Breaking News
Hiring Reporter’s For more Information Contact Above Number 876 225 4007 . Program producer
Home / Breaking News / ಹಣದಾಸೆಗೆ ತನ್ನನ್ನು ಬಿಜೆಪಿಗೆ ಮಾರಿಕೊಂಡ ನಾರಾಯಣಗೌಡ: ಡಿ. ರಮೇಶ ಕಿಡಿ.

ಹಣದಾಸೆಗೆ ತನ್ನನ್ನು ಬಿಜೆಪಿಗೆ ಮಾರಿಕೊಂಡ ನಾರಾಯಣಗೌಡ: ಡಿ. ರಮೇಶ ಕಿಡಿ.

ಮಂಡ್ಯ : ಜೆಡಿಎಸ್ ಪಕ್ಷಕ್ಕೆ ಮೋಸಮಾಡಿ, ಕುಮಾರಸ್ವಾಮಿ ಅವರ ನೇತೃತ್ವದ ಮೈತ್ರಿ ಸರ್ಕಾರವನ್ನು ಪದಚ್ಯುತಗೊಳಿಸಿದ ಅನರ್ಹ ಶಾಸಕ ನಾರಾಯಣಗೌಡ ಅವರು ಹಣದಾಸೆಗೆ ತಮ್ಮನ್ನು ಬಿಜೆಪಿ ಪಕ್ಷಕ್ಕೆ ಮಾರಿಕೊಂಡಿದ್ದಾರೆ ಎಂದು ಜಿಲ್ಲಾ ಜೆಡಿಎಸ್ ಅಧ್ಯಕ್ಷ ಡಿ.ರಮೇಶ್ ಅವರು ಅನರ್ಹ ಶಾಸಕ ನಾರಾಯಣಗೌಡ ಅವರ ವಿರುದ್ಧ ಕಿಡಿ ಕಾರಿದರು.
ಮಂಡ್ಯ ಜಿಲ್ಲೆಯ ಬೂಕನಕೆರೆ ಗ್ರಾಮದಲ್ಲಿಂದ ಆಯೋಜಿಸಲಾದ ಜೆಡಿಎಸ್ ಕಾರ್ಯಕರ್ತರ ಸಭೆ ಹಾಗೂ ಸಾಲಮನ್ನಾ ಅರಿವು ಸಭೆಯ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಅವರು, ತಾಲ್ಲೂಕಿನ ಎಲ್ಲಾ ಹೋಬಳಿ ಕೇಂದ್ರಗಳಲ್ಲಿ ಬಾಡೂಟದ ಕಾರ್ಯಕ್ರಮಗಳನ್ನು ಆಯೋಜಿಸಿ ಹಣವನ್ನು ನೀರಿನಂತೆ ಚೆಲ್ಲಿ ರಾಜಕೀಯ ವ್ಯಭಿಚಾರ ನಡೆಸುತ್ತಿದ್ದಾರೆ ಎಂದು ರಮೇಶ್ ಆಕ್ರೋಶ ವ್ಯಕ್ತಪಡಿಸಿದರು.
ತಾಲೂಕು ಜೆಡಿಎಸ್ ಅಧ್ಯಕ್ಷ ಜಾನಕೀರಾಂ, ಜಿಲ್ಲಾ ಪಂಚಾಯತ ಉಪಾಧ್ಯಕ್ಷೆ ಗಾಯತ್ರಿರೇವಣ್ಣ, ಸದಸ್ಯರಾದ ಬಿ.ಎಲ್.ದೇವರಾಜು, ಹೆಚ್.ಟಿ.ಮಂಜು, ರಾಮದಾಸು, ಮುಖಂಡರಾದ ಬಸ್ ಕೃಷ್ಣೇಗೌಡ, ಹೆಳವೇಗೌಡ, ಅಕ್ಕಿಹೆಬ್ಬಾಳು ರಘು, ಕುರುಬಳ್ಳಿ ನಾಗೇಶ್, ಎಂ.ಡಿ.ದೊಡ್ಡಸ್ವಾಮಿಗೌಡ ಸೇರಿದಂತೆ ನೂರಾರು ಜನರು ಭಾಗವಹಿಸಿದ್ದರು.
ತಾಲ್ಲೂಕಿನಲ್ಲಿ 22ಸಾವಿರ ರೈತ ಕುಟುಂಬಗಳ 100ಕೋಟಿ ರೂಪಾಯಿಗಳಿಗೂ ಹೆಚ್ಚಿನ ರೈತರ ಸಾಲವನ್ನು ಮನ್ನಾ ಮಾಡಿದ ಕುಮಾರಸ್ವಾಮಿ ಹಾಗೂ ರೈತನಾಯಕ ಹೆಚ್.ಡಿ.ದೇವೇಗೌಡರ ನೇತೃತ್ವದ ಜೆಡಿಎಸ್ ಪಕ್ಷದ ಅಧಿಕೃತ ಅಭ್ಯರ್ಥಿಯನ್ನು ಮುಂಬರುವ ಉಪಚುನಾವಣೆಯಲ್ಲಿ ಗೆಲ್ಲಿಸಿ ಪಕ್ಷದ್ರೋಹಿ ನಾರಾಯಣಗೌಡರಿಗೆ ತಕ್ಕಪಾಠ ಕಲಿಸಬೇಕು ಎಂದು ಬಿ.ಎಲ್.ದೇವರಾಜು ಕೈಮುಗಿದು ಮನವಿ ಮಾಡಿದರು.

Share

About Bora nayak BIG TV NEWS, Mandya

Check Also

ಹಿರಿಯ ಅಧಿಕಾರಿ ಕಿರುಕುಳಕ್ಕೆ ಬೇಸತ್ತು ಡೆತ್ ನೋಟ್ ಬರೆದಿಟ್ಟು ವೈದ್ಯಕೀಯ ಸಿಬ್ಬಂದಿ ಆತ್ಮಹತ್ಯೆಗೆ ಯತ್ನ…!

ಹುಬ್ಬಳ್ಳಿ: ವೈದ್ಯಕೀಯ ಸಿಬ್ಬಂದಿಯೊಬ್ಬರು ಡೇತ್‌ ನೋಟ್ ಬರೆದಿಟ್ಟು, ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಹುಬ್ಬಳ್ಳಿ ತಾಲೂಕಿನ ನೂಲ್ವಿಯ ಪ್ರಾಥಮಿಕ …

Leave a Reply

Your email address will not be published. Required fields are marked *

error: Content is protected !!