Breaking News
Hiring Reporter’s For more Information Contact Above Number 876 225 4007 . Program producer
Home / ಜಿಲ್ಲೆ / ಮೀನು ಮಾರುಕಟ್ಟೆ ಸ್ಥಳಾಂತರಕ್ಕೆ ವಿರೋಧ

ಮೀನು ಮಾರುಕಟ್ಟೆ ಸ್ಥಳಾಂತರಕ್ಕೆ ವಿರೋಧ

 

ಹುಬ್ಬಳ್ಳಿ- ನಗರದ ಗಣೇಶಪೇಟೆಯಲ್ಲಿರುವ ಮೀನು ಮಾರುಕಟ್ಟೆಯನ್ನು ಹೈಟೆಕ್ ಮೀನು ಮಾರುಕಟ್ಟೆ ನಿರ್ಮಾಣ ಹಿನ್ನಲೆಯಲ್ಲಿ ಮೀನು ಮಾರಾಟವನ್ನು ಮಂಟೂರ ರಸ್ತೆಯ ಕೆ.ಬಿ.ನಗರ, ಕರ್ಕಿ ಬಸವೇಶ್ವರ ನಗರದಲ್ಲಿ ಸ್ಥಾಪಿಸಲು ಮುಂದಾಗಿರುವುದು ಖಂಡನೀಯ ಎಂದು ಮಾಜಿ ಪಾಲಿಕೆ ಸದಸ್ಯ ಶಿವಾನಂದ ಮುತ್ತಣ್ಣನವರ ಆಗ್ರಹಿಸಿದ್ದಾರೆ.
ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ಹಲವಾರು ವರ್ಷಗಳಿಂದ ಗಣೇಶಪೇಟೆಯಲ್ಲಿ ಮೀನು ಮಾರಾಟ ಮಾಡಲಾಗುತ್ತಿದ್ದು, ಇದೀಗ ಸ್ಮಾರ್ಟ್ ಸಿಟಿ ಯೋಜನೆಯಡಿಯಲ್ಲಿ 6.12 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ಮೀನು ಮಾರುಕಟ್ಟೆ ನಿರ್ಮಾಣಕ್ಕೆ ಮುಂದಾಗಿದ್ದು ಒಳ್ಳೆಯ ವಿಷಯವಾಗಿದ್ದು, ಆದರೆ ಹಾಲಿ ಇರುವ ಮಾರುಕಟ್ಟೆಯನ್ನು ಜನನಿಬಿಡ ಪ್ರದೇಶಗಳಾದ ಕರ್ಕಿ ಬಸವೇಶ್ವರ ನಗರಕ್ಕೆ ಅಧಿಕಾರಿಗಳು ಸ್ಥಳಾಂತರಿಸುತ್ತಿದ್ದು, ಇದರಿಂದಾಗಿ ಸ್ಥಳೀಯ ನಿವಾಸಿಗಳಿಗೆ ತೊಂದರೆಯಾಗಲಿದೆ. ಅಲ್ಲದೇ ಮೀನು ಮಾಂಸದಿಂದ ಜನರು ಆ ಸ್ಥಳಗಳಲ್ಲಿ ರೈತರಿಗೆ ವ್ಯಾಪಾರಿಗಳಿಗೆ ತೊಂದರೆಯಾಗಲಿದ್ದು, ಅಧಿಕಾರಿಗಳು ಈ ಬಗ್ಗೆ ಕೂಲಂಕುಷವಾಗಿ ಮರು ಚರ್ಚೆ ನಡೆಸಿ ನಗರದ ಹೊರವಲಯದ ಸ್ಥಳಕ್ಕೆ ಮೀನು ಮಾರುಕಟ್ಟೆಯನ್ನು ಸ್ಥಳಾಂತರ ಮಾಡಬೇಕು. ಇಲ್ಲವಾದರೆ ಅಧಿಕಾರಿಗಳ ವಿರುದ್ದ ಉಗ್ರ ಹೋರಾಟ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.

Share

About Shaikh BIG TV NEWS, Hubballi

Check Also

Featured Video Play Icon

ಮಕ್ಕಳ ಶಿಕ್ಷಣಕ್ಕೆ ಕೊಳ್ಳಿ ಇಟ್ಟ ಸೊಸೈಟಿ?? | Children crying to protect their school | BIG TV NEWS

Shaikh BIG TV NEWS, Hubballi See author's posts Share

Leave a Reply

Your email address will not be published. Required fields are marked *

error: Content is protected !!