Hiring Reporter’s For more Information Contact Above Number 876 225 4007 . Program producer
Home / Breaking News / ಮಾತೃಭಾಷೆಗೆ ಮೊದಲ ಆದ್ಯತೆ ಸಿಗಲಿ’

ಮಾತೃಭಾಷೆಗೆ ಮೊದಲ ಆದ್ಯತೆ ಸಿಗಲಿ’

Spread the love

ರಾಮನಗರ: ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ಮಕ್ಕಳ ಈ ಸಾಧನೆ ಅವರ ಭವ್ಯ ಭವಿಷ್ಯದ ಅಡಿಗಲ್ಲಾಗಿದೆ. ಬಹುಭಾಷಾ ಕಲಿಕೆಯ ಸಂದರ್ಭದಲ್ಲಿಯೂ ಮಾತೃಭಾಷೆಗೆ ಮೊದಲ ಆದ್ಯತೆಯನ್ನು ನೀಡಿ ಭವಿಷ್ಯ ರೂಪಿಸಿಕೊಳ್ಳುವುದರ ನಮ್ಮ ತನ ಉಳಿಸಿಕೊಳ್ಳಬೇಕು ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಸಿಂ.ಲಿಂ. ನಾಗರಾಜು ತಿಳಿಸಿದರು.

ಮರಿದೇವರು ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ 2019-2020ನೇ ಸಾಲಿನ ಸಂಕಷ್ಟ ಕಾಲದಲ್ಲಿ ಪರೀಕ್ಷೆಯಲ್ಲಿ ಕನ್ನಡದಲ್ಲಿ ನೂರಕ್ಕೆ ನೂರರಷ್ಟು ಅಂಕಗಳನ್ನು ಪಡೆದ ರಾಮನಗರ ತಾಲ್ಲೂಕಿನ ವಿದ್ಯಾರ್ಥಿಗಳಿಗೆ ಅಭಿನಂದನಾ ಸಮಾರಂಭದಲ್ಲಿ ಅವರು ಮಾತನಾಡಿದರು. ಕಸಾಪ ತಾಲ್ಲೂಕು ಘಟಕದ ಅಧ್ಯಕ್ಷ ಬಿ.ಟಿ ದಿನೇಶ್ ಬಿಳಗುಂಬ ಮಾತನಾಡಿ, “ಕೊರೊನಾ ಕಾರಣದಿಂದ ಕನ್ನಡ ಕಾರ್ಯಕ್ರಮಗಳು ನಿಂತು ಹೋದ ಅನುಭವ ಆದಂತಾಗಿತ್ತು.

ಆದರೆ ವಿದ್ಯಾರ್ಥಿಗಳ ಈ ಪ್ರತಿಭಾ ಪುರಸ್ಕಾರದ ಮೂಲಕ ಮತ್ತೊಮ್ಮೆ ಜೀವತುಂಬಿದಂತಾಗಿದೆ. ಇಂತಹ ಹತ್ತು ಹಲವಾರು ಕಾರ್ಯಕ್ರಮಗಳಲ್ಲಿ ಪರಿಷತ್ತು ಕ್ರಿಯಾಶೀಲವಾಗಿರಲು ಪರಿಷತ್ತಿನ ಪದಾಧಿಕಾರಿಗಳ ಪರಿಶ್ರಮವೇ ನನ್ನ ಶಕ್ತಿ ಎಂದರು.

ಜಿಲ್ಲಾ ಪ್ರೌಢಶಾಲಾ ಸಹಶಿಕ್ಷಕರ ಸಂಘದ ಅಧ್ಯಕ್ಷ ಸಿ. ರಾಜಶೇಖರ್ ಮಾತನಾಡಿ, ಎಂದಿಗಿಂತ ಈ ವರ್ಷ ಹೆಚ್ಚಿನ ಸಂಖ್ಯೆಯಲ್ಲಿ ಹೆಣ್ಣುಮಕ್ಕಳೇ ಉತ್ತಮ ಫಲಿತಾಂಶ ಪಡೆದಿದ್ದಾರೆ. ಈ ಮಕ್ಕಳು ತಾಂತ್ರಿಕ ಮತ್ತು ವೈದ್ಯಕೀಯ ಶಿಕ್ಷಣಕ್ಕೆ ಮಾತ್ರ ಒಲವನ್ನು ತೋರಿಸದೇ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಯಶಸ್ಸುನ್ನು ಪಡೆದು ಸಮಾಜದ ಅತ್ಯುನ್ನತ ಹುದ್ದೆಗಳನ್ನಲಂಕರಿಸಬೇಕು. ಸಮಾಜದ ಎಲ್ಲಾ ಕ್ಷೇತ್ರಗಳಲ್ಲೂ ವ್ಯಾಪಿಸಿರುವ ಭ್ರಷ್ಟಾಚಾರವನ್ನು ತೊಡೆದು ಹಾಕುವ ಸಮಾಜಮುಖಿ ಅಧಿಕಾರಿಗಳಾಗಿ ನಾಡು, ನುಡಿಗೆ ಗೌರವ ತರಬೇಕು ಎಂದು ಆಶಿಸಿದರು.

ಕಸಾಪ ಚನ್ನಪಟ್ಟಣ ತಾಲ್ಲೂಕು ಘಟಕದ ಅಧ್ಯಕ್ಷ ಮತ್ತಿಕೆರೆ ಚೆಲುವರಾಜು ಹಾಗೂ ವೀರಭದ್ರ ಸ್ವಾಮಿ ಸಾಧಕ ವಿದ್ಯಾರ್ಥಿಗಳನ್ನು ಅಭಿನಂದಿದರು. ಇಬ್ಬರು ಉತ್ತಮ ಕನ್ನಡ ಶಿಕ್ಷಕರಾದ ರವಿಕುಮಾರ್ ಮತ್ತು ವಿದ್ಯಾಶ್ರೀ 33 ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಹಾಗೂ ಇಬ್ಬರು ಪಿಯುಸಿ ವಿದ್ಯಾರ್ಥಿಗಳಿಗೆ ಅಭಿನಂದಿಸಲಾಯಿತು. ಕನ್ನಡ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳು ಇದ್ದರು.

Check Also

ತಮಿಳು ಚಿತ್ರರಂಗದ ಖ್ಯಾತ ನಟ ಆತ್ಮಹತ್ಯೆಗೆ ಶರಣು

Spread the loveಚೆನ್ನೈ: ಕೌಟುಂಬಿಕ ಕಲಹಕ್ಕೆ ಬೇಸತ್ತು ತಮಿಳು ಚಿತ್ರರಂಗದ ಉದಯೋನ್ಮುಖ ನಟ ತೆನ್ನರಸು ಆತ್ಮಹತ್ಯೆಗೆ ಶರಣಾಗಿದ್ದಾರೆ. 2012ರಲ್ಲಿ ಬಿಡುಗಡೆಯಾಗಿದ್ದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Hiring Reporter’s For more Information Contact Above Number 876 225 4007 . Program producer
error: Content is protected !!