Hiring Reporter’s For more Information Contact Above Number 876 225 4007 . Program producer
Home / Breaking News / ಭೂ ಸುಧಾರಣಾ ಕಾಯ್ದೆಗೆ ತಿದ್ದುಪಡೆಗೆ ವಿರೋಧ :ಸಚಿವ ಶೆಟ್ಟರ್ ನಿವಾಸದ ಎದುರು ಪ್ರತಿಭಟನೆ

ಭೂ ಸುಧಾರಣಾ ಕಾಯ್ದೆಗೆ ತಿದ್ದುಪಡೆಗೆ ವಿರೋಧ :ಸಚಿವ ಶೆಟ್ಟರ್ ನಿವಾಸದ ಎದುರು ಪ್ರತಿಭಟನೆ

Spread the love

ಹುಬ್ಬಳ್ಳಿ: ಭೂ ಸುಧಾರಣಾ ಕಾಯ್ದೆಗೆ ತಿದ್ದುಪಡಿ ಮಾಡಿರುವುದನ್ನು ವಿರೋಧಿಸಿ ಭಾರತೀಯ ಕಿಸಾನ್ ಸಂಘದ ಕರ್ನಾಟಕ ಉತ್ತರ ಪ್ರಾಂತ್ಯದ ಪದಾಧಿಕಾರಿಗಳು ಧಾರವಾಡ ಇ ಜಿಲ್ಲಾ ಉಸ್ತುವಾರಿ ಸಚಿವರ ಮನೆ ಮುಂದೆ ಪ್ರತಿಭಟನೆ ನಡೆಸಿದರು.

ಭೂ ಸುಧಾರಣೆ ಕಾಯ್ದೆ ರೈತರ, ಕೃಷಿ ಕಾರ್ಮಿಕರಿಗೆ ಮರಣ ಶಾಸನವಾಗಿದೆ. ವ್ಯವಸಾಯ ಮಾಡಲು ಆಸಕ್ತರಿಗೆ ಭೂಮಿ ಖರೀದಿ ಮಾಡಲು ಅನುಕೂಲವಾಗಲು ತಿದ್ದುಪಡಿ ತರಲಾಗಿದೆ ಎಂದು ಸರ್ಕಾರ ಹೇಳಿದೆ. ಆದರೆ ಭೂ ಸುಧಾರಣೆ ಕಲಂ 79 ಎ.ಬಿ.ಸಿ ಹಾಗೂ ,80 ಗೆ ಇದ್ದ ಅಧಿಕಾರ ಕಡಿತ ಮಾಡಿ 63 ಕಲಂ ಗೆ ನೀಡಲಾಗಿದೆ. ಇದರಿಂದಾಗಿ ಇದು ರೈತರಿಗೆ ಮಾರಕಾಗಿದೆ.

ಕೃಷಿ ಮಾಡುತ್ತಿರುವ ರೈತರು ಕೃಷಿ ಚಟುವಟಿಕೆಯಿಂದ ವಿಮುಖರಾಗುತ್ತಿರುವ ಬಗ್ಗೆ ಹಾಗೂ ಆತ್ಮಹತ್ಯೆಗೆ ಶರಣಾಗುತ್ತಿರುವ ಬಗ್ಗೆ ಪರಿಹಾರ ಹುಡುಕದೇ ಬದಲಾಗಿ ಕಾರ್ಪೋರೆಟ್ ಕಂಪನಿಗಳಿಗೆ, ಬಂಡವಾಳಶಾಹಿಗಳು, ಅಕ್ರಮವಾಗಿ ಹಣ ಗಳಿಸಿದವರು, ಬೃಹತ್ ಕಂಪನಿಗಳ ಹಿತಾಸಕ್ತಿಗೆ ಮಣಿದು ರಾಜ್ಯ ಸರ್ಕಾರ ಭೂ ಸುಧಾರಣೆ ಮಾಡಿರುವುದು ಖಂಡನೀಯ. ಜಿಲ್ಲಾ ಅಧ್ಯಕ್ಷ ವಿವೇಕ ಮೋರೆ ಎಚ್ಚರಿಸಿದರು.

ಪ್ರತಿಭಟನೆಯಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗುರುನಾಥ ಬೀರಣ್ಣವರ, ರಮೇಶ ಕೊರವಿ ಸೇರಿದಂತೆ ಮುಂತಾದವರು ಪಾಲ್ಗೊಂಡಿದ್ದರು.

Check Also

ವಾಣಿಜ್ಯ ನಗರದಲ್ಲಿ ಹೆಚ್ಚಾಗುತ್ತಿರುವುದು ಬೈಕ್ ಕಳ್ಳತನ… ಸಾರ್ವಜನಿಕರೇ ಎಚ್ಚರ ಎಚ್ಚರ

Spread the loveಹುಬ್ಬಳ್ಳಿ: ನಗರದಲ್ಲಿ ಮನೆಗಳ ಮುಂದೆ ಹಾಗೂ ಪಾರ್ಕಿಂಗ್ ಜಾಗದಲ್ಲಿ ಪಾರ್ಕ್ ಮಾಡಿದ ದ್ವಿಚಕ್ರಗಳ ವಾಹನಗಳನ್ನು ಕಳ್ಳತನ ಮಾಡುತ್ತಿದ್ದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Hiring Reporter’s For more Information Contact Above Number 876 225 4007 . Program producer
error: Content is protected !!