Breaking News
Hiring Reporter’s For more Information Contact Above Number 876 225 4007 . Program producer
Home / Breaking News / ನಾಳೆ ಕೆರೆಗೆ ಬಾಗಿನ ಅರ್ಪಣೆ ಕಾರ್ಯಕ್ರಮ.

ನಾಳೆ ಕೆರೆಗೆ ಬಾಗಿನ ಅರ್ಪಣೆ ಕಾರ್ಯಕ್ರಮ.

 

ಹುಬ್ಬಳ್ಳಿ: ಕಲಘಟಗಿ ತಾಲೂಕಿನ ಹಿರೇಹೊನ್ನಳ್ಳಿ ಗ್ರಾಮದ ನೀರಿನ ಸಮಸ್ಯೆ ಬಗೆಹರಿಸಲು ಸಹಾಯ ಮಾಡಿದ ಮಾಜಿ ವಿಧಾನ ಪರಿಷತ್ ಸದಸ್ಯ ನಾಗರಾಜ ಛಬ್ಬಿ ಅವರಿಗೆ ಸನ್ಮಾನ, ಹಾಗೂ ಗ್ರಾಮದ ಕೆರೆ, ಹಳ್ಳಕ್ಕೆ ಬಾಗಿನ ಅರ್ಪಣೆ ಕಾರ್ಯಕ್ರಮವನ್ನು ನ. 24 ರಂದು ಗ್ರಾಮದ ಸರ್ಕಾರಿ ಗಂಡು ಮಕ್ಕಳ‌ ಶಾಲೆಯ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಸಹದೇವಪ್ಪ ಗಿರಿಮಲ್ಲಪ್ಪ ಹೇಳಿದರು.
ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ 2014 ಹಾಗೂ 2015 ನೇ ಸಾಲಿನಲ್ಲಿ ಹಿರೇಹೊನ್ನಿಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿನ ನೀರಿನ ಸಮಸ್ಯೆ ಬಗೆಹರಿಸಲು 2.10 ಕೋಟಿ ಅನುದಾನ ಬಿಡುಗಡೆ ಮಾಡಿ ಅಂತರ್ಜಲ ಮಟ್ಟ ಹೆಚ್ಚಿಸುವ, ಕೆರೆ, ಹಳ್ಳ ತುಂಬಿಸಲು ಸಹಾಯ ಮಾಡಿದ್ದರು. ಈ ಹಿನ್ನಲೆಯಲ್ಲಿ ಇಂದು ಹಿರೇಹೊನ್ನಿಹಳ್ಳಿ ಕೆರೆ ಹಳ್ಳಗಳು ತುಂಬಿದ್ದು. ಪರಿಣಾಮ ಗ್ರಾಮಸ್ಥರಿಂದ ಕೆರೆಗೆ ಬಾಗಿನ ಅರ್ಪಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಅಂದು ಮಾಜಿ ವಿಧಾನ ಪರಿಷತ್ ಸದಸ್ಯ ನಾಗರಾಜ ಛಬ್ಬಿ ಬಾಗಿನ ಅರ್ಪಣೆ ಮಾಡಲಿದ್ದಾರೆ. ಅಲ್ಲದೇ ಗ್ರಾಮಸ್ಥರಿಂದ ಊರಿನ ನೀರಿನ ಸಮಸ್ಯೆ ಬಗೆಹರಿಸಲು ಸಹಾಯ ಮಾಡಿದ ನಾಗರಾಜ ಛಬ್ಬಿ ಅವರಿಗೆ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಕಿರಣ ಪಾಟೀಲ, ಶಿವರುದ್ರಪ್ಪ ಗಬ್ಬೂರು, ಬಸವರಾಜ ಬಡಿಗೇರ, ನಿಂಗಪ್ಪ, ಬಸವಣೇಪ್ಪ ರಾಮನಾಳ ಸೇರಿದಂತೆ ಮುಂತಾದವರು ಇದ್ದರು.

Share

About Shaikh BIG TV NEWS, Hubballi

Check Also

ಡಿಕೆಶಿ ವಿರುದ್ಧ ಯಡಿಯೂರಪ್ಪ ಹೊಸ ಬಾಂಬ್

ದಾವಣಗೆರೆ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿರುದ್ಧ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಸ್ಪೋಟಕ ಆರೋಪ ಮಾಡಿದ್ದಾರೆ.ಕೆಪಿಸಿಸಿ ಅಧ್ಯಕ್ಷ ಡಿ.ಕೆ. …

Leave a Reply

Your email address will not be published. Required fields are marked *

error: Content is protected !!