Hiring Reporter’s For more Information Contact Above Number 876 225 4007 . Program producer
Home / Breaking News / ಹುಬ್ಬಳ್ಳಿಯಲ್ಲಿ ಬ್ಲಾಕ್ ಅಧ್ಯಕ್ಷರುಗಳ ಸಭೆ

ಹುಬ್ಬಳ್ಳಿಯಲ್ಲಿ ಬ್ಲಾಕ್ ಅಧ್ಯಕ್ಷರುಗಳ ಸಭೆ

Spread the love

ಹುಬ್ಬಳ್ಳಿ; ಧಾರವಾಡ ಗ್ರಾಮೀಣ ಜಿಲ್ಲಾ ಕಾಂಗ್ರೆಸ್ ಸಮಿತಿಯ ವ್ಯಾಪ್ತಿಗೆ ಬರುವ ಬ್ಲಾಕ್ ಅಧ್ಯಕ್ಷರುಗಳ ಸಭೆಯನ್ನು ಪಶ್ಚಿಮ ಪದವೀಧರ ಕ್ಷೇತ್ರದ ಚುನಾವಣೆ ದೃಷ್ಟಿಯಿಂದ ಹುಬ್ಬಳ್ಳಿಯ ಧಾರವಾಡ ಗ್ರಾಮೀಣ ಜಿಲ್ಲಾ ಕಾಂಗ್ರೆಸ್ ಸಮಿತಿಯ ಕಚೇರಿಯಲ್ಲಿ ನಡೆಸಲಾಯಿತು.

ಈ ಸಂದರ್ಭದಲ್ಲಿ ಪಶ್ಚಿಮ ಪದವೀಧರ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳಾದ ಡಾ.ಆರ್.ಎಮ್.ಕುಬೇರಪ್ಪನವರು ಚುನಾವಣೆಯ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನೀಡಿ ತಮ್ಮ ಗೆಲುವಿಗೆ ಶ್ರಮಿಸಬೇಕೆಂದು ಕೋರಿದರು.

ಅಧ್ಯಕ್ಷತೆಯನ್ನು ವಹಿಸಿದ್ದ ಧಾರವಾಡ ಗ್ರಾಮೀಣ ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಅನಿಲ್ ಕುಮಾರ್ ಪಾಟೀಲ್ ರವರು ಮಾತನಾಡಿ ನಮ್ಮ ಅಭ್ಯರ್ಥಿ ಮಾನ್ಯ ಕುಬೇರಪ್ಪನವರು ಸತತವಾಗಿ ಪದವೀಧರರ ಜೊತೆ ಒಡನಾಟದಲ್ಲಿದ್ದು ಈ ಬಾರಿ ಇವರ ಗೆಲುವು ಶತಸಿದ್ದ ಎಂದರು.ಬ್ಲಾಕ್ ಅಧ್ಯಕ್ಷರುಗಳು ಹಾಗೂ ಮುಖಂಡರುಗಳು ಮುಂತಾದವರು ಉಪಸ್ಥಿತರಿದ್ದರು.

Check Also

ವಾಣಿಜ್ಯ ನಗರದಲ್ಲಿ ಹೆಚ್ಚಾಗುತ್ತಿರುವುದು ಬೈಕ್ ಕಳ್ಳತನ… ಸಾರ್ವಜನಿಕರೇ ಎಚ್ಚರ ಎಚ್ಚರ

Spread the loveಹುಬ್ಬಳ್ಳಿ: ನಗರದಲ್ಲಿ ಮನೆಗಳ ಮುಂದೆ ಹಾಗೂ ಪಾರ್ಕಿಂಗ್ ಜಾಗದಲ್ಲಿ ಪಾರ್ಕ್ ಮಾಡಿದ ದ್ವಿಚಕ್ರಗಳ ವಾಹನಗಳನ್ನು ಕಳ್ಳತನ ಮಾಡುತ್ತಿದ್ದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Hiring Reporter’s For more Information Contact Above Number 876 225 4007 . Program producer
error: Content is protected !!