ ಸವಾರರಿಗೆ ಮತ್ತೊಂದು ಗುಡ್ ನ್ಯೂಸ್

Spread the loveಮೋಟಾರು ವಾಹನ ನಿಯಮಗಳಲ್ಲಿ ಕೇಂದ್ರ ಸರ್ಕಾರ ಬದಲಾವಣೆ ತಂದಿದ್ದು ಅಕ್ಟೋಬರ್ 1 ರಿಂದ ವಾಹನ ನಿಯಮಗಳಲ್ಲಿ ಬದಲಾವಣೆಯಾಗಲಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Hiring Reporter’s For more Information Contact Above Number 876 225 4007 . Program producer
error: Content is protected !!