Breaking News
Hiring Reporter’s For more Information Contact Above Number 876 225 4007 . Program producer
Home / Breaking News / ಕೆರೆಯಲ್ಲಿ ಮುಳುಗುತ್ತಿದ್ದ ಯುವಕನನ್ನು ರಕ್ಷಿಸಿದ ಶಾಸಕ : ಮುಂದೇನಾಯ್ತು ನೋಡಿ

ಕೆರೆಯಲ್ಲಿ ಮುಳುಗುತ್ತಿದ್ದ ಯುವಕನನ್ನು ರಕ್ಷಿಸಿದ ಶಾಸಕ : ಮುಂದೇನಾಯ್ತು ನೋಡಿ

ಮಂಡ್ಯ:-  ಕೆರೆಯಲ್ಲಿ ಈಜಲು ಹೋಗಿದ್ದ ಯುವಕ ನೀರಿನಲ್ಲಿ ಮುಳುಗುತ್ತಿದ್ದಾಗ ಶಾಸಕರೊಬ್ಬರು ರಕ್ಷಣೆ ಮಾಡಿದ ಘಟನೆ ನಾಗಮಂಗಲ ತಾಲ್ಲೂಕಿನ ಬಿಂಡೇನಹಳ್ಳಿ ಕೆರೆಯಲ್ಲಿ ನಡೆದಿದೆ.

ಅಭಿ ಎಂಬುವವನೇ ನೀರಿನಲ್ಲಿ ಮುಳುಗುತ್ತಿದ್ದ ಯುವಕನಾಗಿದ್ದು, ಇತ ಕೃಷ್ಣ ದೇವರ ತೆಪ್ಪೋತ್ಸವ ನಡೆಯುತ್ತಿದ್ದ ವೇಳೆಯಲ್ಲಿ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋಗಿದ್ದಾನೆ. ಆದರೆ ನೀರಿನಲ್ಲಿ ಈಜುವಾಗ ಸ್ವಲ್ಪ ಸಮಯದಲ್ಲಿ ಸುಸ್ತಾಗಿ ನೀರಿನಲ್ಲಿ ಮುಳುಗಲು ಆರಂಭಿಸಿದ್ದಾನೆ. ಆಗ ಕೈಯನ್ನು ಮೇಲೆ ಹಾಕಿ ಕೂಗಲು ಪ್ರಾರಂಭ ಮಾಡಿದ್ದಾಗ ಅಭಿ ಧ್ವನಿ ಕೇಳಿದ ಪಕ್ಕದಲ್ಲಿದ್ದ ಜನರು ಸಹಾಯಕ್ಕೆ ಧಾವಿಸಿದ್ದಾರೆ. ಆಗ ಅಲ್ಲಿಯೇ ಇದ್ದ ಶಾಸಕ ಸುರೇಶ ಗೌಡ ಜನರ ಗದ್ದಲ, ಯುವಕನ ಧ್ವನಿ ಕೇಳಿ ಕೂಡಲೇ ದೋಣಿ ತೆಗೆದುಕೊಂಡು ಯುವಕನನ್ನು ರಕ್ಷಣೆ ಮಾಡಿದ್ದಾರೆ. ಈ ಮೂಲಕ ಸಭಿ ಪ್ರಾಣಾಪಾಯದಿಂದ ಪಾರಾಗಿದ್ದು, ಶಾಸಕರ ಸಮಯ ಪ್ರಜ್ಞೆ ಹಾಗೂ ಮಾನವೀಯತೆಗೆ ಸಾರ್ವಜನಿಕರಿಂದ ಪ್ರಶಂಸೆ ವ್ಯಕ್ತಪಡಿಸುತ್ತಿದ್ದಾರೆ.

Share

About Shaikh BIG TV NEWS, Hubballi

Check Also

ಡಿಕೆಶಿ ವಿರುದ್ಧ ಯಡಿಯೂರಪ್ಪ ಹೊಸ ಬಾಂಬ್

ದಾವಣಗೆರೆ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿರುದ್ಧ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಸ್ಪೋಟಕ ಆರೋಪ ಮಾಡಿದ್ದಾರೆ.ಕೆಪಿಸಿಸಿ ಅಧ್ಯಕ್ಷ ಡಿ.ಕೆ. …

Leave a Reply

Your email address will not be published. Required fields are marked *

error: Content is protected !!