Hiring Reporter’s For more Information Contact Above Number 876 225 4007 . Program producer
Home / Breaking News / ಮೈಸೂರು ಡಿಸಿ ದಿಢೀರ್ ವರ್ಗ : ಅ.14ಕ್ಕೆ ವಿಚಾ​ರ​ಣೆ

ಮೈಸೂರು ಡಿಸಿ ದಿಢೀರ್ ವರ್ಗ : ಅ.14ಕ್ಕೆ ವಿಚಾ​ರ​ಣೆ

Spread the love

ಬೆಂಗಳೂರು: ಮೈಸೂರು ಜಿಲ್ಲಾಧಿಕಾರಿ ಹುದ್ದೆಯಿಂದ ತಮ್ಮನ್ನು ಅವಧಿ ಪೂರ್ವ ವರ್ಗಾವಣೆ ಮಾಡಿರುವ ಸರ್ಕಾರದ ಕ್ರಮ ಪ್ರಶ್ನಿಸಿ ಬಿ. ಶರತ್‌ ಸಲ್ಲಿಸಿರು​ವ ಅರ್ಜಿ ಕುರಿತು ವಾದ ಮಂಡಿಸಲು ಸರ್ಕಾರ ಕಾಲಾವಕಾಶ ಕೋರಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಆಡಳಿತಾತ್ಮಕ ನ್ಯಾಯಮಂಡಳಿ (ಸಿಎಟಿ) ಅ.14ಕ್ಕೆ ವಿಚಾ​ರಣೆ ಮುಂದೂ​ಡಿ​ದೆ. ಬುಧವಾರ ನಡೆದ ವಿಚಾರಣೆ ವೇಳೆ ಹಾಜರಾಗಿದ್ದ ಸರ್ಕಾರದ ಪರ ವಕೀಲರು, ಅರ್ಜಿಗೆ ಸಂಬಂಧ ರಾಜ್ಯ ಅಡ್ವೋಕೇಟ್‌ ಜನರಲ್‌ ವಾದ ಮಂಡಿಸಲಿದ್ದಾರೆ. ಹೀಗಾಗಿ ಮತ್ತಷ್ಟುಕಾಲಾವಕಾಶ ನೀಡಬೇಕು ಎಂಬ ಮನವಿ ಪುರಸ್ಕರಿಸಿದ ನ್ಯಾಯಮಂಡಳಿ ವಿಚಾರಣೆಯನ್ನು ಮುಂದೂಡಿದೆ.

‘ಕಳೆದ ಆಗಸ್ಟ್‌ 28ರಂದು ಮೈಸೂರು ಜಿಲ್ಲಾ​ಧಿಕಾರಿ ಹುದ್ದೆಗೆ ನಮ್ಮನ್ನು ನಿಯೋಜಿಸಿ ಸರ್ಕಾರ ಆದೇಶ ಹೊರಡಿಸಿತ್ತು. ನಂತರ ಸೂಕ್ತ ಕಾರಣ ನೀಡದೆ ಸೆ.28ಕ್ಕೆ ವರ್ಗಾವಣೆ ಮಾಡಿದೆ. ಆ ಜಾಗಕ್ಕೆ ರೋಹಿಣಿ ಸಿಂಧೂರಿ ಅವರನ್ನು ನಿಯೋಜಿಸಿದೆ. ಸೂಕ್ತ ಕಾರಣ ನೀಡದೆ, ಏಕಾಏಕಿ ನಮ್ಮನ್ನು ವರ್ಗಾವಣೆ ಮಾಡಿರುವ ಸರ್ಕಾರದ ಆದೇಶ ಕಾನೂನು ಬಾಹಿರವಾಗಿದೆ. ಆದ್ದರಿಂದ ವಗಾವಣೆ ಆದೇಶ ರದ್ದುಗೊಳಿಸಬೇಕು’ ಎಂದು ಕೋರಿ ಬಿ.ಶರತ್‌ ಸಿಎಟಿಯಲ್ಲಿ ಅರ್ಜಿ ಸಲ್ಲಿಸಿದ್ದರು.

ಈ ಹಿಂದೆ ವಿಚಾರಣೆ ನಡೆಸಿದ್ದ ಸಿಎಟಿ, ಕೇವಲ 30 ದಿನಕ್ಕೆ ಅರ್ಜಿದಾರರನ್ನು ಮೈಸೂರು ಜಿಲ್ಲಾ​ಧಿಕಾರಿ ಹುದ್ದೆಯಿಂದ ಏಕೆ ವರ್ಗಾಯಿಸಲಾಗಿದೆ ಎಂದು ಸರ್ಕಾರವನ್ನು ಪ್ರಶ್ನಿಸಿತ್ತು. ನಂತರ ಅರ್ಜಿ ಸಂಬಂಧ ಉತ್ತರಿಸಲು ಸೂಚಿಸಿ ಸರ್ಕಾರಕ್ಕೆ ನೋಟಿಸ್‌ ಜಾರಿ ಮಾಡಿತ್ತು.

Check Also

ಬ್ಯಾಂಕ್‌ಗಳ ಸಾಲಗಳ ಮೇಲಿನ ಚಕ್ರಬಡ್ಡಿ ಮನ್ನಾ

Spread the loveನವದೆಹಲಿ: ನವರಾತ್ರಿ ಸಂದರ್ಭದಲ್ಲಿ ಸಾಲಗಾರರಿಗೆ ಕೇಂದ್ರ ಸರ್ಕಾರ ಶುಭ ಸುದ್ದಿ ನೀಡಿದೆ. ಮಾರ್ಚ್ 1ರಿಂದ ಆಗಸ್ಟ್ 31ರವರೆಗಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Hiring Reporter’s For more Information Contact Above Number 876 225 4007 . Program producer
error: Content is protected !!