Breaking News
Hiring Reporter’s For more Information Contact Above Number 876 225 4007 . Program producer
Home / Breaking News / ಕರ್ನಾಟಕ ಉಚ್ಛ ನ್ಯಾಯಾಲಯ ಪೀಠದಲ್ಲಿ ಫೆ. 8 ರಂದು ರಾಷ್ಟ್ರೀಯ ಲೋಕ ಅದಾಲತ್.

ಕರ್ನಾಟಕ ಉಚ್ಛ ನ್ಯಾಯಾಲಯ ಪೀಠದಲ್ಲಿ ಫೆ. 8 ರಂದು ರಾಷ್ಟ್ರೀಯ ಲೋಕ ಅದಾಲತ್.

Spread the love

ಧಾರವಾಡ : ಕರ್ನಾಟಕ ಉಚ್ಛ ನ್ಯಾಯಾಲಯ ಪೀಠದಲ್ಲಿ ಫೆಬ್ರವರಿ 8 ರಂದು ರಾಷ್ಟ್ರೀಯ ಲೋಕ ಅದಾಲತ ಆಯೋಜಿಸಲಾಗಿದೆ. ನ್ಯಾಯಾಲಯದಲ್ಲಿ ಬಾಕಿ ಇರುವ ರಾಜಿ ಆಗಬಹುದಾದ, ಮೋಟಾರ್ ವಾಹನ ಅಪಘಾತ ಪರಿಹಾರದ, ಭೂಸ್ವಾಧೀನ, ವೈವಾಹಿಕ ಅಥವಾ ಜೀವನಾಂಶ, ಕಾನೂನಿನ್ವಯ ರಾಜಿ ಆಗಬಹುದಾದ ಕ್ರಿಮಿನಲ್, ಕಾರ್ಮಿಕ ನಷ್ಟ ಪರಿಹಾರ ಪ್ರಕರಣಗಳನ್ನು ಲೋಕ ಅದಾಲತದಲ್ಲಿ ಪರಿಹರಿಸಿಕೊಳ್ಳಬಹುದು.

ಕರ್ನಾಟಕ ಉಚ್ಛ ನ್ಯಾಯಾಲಯ ಪೀಠದಲ್ಲಿ ಕಾನೂನಿನ್ವಯ ರಾಜಿ ಆಗಬಹುದಾದ ಸಿವಿಲ್ ಮತ್ತು ಕ್ರಿಮಿನಲ್ ಪ್ರಕರಣಗಳಲ್ಲಿ ಹೆಚ್ಚಿನ ಸಂಖ್ಯೆಯ ಪ್ರಕರಣಗಳನ್ನು ಮುಂದಿನ ಲೋಕನ ಅದಾಲತದಲ್ಲಿ ರಾಜಿ ಮಾಡಿಕೊಳ್ಳಬಹುದು.
ಸಾರ್ವಜನಿಕರು, ಕಕ್ಷಿಗಾರರು ಲೋಕ ಅದಾಲತನ ಸದುಪಯೋಗಪಡಿಸಿಕೊಳ್ಳಬೇಕು ಎಂದು ಉಚ್ಛ ನ್ಯಾಯಾಲಯ ಕಾನೂನು ಸೇವಾ ಸಮಿತಿ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Check Also

ಧಾರವಾಡ ಜಿಲ್ಲೆಯ ನೂತನ “ಎಸ್ ಪಿ ಆಗಿ” ಕೃಷ್ಣ ಕಾಂತ ಅಧಿಕಾರ ಸ್ವೀಕಾರ

Spread the loveಧಾರವಾಡ: ಜಿಲ್ಲೆಯ ನೂತನ ಎಸ್ ಪಿ ಆಗಿ ಇಂದು ಕ್ರಷ್ಣ ಕಾಂತ ಅವರು ಅಧಿಕಾರವನ್ನು ವಹಿಸಿಕೊಂಡರು. ಹುಬ್ಬಳ್ಳಿಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Hiring Reporter’s For more Information Contact Above Number 876 225 4007 . Program producer
error: Content is protected !!