Breaking News
Hiring Reporter’s For more Information Contact Above Number 876 225 4007 . Program producer
Home / ತಂತ್ರಜ್ಞಾನ / ಕರ್ನಾಟಕ / ಕಿತ್ತೂರು ಉತ್ಸವ ಆಚರಣೆಗೆ ಅದ್ದೂರಿ ಸಿದ್ಧತೆ- ಶಾಸಕ ದೊಡ್ಡಗೌಡರ

ಕಿತ್ತೂರು ಉತ್ಸವ ಆಚರಣೆಗೆ ಅದ್ದೂರಿ ಸಿದ್ಧತೆ- ಶಾಸಕ ದೊಡ್ಡಗೌಡರ

ಬೆಳಗಾವಿ:- ಪ್ರತಿವರ್ಷದಂತೆ ಈ ಬಾರಿಯೂ ಕಿತ್ತೂರು ಉತ್ಸವವನ್ನು ಅಕ್ಟೋಬರ್ 23,24  ಹಾಗೂ 25ರಂದು ಅದ್ಧೂರಿಯಾಗಿ ಹಾಗೂ ಅರ್ಥಪೂರ್ಣವಾಗಿ ಅಚರಿಸಲಾಗುವುದು ಎಂದು ಕಿತ್ತೂರು ಶಾಸಕ ಮಹಾಂತೇಶ ದೊಡ್ಡಗೌಡರ ಹೇಳಿದರು.

ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಇಂದು ನಡೆದ ಕಿತ್ತೂರು ಉತ್ಸವ-2019 ಕುರಿತ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.

ಪ್ರತಿವರ್ಷದಂತೆ ಈ ವರ್ಷ ಕೂಡಾ ಉತ್ಸವದಲ್ಲಿ ಸ್ಥಳೀಯ ಹಾಗೂ ಹೊರಗಿನ ಕಲಾವಿದರಿಗೆ ಅವಕಾಶವನ್ನು ನೀಡಲಾಗಿದೆ. ಉತ್ಸವದಲ್ಲಿ ಹೆಚ್ಚಿನ ರೀತಿಯಲ್ಲಿ ಮಳಿಗೆಗಳು ಬರುವ ಸಾಧ್ಯತೆ ಇದೆ ಎಂದು ಕಿತ್ತೂರು ಶಾಸಕ ಮಹಾಂತೇಶ ದೊಡ್ಡಗೌಡರ ಹೇಳಿದರು.

ಕಿತ್ತೂರು ಉತ್ಸವಕ್ಕೆ 1 ಕೋಟಿ ಅನುದಾನ ಬಿಡುಗಡೆ ಮಾಡಲಾಗಿದೆ ಹಾಗೂ  ರಾಜ್ಯ ಮಟ್ಟದ ಕೃಷಿ ವಿಚಾರ ಸಂಕಿರಣ, ರಾಜ್ಯ ಮಟ್ಟದ ಕವಿ ಗೋಷ್ಟಿ, ಪುರುಷ ಹಾಗೂ ಮಹಿಳೆಯರಿಗೆ ಕುಸ್ತಿ, ಮುಕ್ತ ಕಬಡ್ಡಿ, ವಾಲಿಬಾಲ್, ಸೈಕ್ಲಿಂಗ್ ಕ್ರೀಡಾ ಕಾರ್ಯಕ್ರಮಗಳು ಜರುಗಲಿವೆ ಎಂದರು.

