Hiring Reporter’s For more Information Contact Above Number 876 225 4007 . Program producer
Home / Breaking News / ಕೆಪಿಎಸ್‌ಸಿ ಪರೀಕ್ಷೆ: ಅಂಧರಿಗೆ 20 ನಿಮಿಷ ಹೆಚ್ಚುವರಿ ಸಮಯ

ಕೆಪಿಎಸ್‌ಸಿ ಪರೀಕ್ಷೆ: ಅಂಧರಿಗೆ 20 ನಿಮಿಷ ಹೆಚ್ಚುವರಿ ಸಮಯ

Spread the love

ಬೆಂಗಳೂರು: ಗೆಜೆಟೆಡ್ ಪ್ರೊಬೆಷನರಿ ಹುದ್ದೆಗಳಿಗೆ ಇದೇ 24ರಂದು ನಡೆಯಲಿರುವ ಪೂರ್ವಸಿದ್ಧತಾ ಪರೀಕ್ಷೆಯಲ್ಲಿ ಅಂಧರಿಗೆ ಗಂಟೆಗೆ 20 ನಿಮಿಷ ಹೆಚ್ಚುವರಿ ಸಮಯ ನಿಗದಿ ಮಾಡುವಂತೆ ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ) ಮತ್ತು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ತಿಳಿಸಿದೆ.

ರಾಷ್ಟ್ರೀಯ ಅಂಧರ ಒಕ್ಕೂಟ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.

‘ಕೇಂದ್ರ ಸರ್ಕಾರದ ಇತ್ತೀಚಿನ ಮಾರ್ಗಸೂಚಿ ‍ಪ್ರಕಾರ ಪರೀಕ್ಷೆಯಲ್ಲಿ ಅಂಧರಿಗೆ 20 ನಿಮಿಷ ಹೆಚ್ಚುವರಿ ಸಮಯ ನೀಡಬೇಕು. ರಾಜ್ಯ ಸರ್ಕಾರದ ನಿಯಮಗಳು 10 ನಿಮಿಷ ಸಮಯ ನೀಡಿವೆ. 682 ಅಂಧರು ಕೆಪಿಎಸ್‌ಸಿ ಪೂರ್ವಸಿದ್ಧತಾ ಪರೀಕ್ಷೆ ತೆಗೆದುಕೊಂಡಿದ್ದಾರೆ’ ಎಂದು ಅರ್ಜಿದಾರರ ಪರ ವಕೀಲರು ವಿವರಿಸಿದರು.

Check Also

ವಾಹನ ಸವಾರರಿಗೆ ಮತ್ತೊಂದು ಗುಡ್ ನ್ಯೂಸ್

Spread the loveಮೋಟಾರು ವಾಹನ ನಿಯಮಗಳಲ್ಲಿ ಕೇಂದ್ರ ಸರ್ಕಾರ ಬದಲಾವಣೆ ತಂದಿದ್ದು ಅಕ್ಟೋಬರ್ 1 ರಿಂದ ವಾಹನ ನಿಯಮಗಳಲ್ಲಿ ಬದಲಾವಣೆಯಾಗಲಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Hiring Reporter’s For more Information Contact Above Number 876 225 4007 . Program producer
error: Content is protected !!