Breaking News
Hiring Reporter’s For more Information Contact Above Number 876 225 4007 . Program producer
Home / ಜಿಲ್ಲೆ / ಮಂಡ್ಯ / ಕೃಷ್ಣರಾಜಪೇಟೆ ಉಪಚುನಾವಣೆ: ರಾಷ್ಟ್ರೀಯ ಪಕ್ಷದ ಅಭ್ಯರ್ಥಿಯಾಗಿ ಲಿಂಗೇಗೌಡ ಘೋಷಣೆ.

ಕೃಷ್ಣರಾಜಪೇಟೆ ಉಪಚುನಾವಣೆ: ರಾಷ್ಟ್ರೀಯ ಪಕ್ಷದ ಅಭ್ಯರ್ಥಿಯಾಗಿ ಲಿಂಗೇಗೌಡ ಘೋಷಣೆ.

 

ಮಂಡ್ಯ: ಕೃಷ್ಣರಾಜಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ನಡೆಯಲಿರುವ ಉಪ ಚುನಾವಣೆಯಲ್ಲಿ ಜನಪರ ಹೋರಾಟಗಾರ ರವಿಕೃಷ್ಣಾರೆಡ್ಡಿ ಅವರ ನೇತೃತ್ವದ
ಕರ್ನಾಟಕ ರಾಷ್ಟ್ರೀಯ ಪಕ್ಷದ ವತಿಯಿಂದ ವಕೀಲ ಕೆರೆಮೇಗಳಕೊಪ್ಪಲು ಶಂಕರೇಗೌಡ ಅವರನ್ನು ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಲಾಗಿದೆ ಎಂದು ರಾಜ್ಯ ಉಪಾಧ್ಯಕ್ಷ ಲಿಂಗೇಗೌಡ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ರಾಜ್ಯದಲ್ಲಿ ಉಪ ಚುನಾವಣೆ ನಡೆಯುತ್ತಿರುವ ಎಲ್ಲಾ 15 ವಿಧಾನಸಭಾ ಕ್ಷೇತ್ರಗಳಲ್ಲಿಯೂ ಕರ್ನಾಟಕ ರಾಷ್ಟ್ರೀಯ ಪಕ್ಷದ ವತಿಯಿಂದ ಅಭ್ಯರ್ಥಿಗಳು ಕಣಕ್ಕಿಳಿಯಲಿದ್ದಾರೆ ಎಂದು ಲಿಂಗೇಗೌಡ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಮಂಡ್ಯ ಕೆ.ಆರ್.ಪೇಟೆ ವಿಧಾನಸಭಾ ಕ್ಷೇತ್ರದ ಕೆ.ಆರ್.ಎಸ್ ಪಕ್ಷದ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿರುವ ಶಂಕರೇಗೌಡ ಮಾತನಾಡಿ ಭ್ರಷ್ಟಾಚಾರ ಮುಕ್ತವಾದ ಪಾರದರ್ಶಕ ಜನಪರ ಆಡಳಿತ ನೀಡಲು ಈ ಭಾರಿ ತಮ್ಮನ್ನು ಬೆಂಬಲಿಸಲು ಮನವಿ ಮಾಡಿದರಲ್ಲದೇ ತಾಲ್ಲೂಕಿನಲ್ಲಿ ನಡೆಯುತ್ತಿರುವ ಅನ್ಯಾಯ, ಅಕ್ರಮಗಳ ವಿರುದ್ಧ ಬೀದಿಗಿಳಿದು ಹೋರಾಟ ನಡೆಸುವುದಾಗಿ ಶಂಕರೇಗೌಡ ಘೋಷಿಸಿದರು.
ಇದೇ ಸಂದರ್ಭದಲ್ಲಿ ಕರ್ನಾಟಕ ರಾಷ್ಟ್ರೀಯ ಪಕ್ಷದ ಜಿಲ್ಲಾಧ್ಯಕ್ಷ ಸಿ.ಎಸ್.ವೆಂಕಟೇಶ್, ತಾಲೂಕು ರೈತ ಘಟಕದ ಅಧ್ಯಕ್ಷ ಮಾವಿನಕೆರೆ ಗೋವಿಂದೇಗೌಡ, ಯುವಘಟಕದ
ಅಧ್ಯಕ್ಷ ಸಂತೇಬಾಚಹಳ್ಳಿ ಮಂಜುನಾಥ್, ಟೌನ್ ಘಟಕದ ಅಧ್ಯಕ್ಷ ಮಂಜುನಾಥ, ಕಿಕ್ಕೇರಿ ಹೋಬಳಿ ಘಟಕದ ಅಧ್ಯಕ್ಷ ಮೋಹನಕುಮಾರ್, ಬೂಕನಕೆರೆ ಹೋಬಳಿ ಅಧ್ಯಕ್ಷ ಪುಟ್ಟರಾಜ, ಕಸಬಾ ಹೋಬಳಿ ಅಧ್ಯಕ್ಷ ಲೋಕೇಶ್ ಮತ್ತಿತರರು ಉಪಸ್ಥಿತರಿದ್ದರು.

Share

About Bora nayak BIG TV NEWS, Mandya

Check Also

ರಾಜ್ಯ ಸರ್ಕಾರದಿಂದ ರೈತ ಸಮುದಾಯಕ್ಕೆ `ಶುಭಸುದ್ದಿ

ಮಂಡ್ಯ : ರಾಜ್ಯ ಸರ್ಕಾರವು ರೈತರಿಗೆ ಸಿಹಿಸುದ್ದಿ ನೀಡಲು ಮುಂದಾಗಿದ್ದು, ರಾಜ್ಯದಲ್ಲಿ ಯಶಸ್ವಿನಿ ಯೋಜನೆಯನ್ನು ಮತ್ತೆ ಜಾರಿಗೆ ತರಲು ಚಿಂತನೆ …

Leave a Reply

Your email address will not be published. Required fields are marked *

error: Content is protected !!