Hiring Reporter’s For more Information Contact Above Number 876 225 4007 . Program producer
Home / Breaking News / ಖಾಸಗಿ ಶಿಕ್ಷಣ ಸಂಸ್ಥೆಗಳ ವಿಭಾಗದಲ್ಲಿ ಕೆಎಲ್‌ಇ ಮತ್ತೆ ಸಾಧನೆ

ಖಾಸಗಿ ಶಿಕ್ಷಣ ಸಂಸ್ಥೆಗಳ ವಿಭಾಗದಲ್ಲಿ ಕೆಎಲ್‌ಇ ಮತ್ತೆ ಸಾಧನೆ

Spread the love

ಹುಬ್ಬಳ್ಳಿ: ಆವಿಷ್ಕಾರ ಕ್ಷೇತ್ರದಲ್ಲಿ ಮಾಡಿದ ಸಾಧನೆಗಳನ್ನು ಗುರುತಿಸಿ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯ ನೀಡುವ ಅಟಲ್‌ ರ‍್ಯಾಂಕಿಂಗ್‌ನಲ್ಲಿ ಕೆ.ಎಲ್‌.ಇ ತಾಂತ್ರಿಕ ವಿಶ್ವವಿದ್ಯಾಲಯ 6ರಿಂದ 25ರ ಒಳಗಿನ ಪಟ್ಟಿಯಲ್ಲಿ ಸ್ಥಾನ ಗಳಿಸಿದೆ. ಖಾಸಗಿ ಶಿಕ್ಷಣ ಸಂಸ್ಥೆಗಳ ವಿಭಾಗದಲ್ಲಿ ಕೆಎಲ್‌ಇ ಈ ಸಾಧನೆ ಮಾಡಿದೆ.

ಇದೇ ವಿಭಾಗದಲ್ಲಿ ಮಣಿಪಾಲ್‌ ಅಕಾಡೆಮಿ ಆಫ್‌ ಹೈಯರ್‌ ಎಜುಕೇಷನ್‌ ಮತ್ತು ರೇವಾ ವಿಶ್ವವಿದ್ಯಾಲಯಗಳು ಸ್ಥಾನ ಪಡೆದುಕೊಂಡಿವೆ. ಸರ್ಕಾರಿ ಹಾಗೂ ಅನುದಾನಿತ ಸಂಸ್ಥೆಗಳ ವಿಭಾಗದಲ್ಲಿ ಕಲಬುರ್ಗಿಯ ಎಚ್‌.ಕೆ.ಇ ಸೊಸೈಟಿಯ ಪಿ.ಡಿ.ಎ ಎಂಜಿನಿಯರಿಂಗ್‌ ಕಾಲೇಜು 6ರಿಂದ 25ರ ಒಳಗಿನ ಪಟ್ಟಿಯಲ್ಲಿ ಸ್ಥಾನ ಗಳಿಸಿವೆ.

ಈ ಕುರಿತು ಪ್ರತಿಕ್ರಿಯಿಸಿದ ಕೆಎಲ್‌ಇ ತಾಂತ್ರಿಕ ವಿಶ್ವವಿದ್ಯಾಲಯದ ಕುಲಪತಿ ಡಾ. ಅಶೋಕ ಶೆಟ್ಟರ್ ‘ಕೆಎಲ್‌ಇ ಸಂಸ್ಥೆ ಯಾವಾಗಲೂ ಅನ್ವೇಷಣೆಗಳಿಗೆ ಒತ್ತು ಕೊಡುತ್ತಲೇ ಬಂದಿದೆ. ಅನ್ವೇಷಣೆ, ವಿಶ್ವವಿದ್ಯಾಲಯದ ಶೈಕ್ಷಣಿಕ ಸಾಧನೆ, ಹೊಂದಿರುವ ಸೌಲಭ್ಯ, ಸಂಶೋಧನೆಗಳ ವಿಷಯದಲ್ಲಿ ಮಾಡಿದ ಸಾಧನೆ ಪರಿಗಣಿಸಿ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯ ಈ ಸ್ಥಾನಗಳನ್ನು ನೀಡುತ್ತದೆ. ಮುಂಬರುವ ದಿನಗಳಲ್ಲಿ ಇನ್ನಷ್ಟು ಹೊಸ ಅನ್ವೇಷಣೆಗಳನ್ನು ಮಾಡಲು ಈಗಿನ ಗೌರವ ಪ್ರೇರಣೆಯಾಗಿದೆ’ ಎಂದರು.

Check Also

Featured Video Play Icon

ಕೇಂದ್ರ ರಾಜ್ಯ ಸರ್ಕಾರದ ವಿರುದ್ಧ ಜೆಡಿಎಸ್ ಕಾರ್ಯಕರ್ತರ ಅಸಮಾಧಾನ

Spread the love

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Hiring Reporter’s For more Information Contact Above Number 876 225 4007 . Program producer
error: Content is protected !!