Hiring Reporter’s For more Information Contact Above Number 876 225 4007 . Program producer
Home / Breaking News / ಎಸ್.ಪಿ.ಬಿ ಆರೋಗ್ಯದಲ್ಲಿ ಚೇತರಿಕೆ ಇಲ್ಲ: ಇಂದು ಎಸ್​ಪಿಬಿ ಪತ್ನಿ ಡಿಸ್ಚಾರ್ಜ್

ಎಸ್.ಪಿ.ಬಿ ಆರೋಗ್ಯದಲ್ಲಿ ಚೇತರಿಕೆ ಇಲ್ಲ: ಇಂದು ಎಸ್​ಪಿಬಿ ಪತ್ನಿ ಡಿಸ್ಚಾರ್ಜ್

Spread the love

ಕೊರೊನಾಗೆ ತುತ್ತಾಗಿ ಕಳೆದ ಹದಿನೇಳು ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಎಸ್​ಪಿಬಿ ಆರೋಗ್ಯದಲ್ಲಿ ಯಾವುದೇ ಚೇತರಿಕೆ ಕಂಡು ಬಂದಿಲ್ಲ ಅಂತ ನಿನ್ನೆಯಷ್ಟೆ ಅವರ ಪುತ್ರ ಚರಣ್​ ಮಾಹಿತಿ ನೀಡಿದ್ರು. ಆಸ್ಪತ್ರೆ ಮೂಲಗಳು ಸಹ ಅವರ ಆರೋಗ್ಯದಲ್ಲಿ ಚೇತರಿಕೆ ಕಾಣಿಸುತ್ತಿಲ್ಲ ಅಂದಿವೆ. ಇನ್ನೊಂದೆಡೆ ಎಸ್​ಪಿಬಿ ಪತ್ನಿ ಕೂಡ ಕೊರೊನಾ ಸೋಂಕಿನಿಂದ ಬಳಲುತ್ತಿದ್ದು, ಚೇತರಿಕೆ ಕಂಡು ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್​ ಆಗಲಿದ್ದಾರೆ.

ಆಗಸ್ಟ್ 5 ರಂದು ಚೆನ್ನೈನ ಎಂಜಿಎಂ ಆಸ್ಪತ್ರೆಗೆ ಅಡ್ಮಿಟ್ ಆಗಿದ್ದ ಎಸ್​ಪಿಬಿ, ಆರಂಭದಲ್ಲಿ ಕೊಂಚ ಚೇತರಿಕೆ ಕಂಡಿದ್ದರು. ಕಳೆದ ಏಳು ದಿನಗಳಿಂದ ಅವರನ್ನು ಐಸಿಯು ವಾರ್ಡ್​ನಲ್ಲಿಟ್ಟು ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ. ಶ್ವಾಸಕೋಶಗಳು ತೀವ್ರವಾಗಿ ಹಾನಿಗೊಳಗಾಗಿರುವ ಹಿನ್ನೆಲೆಯಲ್ಲಿ ಎಸ್.ಪಿ.ಬಿ ಆರೋಗ್ಯದಲ್ಲಿ ಚೇತರಿಕೆ ಕಾಣುತ್ತಿಲ್ಲ ಅಂತ ಹೇಳಲಾಗ್ತಿದೆ.

ಹೀಗಾಗಿ ವೈದ್ಯರು ಎಕ್ಮೋ ಮೆಷಿನ್ ಅಳವಡಿಸಿ ಚಿಕಿತ್ಸೆ ನೀಡ್ತಿದ್ದಾರೆ. ಸದ್ಯ ಎಸ್​ಪಿಬಿ ಅವರ ಕಂಡೀಷನ್​ ಕ್ರಿಟಿಕಲ್​ ಆಗಿದ್ದು, ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ವೈದ್ಯರ ತಂಡದಿಂದ ಚಿಕಿತ್ಸೆ ಮುಂದುವರಿದಿದೆ. ಇನ್ನು, ಎಸ್​ಪಿಬಿ ಆರೋಗ್ಯದ ಏರುಪೇರಿನ ಸುದ್ದಿಯಿಂದ ಅವರ ಆಪ್ತರು, ಅಭಿಮಾನಿಗಳಲ್ಲಿ ಆತಂಕ ಮನೆಮಾಡಿದೆ.

Check Also

ತಮಿಳು ಚಿತ್ರರಂಗದ ಖ್ಯಾತ ನಟ ಆತ್ಮಹತ್ಯೆಗೆ ಶರಣು

Spread the loveಚೆನ್ನೈ: ಕೌಟುಂಬಿಕ ಕಲಹಕ್ಕೆ ಬೇಸತ್ತು ತಮಿಳು ಚಿತ್ರರಂಗದ ಉದಯೋನ್ಮುಖ ನಟ ತೆನ್ನರಸು ಆತ್ಮಹತ್ಯೆಗೆ ಶರಣಾಗಿದ್ದಾರೆ. 2012ರಲ್ಲಿ ಬಿಡುಗಡೆಯಾಗಿದ್ದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Hiring Reporter’s For more Information Contact Above Number 876 225 4007 . Program producer
error: Content is protected !!