ಜಿಲ್ಲಾಧಿಕಾರಿಗಳಾದ

ಡಾ. ಎಸ್. ಬಿ.ಬೊಮ್ಮನಹಳ್ಳಿ ಮಾತನಾಡಿ, ಸ್ವಾತಂತ್ರ್ಯದ ಬೆಳ್ಳಿ ಚುಕ್ಕಿ ನಾಡ ಹಬ್ಬವಾದ ಕಿತ್ತೂರು ಉತ್ಸವದಲ್ಲಿ ವಿವಿಧ ವೈವಿಧ್ಯಮಯ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿದೆ. ಕಿತ್ತೂರ ಚೆನ್ನಮ್ಮ ಉತ್ಸವ ಕಾರ್ಯಕ್ರಮ ದೇಶದ ಹೆಮ್ಮೆಯ ಕಾರ್ಯಕ್ರಮವಾಗಿದ್ದು, ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಮತ್ತು ಸ್ವಾತಂತ್ರ್ಯ ಕಹಳೆಯನ್ನು ಉದೀದ ಮೊದಲ ಮಹಿಳೆ ಹಾಗೂ ಸ್ವಾತಂತ್ರ್ಯ ಮೂಲಭೂತ ಕಾರಣೀಕೃತರಾದವರು ವೀರ ರಾಣಿ ಚೆನ್ನಮ್ಮ ಅವರು ಎಂದು ಹೇಳಿದರು.

ಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂರಪ್ಪ ಅವರು

ಅಕ್ಟೋಬರ್ 23 ರಂದು ಸಂಜೆ 7 ಗಂಟೆಗೆ ಈ ಉತ್ಸವವನ್ನು ಉದ್ಘಾಟಿಸಲಿದ್ದಾರೆ. ಅಂದು ಬೆಳಿಗ್ಗೆ8.30 ಕ್ಕೆ ಬೆಳಗಾವಿ ಸಮೀಪದ ಕಾಕತಿಯಲ್ಲಿ ರಾಣಿ ಚೆನ್ನಮ್ಮ ಮೂರ್ತಿಯ ಪೂಜೆ ನಡೆಯಲಿದೆ ಎಂದು ಹೇಳಿದರು. ಇದೇ ಸಂದರ್ಭದಲ್ಲಿ ಕಿತ್ತೂರು ಉತ್ಸವ-2019 ರ ಪ್ರಚಾರಸಾಮಗ್ರಿಗಳನ್ನು ಶಾಸಕ ಮಹಾಂತೇಶ ದೊಡ್ಡಗೌಡರ ಹಾಗೂ ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ ಅವರು ಬಿಡುಗಡೆಗೊಳಿಸಿದರು. ಅಪರ ಜಿಲ್ಲಾಧಿಕಾರಿ ಅಶೋಕ ದುಡಗಂಟಿ, ಬೈಲಹೊಂಗಲ ಉಪ ವಿಭಾಗಾಧಿಕಾರಿ  ಶಿವಾನಂದ ಭಜಂತ್ರಿ, ಕನ್ನಡ ಮತ್ತು ಸಂಸ್ಕೃತ ಇಲಾಖೆ ಸಹಾಯಕ ನಿರ್ದೇಶಕಿ ವಿದ್ಯಾವತಿ ಭಜಂತ್ರಿ, ಕಿತ್ತೂರ ತಹಶಿಲ್ದಾರರ ಪ್ರವೀಣ ಜೈನ್ ಅವರು ಉಪಸ್ಥಿತರಿದ್ದರು.

Share

About solaragoppa

Check Also

ಹೊಸ ವರ್ಷದ ಸಂಭ್ರಮಾಚರಣೆಗೆ ಕಡಿವಾಣ ಅಗತ್ಯ.

ಬೆಳಗಾವಿ : ಕೊರೊನಾ ಸೋಂಕು ಹರಡುವುದನ್ನು ತಡೆಯುವ ನಿಟ್ಟಿನಲ್ಲಿ ಹೊಸ ವರ್ಷ ಸಂಭ್ರಮಾಚರಣೆಗೆ ಕಡಿವಾಣ ಹಾಕುವ ಅಗತ್ಯ ಇದೆ ಎಂದು ಗೃಹ …

Leave a Reply

Your email address will not be published. Required fields are marked *

error: Content is protected !!