Breaking News
Hiring Reporter’s For more Information Contact Above Number 876 225 4007 . Program producer
Home / Breaking News / ಹಿರೆಕೇರೂರ ತಾಲ್ಲೂಕಿಗೆ ಹೆಚ್ಚಿನ ಅನುದಾನ: ಸಿಎಂ.‌

ಹಿರೆಕೇರೂರ ತಾಲ್ಲೂಕಿಗೆ ಹೆಚ್ಚಿನ ಅನುದಾನ: ಸಿಎಂ.‌

ಹಾವೇರಿ: ಹಿರೆಕೇರೂರು ತಾಲೂಕಿಗೆ ಹೆಚ್ಚಿನ ಅನುದಾನ ನೀಡಿ‌ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗುವುದು ಎಂದು‌ ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದರು.
ಇಂದು ಹಿರೇಕೆರೂರಿನ ಕ್ರೀಡಾಂಗಣದಲ್ಲಿ, ಹಿರೇಕೆರೂರು ಹಾಗೂ ರಟ್ಟಿಹಳ್ಳಿ ತಾಲೂಕಿನಲ್ಲಿ ರಾಜ್ಯ ಸರ್ಕಾರದಿಂದ ಕೈಗೊಳ್ಳಲಾಗಿತ್ತಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕು ಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು,
ಲೋಕೋಪಯೋಗಿ ಇಲಾಖೆ ವತಿಯಿಂದ 85.19ಕೋಟಿ ವೆಚ್ಚದಲ್ಲಿ 20 ಕಾಮಗಾರಿ, ಜಲಸಂಪನ್ಮೂಲ ಹಾಗೂ ನೀರಾವರಿ ನಿಗಮದಿಂದ 25 ಕೋಟಿ ವೆಚ್ಚದಲ್ಲಿ ತುಂಗಾ ಮೇಲ್ದಂಡೆ ಯೋಜನೆಯ ಕಟ್ ಕವರ್ (ಆರ್ಚ ಟೈಪ್ ) ನಿರ್ಮಾಣ, ಪಂಚಾಯಿತ್ ರಾಜ್ಯ ಇಂಜಿನೀಯರಿಂಗ್ ಇಲಾಖೆಯಿಂದ‌ 9.45 ಕೋಟಿ ವೆಚ್ಚದ 13 ಕಾಮಗಾರಿಗಳು, ಸಮಾಜಕಲ್ಯಾಣ ಇಲಾಖೆಯ ಪರಿಶಿಷ್ಟ ವರ್ಗಗಳ ಇಲಾಖೆಯಿಂದ 1.56 ಕೋಟಿ ವೆಚ್ಚದಲ್ಲಿ ಒಂದು ಕಾಮಾಗರಿಗೆ ಶಂಕು‌ಸ್ಥಾಪನೆ ಸಂಸ್ಥಾಪನೆ ಮಾಡಲಾಗಿದೆ‌. ಈ ಕಾಮಗಾರಿಗಳನ್ನು ಶೀಘ್ರವಾಗಿ ಪೂರ್ಣಗೊಳಿಸಿ ಲೋಕಾರ್ಪಣೆ ಮಾಡಲಾಗುವುದು ಎಂದು‌ ಹೇಳಿದರು.
ಗೃಹ, ಸಹಕಾರ ಮತ್ತು ಕೃಷಿ ಮಾರುಕಟ್ಟೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಸವರಾಜ ಬೊಮ್ಮಾಯಿ, ಕರ್ನಾಟಕ ಉಗ್ರಾಣ ನಿಗಮದ ಅಧ್ಯಕ್ಷ ಯು.ಬಿ.ಬಣಕಾರ, ಜಿ.ಪಂ.ಅಧ್ಯಕ್ಷ ಎಸ್.ಕೆ.ಕರಿಯಣ್ಣನವರ, ಹಾವೇರಿ ಸಂಸದ ಶಿವಕುಮಾರ ಉದಾಸಿ, ಶಿವಮೊಗ್ಗ ಸಂಸದ.ಬಿ.ವೈ.ರಾಘವೇಂದ್ರ, ಸ್ಥಳೀಯ ನಾಯಕರು ಉಪಸ್ಥಿತರಿದ್ದರು.

Share

About Vijayalakshmi

Check Also

ಡಿಕೆಶಿ ವಿರುದ್ಧ ಯಡಿಯೂರಪ್ಪ ಹೊಸ ಬಾಂಬ್

ದಾವಣಗೆರೆ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿರುದ್ಧ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಸ್ಪೋಟಕ ಆರೋಪ ಮಾಡಿದ್ದಾರೆ.ಕೆಪಿಸಿಸಿ ಅಧ್ಯಕ್ಷ ಡಿ.ಕೆ. …

Leave a Reply

Your email address will not be published. Required fields are marked *

error: Content is protected !!