Breaking News
Hiring Reporter’s For more Information Contact Above Number 876 225 4007 . Program producer
Home / Breaking News / ಉಪಚುನಾವಣೆಯಲ್ಲಿ ಕೆ.ಆರ್.‌ಪೇಟೆ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದ ಪವಾರ್.

ಉಪಚುನಾವಣೆಯಲ್ಲಿ ಕೆ.ಆರ್.‌ಪೇಟೆ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದ ಪವಾರ್.

ಮಂಡ್ಯ: ಕೆ.ಆರ್.ಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ನಡೆಯಲಿರುವ ಉಪಚುನಾವಣೆಯಲ್ಲಿ ಬಿಜೆಪಿಯು ನಿಶ್ಚಿತವಾಗಿ ಖಾತೆ ತೆರೆಯಲಿದೆ ಎಂದು ಮೈಸೂರಿನ ನರಸಿಂಹರಾಜ ಕ್ಷೇತ್ರದ ಮಾಜಿಶಾಸಕ ಮಾರುತಿರಾವ್ ಪವಾರ್ ವಿಶ್ವಾಸ ವ್ಯಕ್ತಪಡಿಸಿದರು.
ಮಂಡ್ಯ ಜಿಲ್ಲೆಯ ‌ ಶೀಳನೆರೆ ಗ್ರಾಮದಲ್ಲಿ ನಡೆದ
ಅನರ್ಹ ಶಾಸಕ ನಾರಾಯಣಗೌಡರ ಅಭಿಮಾನಿಗಳ ಸಭೆಯಲ್ಲಿ ಭಾಗಿಯಾಗಿ ಮಾತನಾಡಿದ ಅವರು, ರಾಜ್ಯದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ತವರಿನಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸುವ ಮೂಲಕ
ಜನ್ಮಭೂಮಿಯ ಅಪೂರ್ವ ಕಾಣಿಕೆಯನ್ನು ಕೃಷ್ಣರಾಜಪೇಟೆ ತಾಲ್ಲೂಕಿನ ಪ್ರಬುದ್ಧ ಮತದಾರರು ನೀಡುತ್ತಾರೆ ಎಂದರು.
ತಾಲೂಕಿನ ಸಮಗ್ರವಾದ
ಅಭಿವೃದ್ಧಿಗಾಗಿ ಕೃಷ್ಣರಾಜಪೇಟೆ ತಾಲ್ಲೂಕಿನ ಜನತೆ ಬಿಜೆಪಿ ಪಕ್ಷದ ಅಭ್ಯರ್ಥಿಗೆ ವಿಜಯಮಾಲೆ ತೊಡಿಸಿ ಹರಸಿ ಆಶೀರ್ವದಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಅನರ್ಹ ಶಾಸಕ ಡಾ.ನಾರಾಯಣಗೌಡ, ತಾಲೂಕು ಪಂಚಾಯಿತಿ ಮಾಜಿಅಧ್ಯಕ್ಷ ಬಿ.ಜವರಾಯಿಗೌಡ, ಆರ್.ಜಗಧೀಶ್, ಚಂದ್ರಮೋಹನ್, ದಯಾನಂದ ಮತ್ತಿತರರು ಉಪಸ್ಥಿತರಿದ್ದರು.

Share

About Vijayalakshmi

Check Also

ಡಿಕೆಶಿ ವಿರುದ್ಧ ಯಡಿಯೂರಪ್ಪ ಹೊಸ ಬಾಂಬ್

ದಾವಣಗೆರೆ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿರುದ್ಧ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಸ್ಪೋಟಕ ಆರೋಪ ಮಾಡಿದ್ದಾರೆ.ಕೆಪಿಸಿಸಿ ಅಧ್ಯಕ್ಷ ಡಿ.ಕೆ. …

Leave a Reply

Your email address will not be published. Required fields are marked *

error: Content is protected !!